Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯ್ದು ವಿವಿಪ್ಯಾಟ್‌ಗಳಲ್ಲಿ ದಾಖಲಾದ ಮತಗಳ...

ಆಯ್ದು ವಿವಿಪ್ಯಾಟ್‌ಗಳಲ್ಲಿ ದಾಖಲಾದ ಮತಗಳ ಎಣಿಕೆ - ಡಿಸಿ ಸಸಿಕಾಂತ್ ಸೆಂಥಿಲ್‌

ವಾರ್ತಾಭಾರತಿವಾರ್ತಾಭಾರತಿ8 April 2019 7:57 PM IST
share
ಆಯ್ದು ವಿವಿಪ್ಯಾಟ್‌ಗಳಲ್ಲಿ ದಾಖಲಾದ ಮತಗಳ ಎಣಿಕೆ - ಡಿಸಿ ಸಸಿಕಾಂತ್ ಸೆಂಥಿಲ್‌

ಮಂಗಳೂರು, ಎ. 8: ಮತದಾನ ಕೇಂದ್ರದಲ್ಲಿ ವಿವಿಪ್ಯಾಟ್ ಬಳಕೆಯಿಂದ ಮತ್ತು ಆಯ್ದ ವಿವಿಪ್ಯಾಟ್ ನಲ್ಲಿ ದಾಖಲಾದ ಮತಗಳನ್ನು ಎಣಿಸಿ ಮತ್ತು ಮತಯಂತ್ರದ ಮತಗಳನ್ನು ತಾಳೆ ನೋಡುವ ವ್ಯವಸ್ಥೆ ಈ ಬಾರಿ ಇರುವುದರಿಂದ ಮತದಾನ ಅತ್ಯಂತ ಹೆಚ್ಚು ಸಮರ್ಪಕವಾಗಿ ನಡೆಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಸುದ್ದಿಗೋಷ್ಠಿಯಲ್ಲಿಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲಾ ವಿವಿ ಪ್ಯಾಟ್‌ಗಳಲ್ಲಿ ದಾಖಲಾದ ಮತಗಳನ್ನು ಎಣಿಸಲಾಗುವುದಿಲ್ಲ ಆದರೆ ಒಂದು ಲೋಕ ಸಭಾ ಕ್ಷೇತ್ರಗಳಲ್ಲಿ ಎಲ್ಲರ ಸಮ್ಮಖದಲ್ಲಿ ಆಯ್ಕೆಯಾಗುವ ಆಯ್ದ ವಿವಿ ಪ್ಯಾಟ್‌ಗಳ ಮತಗಳನ್ನು ಎಣಿಸಲಾಗುವುದು ಮತ್ತು ಅದೇ ಮತಗಟ್ಟೆಯ ಮತಯಂತ್ರದಲ್ಲಿ ದಾಕಲಾದ ಮತಗತಳನ್ನು ಎಣಿಸಲಾಗುವುದು ಆಗ ತಾಳೆಯಾಗುತ್ತದೆಯೋ ಇಲ್ಲವೋ ಎಂದು ಪರಿಶೀಲಿಸಲಾಗುವುದು ಈ ರೀತಿಯ ಪ್ರಕ್ರೀಯೆಯಿಂದ ಮತಯಂತ್ರದಲ್ಲಿ ಅಕ್ರಮಗಳಾಗುತ್ತವೆ ಎಂಬ ಸಂದೇಹ ಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸಸಿ ಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮತದಾರರ ಗುರುತುಪತ್ರ (ಎಪಿಕ್ ಕಾರ್ಡ್)ಆಧಾರ್ ಸೇರಿದಂತೆ 11 ಗುರುತು ಪತ್ರಗಳನ್ನು ಬಳಸಿ ಮತ ಚಲಾಯಿಸಬಹುದು

