Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿಯಂತೆ ಕಾಂಗ್ರೆಸ್ ಯುದ್ಧವನ್ನು...

ಮೋದಿಯಂತೆ ಕಾಂಗ್ರೆಸ್ ಯುದ್ಧವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಲ್ಲ: ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 April 2019 7:12 PM IST
share
ಮೋದಿಯಂತೆ ಕಾಂಗ್ರೆಸ್ ಯುದ್ಧವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಲ್ಲ: ಎಚ್.ಕೆ.ಪಾಟೀಲ್

ಬೆಂಗಳೂರು, ಎ.8: ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಚುನಾವಣಾ ಆಯೋಗ ಚುನಾವಣಾ ಸ್ಪರ್ಧೆಯಿಂದ ಅಮಾನತು ಮಾಡಿದಾಗ ದೇಶದ ಜನತೆಗೆ ಚುನಾವಣಾ ಆಯೋಗದ ಮೇಲೆ ಹೆಚ್ಚಿನ ವಿಶ್ವಾಸ ಮೂಡುತ್ತದೆ ಎಂದು ಕೆಪಿಪಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್‌ಕ್ಲಬ್ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನರೇಂದ್ರ ಮೋದಿ ದೇಶದ ಮಿಲಿಟರಿ ಸಮವಸ್ತ್ರವನ್ನು ಧರಿಸಿ ಬಿಜೆಪಿ ಪಕ್ಷದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಕೂಡಲೇ ಚುನಾವಣೆ ಸ್ಪರ್ಧೆಯಿಂದ ಅಮಾನತು ಮಾಡವ ಮೂಲಕ ಚುನಾವಣಾ ಆಯೋಗ ಸೂಕ್ತ ಸಂದೇಶವನ್ನು ದೇಶದ ಜನತೆಗೆ ತಲುಪಿಸಬೇಕೆಂದು ಆಗ್ರಹಿಸಿದರು.

ನರೇಂದ್ರ ಮೋದಿ ನಿಯಮ ಉಲ್ಲಂಘನೆ ಮಾಡುತ್ತಾ ಬಂದಿದ್ದು, ಯುದ್ಧ, ಸರ್ಜಿಕಲ್ ಸ್ಟ್ರೈಕ್ ಅನ್ನು ಚುನಾವಣಾ ವಿಚಾರ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನೆರೆ ರಾಷ್ಟ್ರಗಳೊಂದಿಗೆ ಯುದ್ಧ ಮಾಡಿದ್ದನ್ನು ಚುನಾವಣಾ ಪ್ರಚಾರವಾಗಿ ಪರಿವರ್ತಿಸಿರಲಿಲ್ಲ. ಬಿಜೆಪಿ ಸೇನೆ ವಿಚಾರ ಮೂಲಕ ಮತ ಬೇಟೆಯಾಡುತ್ತಿದೆ. ಸೇನೆ ವಿಚಾರವನ್ನು ಹಿಡಿದುಕೊಂಡು ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮದ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಇದು ದೇಶದ ದುರ್ದೈವವಾಗಿದೆ ಎಂದು ವಿಷಾದಿಸಿದರು.

ಯಾರು ಆರೋಗ್ಯಕರ ಪ್ರಜಾಪ್ರಭುತ್ವ ಬಯಸುತ್ತಾರೋ, ಯಾರು ವಾಕ್ ಸ್ವಾತಂತ್ರದಲ್ಲಿ ಆಸಕ್ತಿಯನ್ನು ತೋರುತ್ತಾರೋ ಅಂತವರು ದೇಶದ ಉತ್ತಮ ಭವಿಷ್ಯ ಹಾಗೂ ಸಮಾಜದ ಕಡೆ ಅವರ ನಡೆಯಿರುತ್ತದೆ. ಆದರೆ, ಕಳೆದ ಐದು ವರ್ಷದಲ್ಲಿ ಅದಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದ್ದು, ಇದಕ್ಕೆ ಮಾಧ್ಯಮವೂ ಹೊರತಾಗಿಲ್ಲ. ಅಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸುವವರಿಗೂ ಭಯ ಹುಟ್ಟಿಸುವ ಕೆಲಸ ಹಾಗೂ ಹುನ್ನಾರಗಳು ನಿರಂತರವಾಗಿ ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಂತ್ರಿ ಸ್ಥಾನಕ್ಕಿಂತ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ದೊಡ್ಡದು. ಮಂತ್ರಿ ಪದವಿ ಹಂಚುವ ಮೊದಲೇ ನನಗೆ ಪಕ್ಷ ಇದರ ಬಗ್ಗೆ ಸೂಚನೆ ನೀಡಿತ್ತಾ ಇಲ್ಲವಾ ಎನ್ನುವುದು ಪಕ್ಷದ ಆಂತರಿಕ ವಿಚಾರ. ಹತ್ತಾರು ವರ್ಷ ನಾನು ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷಕ್ಕಾಗಿಯೇ ಕೆಲಸ ಮಾಡಬೇಕು ಎನ್ನುವ ಆಸೆಯಿತ್ತು. ಈಗ ಪಕ್ಷದ ಕೆಲಸ ಮಾಡುತ್ತಿದ್ದೇನೆ ಎಂದರು.

