Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮತದಾನ...

ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ: ಓಟು ಮಾಡಿದವರಿಗೆ ಮದುವೆ ದಿನ ಹೀಗೊಂದು ಉಡುಗೊರೆ !

ವಾರ್ತಾಭಾರತಿವಾರ್ತಾಭಾರತಿ8 April 2019 8:14 PM IST
share
ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ: ಓಟು ಮಾಡಿದವರಿಗೆ ಮದುವೆ ದಿನ ಹೀಗೊಂದು ಉಡುಗೊರೆ !

ಉಡುಪಿ, ಎ.8: ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಏನೇನಿರಬಹುದು... ನಾಮ ಸಂವತ್ಸರ, ವಧೂ ವರರ ಹೆಸರು, ಮದುವೆ ನಡೆಯುವ ಸ್ಥಳ, ಇನ್ನೂ ಹೆಚ್ಚೆಂದರೆ ‘ಆಶೀರ್ವಾದವೇ ಉಡುಗೊರೆ’ ಎಂಬ ಸಂದೇಶ.....

ಆದರೆ ಇಲ್ಲೊಂದು ವಿವಾಹ ಆಮಂತ್ರಣ ಪತ್ರಿಕೆ ಇದೆ. ಇದರಲ್ಲಿ 2019ರ ಲೋಕಸಭಾ ಚುನಾವಣೆಯ ಮಹತ್ವವನ್ನು ಸಾರಲಾಗಿದೆ. ಆಮಂತ್ರಣ ಪತ್ರಿಕೆಯ ಮೂಲಕ -ಮತದಾನ ಮಾಡಿ, ಪ್ರಜಾಪ್ರಭುತ್ವ ಗೆಲ್ಲಿಸಿ..., ನಾವು ಮಾರಾಟಕ್ಕಿಲ್ಲ, ನಮ್ಮ ಮತ ಮಾರಾಟಕ್ಕಿಲ್ಲ...’ ಎಂಬ ಸಂದೇಶಗಳನ್ನು ಎಲ್ಲ ಬಂಧುಬಳಗ, ಮಿತ್ರರಿಗೆ ತಲುಪಿಸಲಾಗುತ್ತಿದೆ.

ಮೇ 1ರಂದು ಕುಂದಾಪುರ ತಾಲೂಕಿನ ತಲ್ಲೂರು ಪಾರ್ತಿಕಟ್ಟೆ ಶ್ರೀ ಶೇಷಕೃಷ್ಣ ಕನ್ವೆನ್‌ಷನ್ ಸಭಾಭವನದಲ್ಲಿ ನಡೆಯುವ ಗೌರಿ ಶ್ರೀನಿವಾಸ್ ಇವರ ಪುತ್ರ ಗಣೇಶ್ ಕುಮಾರ್ ಪಡುಕೋಣೆ ಮತ್ತು ಲೀಲಾವತಿ ವಿ. ನಾರಾಯಣ ಇವರ ಪುತ್ರಿ ಪೂರ್ಣಿಮಾರ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿಯ ಈ ಸಂದೇಶಗಳನ್ನು ಮುದ್ರಿಸಲಾಗಿದೆ.

ಅಷ್ಟೇ ಅಲ್ಲ, ವಿವಾಹ ಪತ್ರಿಕೆಯಲ್ಲಿ ‘ಆಶೀರ್ವಾದವೇ ಉಡುಗೊರೆ’ ಎಂಬ ಸಂದೇಶವಿದೆ. ಮದುವೆಗೆ ಬಂದವರು ವಧೂವರರಿಗೆ ಯಾವುದೇ ಉಡುಗೊರೆ ನೀಡುವಂತಿಲ್ಲ, ಆದರೆ ಮದುವೆಗೆ ಬಂದವರಿಗೆ ವಿಶೇಷ ಕೊಡುಗೆ ನೀಡಲಾಗುತ್ತದೆ. ಅದು ಎಲ್ಲರಿಗೂ ಅಲ್ಲ, ಎ. 18ರಂದು ಮತದಾನ ಮಾಡಿದವರಿಗೆ ಮಾತ್ರ.

‘ಒಂಚೂರು ಇಲ್ಕಾಣಿ’ ಎಂದು ಕುಂದಾಪುರ ಕನ್ನಡದ ಒಕ್ಕಣೆಯಲ್ಲಿ, ಈ ಬಾರಿಯ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ವಿಶೇಷ ಕೊಡುಗೆ ನೀಡಲಾಗುತ್ತದೆ. ಅದೂ ಮತದಾನ ಮಾಡಿದ ಬಗ್ಗೆ ಬೆರಳಿನ ಶಾಯಿ ಗುರುತು ತೋರಿಸಿದವರಿಗೆ ಮಾತ್ರ. ಅಂತಹವರಿಗೆ 250 ರೂ. ಮೌಲ್ಯದ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ.

ಇದಲ್ಲದೇ ವಿವಾಹ ಸಮಾರಂಭದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ವ್ಯಂಗ್ಯಚಿತ್ರ ಪ್ರದರ್ಶನ, ಪುರಾತನ ಜಾನಪದ ವಸ್ತುಗಳ ಪ್ರದರ್ಶನ ಸಹ ಇರಲಿದೆ...

ವಿವಾಹ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಿ, ಆಮಂತ್ರಣ ಪತ್ರಿಕೆಗೆ ದುಬಾರಿ ವೆಚ್ಚ ಮಾಡುವ ಕಾಲದಲ್ಲಿ, ಸಮಾಜಕ್ಕೆ ಮತದಾನ ಜಾಗೃತಿಯ ಸಂದೇಶದ ಜೊತೆಗೆ ಪುಸ್ತಕ ಓದುವುದನ್ನು ಪ್ರೋತ್ಸಾಹಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ವಿವಾಹವಾಗುತ್ತಿರುವ ಈ ಜೋಡಿ ಎಲ್ಲರಿಗೂ ಮಾದರಿ ಎನಿಸಿಕೊಂಡಿದೆ.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಕೈಗೊಳ್ಳುತ್ತಿರುವ ಮತದಾನ ಜಾಗೃತಿ ಕಾರ್ಯಕ್ರಮದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸುವ ಇದೊಂದು ಅಪರೂಪದ ಮಾದರಿ ಕಾರ್ಯಕ್ರಮವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X