ಮತದಾರರ ಗುರುತುಪತ್ರ (ಎಪಿಕ್ ಕಾರ್ಡ್) ಆಧಾರ್ ಸೇರಿದಂತೆ 11 ಗುರುತು ಪತ್ರಗಳ ಪೈಕಿ ಯಾವೂದಾದರೊಂದು ದಾಖಲೆಯನ್ನು ಮತಟ್ಟೆಯಲ್ಲಿ ಹಾಜರುಪಡಿಸಿ ಮತಚಲಾಯಿಸಬಹುದು ಈ ಹಿಂದೆ ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ನೀಡಲಾಗುತ್ತಿದ್ದ ಚುನಾವಣಾ ಸಂದರ್ಭದ ತಾತ್ಕಲಿಕ ನೀಡುವ ಮತದಾರರ ಚೀಟಿಯನ್ನು ಮತಗಟ್ಟೆಯಲ್ಲಿ ನೀಡಿ ಮತಚಲಾಯಿಸಿದ್ದಾರೆ. ಈ ಬಾರಿ ಈ ರೀತಿ ಮತದಾರರ ಪಟ್ಟಿಯ ಚೀಟಿಯನ್ನು ನೀಡಿ ಮತಚಲಾಯಿಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಎ.10ರಿಂದ ಮತಯಂತ್ರಗಳ ಸಿದ್ಧಪಡಿಸುವ ಕಾರ್ಯ ಆರಂಭ

ಎಂಟು ಕೇಂದ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಸಿದ್ಧಪಡಿಸಲಾಗುವುದು. ಬೆಳ್ತಂಗಡಿಯ ಎಸ್‌ಡಿಎಂ ಪದವಿ ಪುರ್ವ ಕಾಲೇಜು ಉಜಿರೆ, ಮೂಡುಬಿದಿರೆಯ ದವಳ ಕಾಲೇಜು, ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಪಾಂಡೇಶ್ವರದ ರೊಸಾರಿಯೋ ಶಿಕ್ಷಣ ಸಂಸ್ಥೆ, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕೆನರಾ ಹೈ ಸ್ಕೂಲ್ ಉರ್ವ ಮಂಗಳೂರು, ಮಂಗಳೂರು ವಿಧಾನ ಕ್ಷೇತ್ರದ ಮತ ಯಂತ್ರಗಳನ್ನು ರಾಮಕೃಷ್ಣ ಶಿಕ್ಷಣ ಸಂಸ್ಥೆ ಬಂಟ್ಸ್ ಹಾಸ್ಟೆಲ್ ,ಬಂಟ್ವಾಳ ಕ್ಷೇತ್ರದ ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆ ಮೊಡಂಕಾಪು ,ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಸುಳ್ಯ ಪದವಿ ಪೂರ್ವಕಾಲೇಜು ಸುಳ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮತಯಂತ್ರಗಳನ್ನು ಸಿದ್ಧಪಡಿಸುವ ಕಾರ್ಯ ಎ.10ರಂದು ಆರಂಭವಾಗಲಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲೆಯ ಚುನಾವಣಾ ದೂರು ವಿಭಾಗಕ್ಕೆ ಸಾರ್ವಜನಿಕರಿಂದ 2598 ಕರೆಗಳು ಬಂದಿವೆ. ಈ ಪೈಕಿ 128 ದೂರುಗಳನ್ನು ದಾಖಲಿಸಿ ಕ್ರಮ ಕೈ ಗೊಳ್ಳಲಾಗಿದೆ ಉಳಿದ ಕರೆಗಳು ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಮಾಹಿತಿ ನೀಡುವ ದೃಷ್ಟಿಯಿಂದ ಮಾಡಲಾದ ಕರೆಗಳಾಗಿವೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ 28,10,590 ರೂ ನಗದು ಮುಟ್ಟುಗೋಲು ಹಾಕಿ ಬಳಿಕ ದಾಖಲೆ ಪರಿಶೀಲಿಸಿ ಪೂರ್ಣ ಹಣ ಹಿಂತಿರುಗಿಸಲಾಗಿದೆ. 3 ದ್ವಿಚಕ್ರ ವಾಹನ, 3 ಲಾರಿ,1907 ಭಿತ್ತಿಪತ್ರ, 3 ಕಾರು, 1ಟ್ರಕ್, 1 ಟ್ಯಾಂಕರ್ ಸೇರಿದಂತೆ ಒಟ್ಟು 1,07,10,000 ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 461 ಅಬಕಾರಿ ಕಾಯ್ದೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 1861 ಮತಗಟ್ಟೆಗಳಲ್ಲಿ 2495 ವಿವಿಪ್ಯಾಟ್ ಬಳಸಲಾಗುವುದು ಎಂದರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ , ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X