ಬಿಜೆಪಿ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲರು, ಕೇವಲ ಚುನಾವಣೆ ಗೆಲ್ಲುವುದು ಮಾತ್ರ ನಮ್ಮ ಗುರಿಯಲ್ಲ. ದೇಶ ಕಟ್ಟುವುದು ನಮ್ಮ ಮೊದಲ ಗುರಿ. ಈ ಹಿಂದೆ ಪ್ರಧಾನಿ ಮೋದಿ ಪ್ರತಿಯೊಬ್ಬರ ಅಕೌಂಟಿಗೆ 15 ಲಕ್ಷ ಹಣ ಹಾಕುತ್ತೇನೆ ಎಂದು ಭರವಸೆ ಕೊಟ್ಟಿದ್ದರು, ಅದನ್ನು ಈಡೇರಿಸಿದ್ದಾರ? ಹೀಗಾಗಿ, ಬಿಜೆಪಿ ಪ್ರಣಾಳಿಕೆಯನ್ನು ಜನರು ನಂಬುವುದಿಲ್ಲ ಎಂದು ಹೇಳಿದರು.

ರಾಜ್ಯಪಾಲರ ಸ್ಥಾನ ದುರುಪಯೋಗ: ಕಲ್ಯಾಣ್ ಸಿಂಗ್ ರಾಜ್ಯಪಾಲರಾಗಿ ಸಾಂವಿಧಾನಿಕ ಸ್ಥಾನ-ಮಾನ ಹೊಂದಿದ್ದು, ಬಿಜೆಪಿ ಪಕ್ಷ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಮೋದಿಯನ್ನು ಪ್ರಧಾನಿ ಮಾಡಬೇಕು ಎಂದು ಜನರ ಮೇಲೆ ಒತ್ತಡ ಹಾಕುತ್ತಾರೆ. ಪಕ್ಷದ ಪರ ಪ್ರಚಾರ ಮಾಡುತ್ತಾರೆ. ಇವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದ್ದು, ಚುನಾವಣಾ ಆಯೋಗ ರಾಷ್ಟ್ರಪತಿಗೆ ವರದಿ ನೀಡುತ್ತಾರೆ. ಆದರೆ ರಾಷ್ಟ್ರಪತಿ ಅವರು ಪ್ರಧಾನಮಂತ್ರಿಗೆ ಸಲ್ಲಿಸುತ್ತಾರೆ. ಇದು ಪ್ರಜಾಪ್ರಭುತ್ವವೇ? ಕಲ್ಯಾಣ್ ಸಿಂಗ್‌ರನ್ನು ಹುದ್ದೆಯಿಂದ ಅಮಾನತ್ತಿನಲ್ಲಿ ಇಡಬೇಕು. ಆಗ ಮಾತ್ರ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದು ವಿಶ್ವಾಸಪಟ್ಟರು.

ಬಿಜೆಪಿ ಕುತಂತ್ರ: ಕಾಂಗ್ರೆಸ್ ಸಾಧನೆಗಳನ್ನು ಮರೆಮಾಚಿದ್ದರಿಂದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿತು. ಈ ಬಾರಿ ಇಂತಹ ತಪ್ಪಾಗದಂತೆ ನೋಡಿಕೊಳ್ಳಲಾಗುವುದು. ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲಲಾಗುತ್ತದೆ. ಬಿಜೆಪಿ ಕುತಂತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಣ ತೊಟ್ಟಂತಿದೆ. ಆದರೆ ಖರ್ಗೆ ಅವರು ರಾಷ್ಟ್ರ ನಾಯಕರಾಗಿದ್ದು ಗೆದ್ದೆ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.

