Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಬಾ ಕರಂದ್ಲಾಜೆ ಚುನಾವಣೆ ಸಂದರ್ಭ ಮಾತ್ರ...

ಶೋಬಾ ಕರಂದ್ಲಾಜೆ ಚುನಾವಣೆ ಸಂದರ್ಭ ಮಾತ್ರ ಕಾಣಿಸುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ8 April 2019 8:20 PM IST
share
ಶೋಬಾ ಕರಂದ್ಲಾಜೆ ಚುನಾವಣೆ ಸಂದರ್ಭ ಮಾತ್ರ ಕಾಣಿಸುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಟೀಕೆ

ಶೃಂಗೇರಿ, ಎ.8: ಉಡುಪಿಯಲ್ಲಿ ಶಾಸಕನಾಗಿದ್ದ ಸಂದರ್ಭದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ನೂರಾರು ಕೋಟಿ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡಿದ್ದೇನೆ. ರಾಜ್ಯದ ನಂ.1 ಶಾಸಕನಾಗಿ ಹೊರಹೊಮ್ಮಿರುವ ದಾಖಲೆ ನನ್ನದಾಗಿದೆ. ಆದರೆ ಸಂಸದೆ ಶೋಭಾ ಕರಂದ್ಲಾಜೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ಕಾಣಿಸಿಕೊಳ್ಳುತ್ತಾರೆ. ಅಂತವರು ಬಡವರ ಆಶಯಗಳಿಗೆ ಸ್ಪಂದಿಸಲಾರರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ತಿಳಿಸಿದರು.

ಅವರು ಶೃಂಗೇರಿಯಲ್ಲಿ ಸೋಮವಾರ ಕುರುಬಕೇರಿ ಸರ್ಕಲ್‍ನಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ನನಗೆ ಎಂಟು ವಿಧಾನ ಸಭಾ ಕ್ಷೇತ್ರಕ್ಕೆ ಕೆಲಸ ಮಾಡುವ ಅವಕಾಶ ದೊರಕಿದೆ. ಸಂಸದೆ ಶೋಭಾ ಕರಂದ್ಲಾಜೆ ಈ ಕ್ಷೇತ್ರವು ಕಾಂಗ್ರೆಸ್ ಪಕ್ಷದಿಂದ ಮುಕ್ತವಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಮುಂದೆ ಮೈತ್ರಿ ಪಕ್ಷವು ಬಿಜೆಪಿಗೆ ಪೈಪೋಟಿ ನೀಡುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಹೇಗೆ ಗೆಲ್ಲಬೇಕು, ಬೇರೆಯವರನ್ನು ಹೇಗೆ ಸೋಲಿಸಬೇಕು ಎಂಬುದು ಚೆನ್ನಾಗಿ ಗೊತ್ತಿದೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದೇಶದ 25 ಕೋಟಿ ಬಿಪಿಎಲ್ ಕಾರ್ಡುದಾರರಿಗೆ ವಾರ್ಷಿಕ 72 ಸಾವಿರ ರೂ. ಆದಾಯ ನೀಡುವ ನ್ಯಾಯ್ ಯೋಜನೆಯನ್ನು ರಾಹುಲ್ ಗಾಂಧಿ ಚುನಾವಣಾ ಪ್ರನಾಳಿಕೆಯಲ್ಲಿ ಈಗಾಗಲೇ ಘೋಷಿಸಿದ್ದಾರೆ. ಈ ಯೋಜನೆಯಿಂದಾಗಿ ದೇಶದಲ್ಲಿ ಬಡವರಿಗೆ ಸಾಕಷ್ಟು ನೆರವಾಗಲಿದೆ ಎಂದ ಅವರು, ಈ ಯೋಜನೆಯ ಜಾರಿಗಾಗಿ ಈ ಬಾರಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಮತದಾರರು ಬೆಂಬಲ ನೀಡಬೇಕೆಂದು ಮನವಿ ಮಾಡಿದರು. 

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ರಾಜೇಗೌಡ ಅವರು ಉತ್ತಮ ಕಾರ್ಯಮಾಡುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ನಾಮಪತ್ರದಲ್ಲಿ ಬೆಂಗಳೂರು ವಿಳಾಸವನ್ನು ನಮೂದಿಸಿದ್ದಾರೆ. ನಾನು ಉಡುಪಿ ಚಿಕ್ಕಮಗಳೂರಿನಲ್ಲಿ ಕಾರ್ಯನಿರ್ವಹಿಸಲ್ಲಿದ್ದೇನೆ. ಎ.17ರ ತನಕ ನನ್ನ ಜವಾಬ್ದಾರಿ ನಿಮ್ಮದಾಗಿದೆ. ಬಳಿಕ ನಿಮ್ಮ ಜವಾಬ್ದಾರಿ ನನ್ನದಾಗಲಿದೆ ಎಂದ ಅವರು, ಶಾಸಕನಾಗಿದ್ದ ಅವಧಿಯಲ್ಲಿ ಉಡುಪಿ ಕ್ಷೇತ್ರದಲ್ಲಿ 65 ಜನಸಂಪರ್ಕ ಸಭೆಯನ್ನು ನಡೆಸಿದ್ದೇನೆ. ಬಡವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಇದರಿಂದಾಗಿ ನನಗೆ ಬಡವರ ನೋವು ಅರ್ಥವಾಗುತ್ತದೆ. ಬಡವರ ನೋವು ಅರ್ಥವಾಗದವರು ಅಧಿಕಾರ ಪಡೆದು ರಾಷ್ಟ್ರರಾಜಕಾರಣಿಯಾಗಲು ಹೋಗುತ್ತಾರೆಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, "ರೈತರು ಹಾಗೂ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಸಮ್ಮಿಶ್ರ ಸರಕಾರ ಹೆಚ್ಚು ಅನುದಾನ ನೀಡಿದೆ.  ರೈತರ ಹಾಗೂ ಜನಸಾಮಾನ್ಯರ ಶ್ರೇಯೋಭಿವೃದ್ಧಿಗೆ ಮೈತ್ರಿ ಸರಕಾರ ಅವಿರತವಾಗಿ ದುಡಿಯುತ್ತಿದೆ. ಮಲೆನಾಡಿನ ಜಲ್ವಂತ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ಹಂತಹಂತವಾಗಿ ಜನತೆಯ ಆಶಯಗಳಿಗೆ ಸ್ಪಂದಿಸಲಿದ್ದೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೃಷಿಕರ 46 ಸಾವಿರ ಕೋಟಿ ಸಾಲ ಮನ್ನಾದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು  ಎಂದರು.

ಸಭೆಗೂ ಮುನ್ನ ಮುಖ್ಯಬೀದಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತಯಾಚಿಸಿದರು. ಶಾಸಕ ಟಿ.ಡಿ.ರಾಜೇಗೌಡ,ಕಾಂಗ್ರೆಸ್ ಮುಖಂಡರಾದ ನಟರಾಜ್ ಮಾರನಕೂಡಿಗೆ, ಕೆ.ಸಿ.ವೆಂಕಟೇಶ್, ಮೇಗಳಬೈಲು ಚಂದ್ರಶೇಖರ್, ಜೆಡಿಎಸ್ ಮುಖಂಡರಾದ ವಿವೇಕಾನಂದ ಸುಂಕುರ್ಡಿ, ಗಿಣಕಲ್ ಭರತ್ ಸೇರಿದಂತೆ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳ ಕಾಂಗ್ರೆಸ್, ಜೆಡಿಎಸ್ ಮುಖಂಡರು ಕಾರ್ಯಕರ್ತರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X