ನಿರುದ್ಯೋಗಕ್ಕೆ ಯಾರು ಹೊಣೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರ ಸಾಧನೆ ಪ್ರತಿಯೊಬ್ಬರಿಗೂ ಗೊತ್ತಿದೆ. ಅವರನ್ನು ಕಾಂಗ್ರೆಸ್ ಕಡೆಗಣಿಸಿಲ್ಲ. ಉದ್ಯೋಗ ಖಾತ್ರಿ ಯೋಜನೆ ಅವರದು. ಅವರ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಿದೆ. ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದಾಗ 40 ಕೋಟಿ ಉದ್ಯೋಗಗಳಿದ್ದವು. ಈಗ 39 ಕೋಟಿ ಉದ್ಯೋಗಗಳಿವೆ. 5 ವರ್ಷದಲ್ಲಿ ಉದ್ಯೋಗ ಹೆಚ್ಚಾಗಿಲ್ಲ. ಇನ್ನು ಕಡಿಮೆಯಾಗಿದೆ. ಇದಕ್ಕೆ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.

ಬಡವರನ್ನು ಮೇಲೆತ್ತುವ ಯೋಜನೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಅನ್ನಭಾಗ್ಯ ಯೋಜನೆ ಮೂಲಕ ಎಲ್ಲರಿಗೂ ಊಟ ಸಿಕ್ಕಂತಾಗಿದೆ. 8 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ. ಮೈತ್ರಿ ಸರಕಾರ 48 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ಕೆಲಸ ಪ್ರಣಾಳಿಕೆಯಲ್ಲಿ ತಿಳಿಸಲಾಗಿದ್ದು, ಈ ಕಾರ್ಯಕ್ರಮದಿಂದ 20 ಕೋಟಿ ಜನರ ಅಭಿವೃದ್ಧಿಯಾಗಲಿದೆ. ರೈತರನ್ನು ಋಣಮುಕ್ತ ಮಾಡುವ ಯೋಜನೆಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಅರಾಜಕತೆ ಸೃಷ್ಟಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ನಮ್ಮ ದೇಶದ ಸೇನೆಯನ್ನು ಮೋದಿ ಸೇನೆ ಎನ್ನುತ್ತಿದ್ದಾರೆ. ಮಿಲಿಟರಿ ಕಾರ್ಯವೈಖರಿಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸುತ್ತಿದ್ದಾರೆ. ಚುನಾವಣಾ ಆಯೋಗ ಸೇನೆ ಬಗ್ಗೆ ಮಾತನಾಡಬಾರದೆಂದು ತಿಳಿಸಿದ್ದರೂ, ಮುಖ್ಯಮಂತ್ರಿ ಆದಿತ್ಯನಾಥ್ ಮಾತನಾಡಿದ್ದಾರೆ. ಈ ಕೆಲಸ ದೇಶದ್ರೋಹಿಗಳು ಮಾಡುವಂತದ್ದು, ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಆಯೋಗ ಒಂದು ರಾಜ್ಯದ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡುವಲ್ಲಿ ವಿಫಲವಾಗಿದೆ. ಅಲ್ಲದೆ, ನೀತಿ ಆಯೋಗದ ಉಪಾಧ್ಯಕ್ಷ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡುವ ಮೂಲಕ ಜವಾಬ್ದಾರಿಯುತ ಸ್ಥಾನಕ್ಕೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಆಯೋಗ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿರೋಧ ಪಕ್ಷದ ಬಿಜೆಪಿ ನಾಯಕರು ಮಾತನಾಡಲಿ. ಆದರೆ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಾರೆ. ನೀತಿ ಆಯೋಗದ ಉಪಾಧ್ಯಕ್ಷರೂ ಬಿಜೆಪಿ ಕಾರ್ಯಕರ್ತರಂತೆ ವರ್ತಿಸಿ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕೆ ಮಾಡಲು ಏನು ನೈತಿಕತೆ ಇದೆ.
-ಎಚ್.ಕೆ.ಪಾಟೀಲ್, ಕೆಪಿಪಿಸಿ ಪ್ರಚಾರ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X