Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರದ ಬಡಾವಣೆಗಳಲ್ಲಿ ಕಲ್ಮರ್ಗಿ...

ಉಡುಪಿ ನಗರದ ಬಡಾವಣೆಗಳಲ್ಲಿ ಕಲ್ಮರ್ಗಿ ಸ್ಥಾಪನೆ: ಪ್ರಾಣಿಗಳಿಗೆ ನೀರಿಡುವ ಹಳೆ ಸಂಪ್ರದಾಯಕ್ಕೆ ಮರುಜೀವ

ವಾರ್ತಾಭಾರತಿವಾರ್ತಾಭಾರತಿ8 April 2019 9:09 PM IST
share
ಉಡುಪಿ ನಗರದ ಬಡಾವಣೆಗಳಲ್ಲಿ ಕಲ್ಮರ್ಗಿ ಸ್ಥಾಪನೆ: ಪ್ರಾಣಿಗಳಿಗೆ ನೀರಿಡುವ ಹಳೆ ಸಂಪ್ರದಾಯಕ್ಕೆ ಮರುಜೀವ

ಉಡುಪಿ, ಎ.8: ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಸಲುವಾಗಿ ಕಲ್‌ಮರ್ಗಿಗಳನ್ನು ನಗರದ ಬಡವಾಣೆಗಳಲ್ಲಿ ಇಡುವ ಮೂಲಕ ಬೇಸಿಗೆಯ ಬಿರುಬಿಸಿಲಿಗೆ ಬಳಲಿ ಬೆಂಡಾಗುವ ಪ್ರಾಣಿ ಪಕ್ಷಿಗಳ ದಾಹ ತೀರಿಸುವ ಕೆಲಸವನ್ನು ಕೈಗೆತ್ತಿಕೊಂಡಿದೆ.

 ಸಮಿತಿಯ ಪದಾಧಿಕಾರಿಗಳಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ರಾಜು ಕಾಪು, ಡೇವಿಡ್ ‘ಕಲ್‌ಲ್ ಮರ್ಗಿ’(ಕಲ್‌ಲ್ ಮರಾಯಿ) ಯೋಜನೆ ರೂವಾರಿಗಳಾಗಿ ಶ್ರಮಿಸಿದ್ದು, ಅವರೊಂದಿಗೆ ಪ್ರಾಣಿ ಪಕ್ಷಿ ಪ್ರಿಯರು ಬೆಂಬಲವಾಗಿ ನಿಂತಿದ್ದಾರೆ. ಪ್ರಾಣಿ ಪಕ್ಷಿಗಳ ಇರುವಿಕೆಯ ನೆಲೆಗಳನ್ನು ಗುರು ತಿಸಿ ಈ ಯೋಜನೆಯನ್ನು ಮತ್ತಷ್ಟು ವಿಸ್ತಾರಗೊಳಿಸಲು ಸಮಿತಿ ಸಂಕಲ್ಪಿಸಿದೆ.

ನಗರದ ಬಡಾವಣೆಗಳಲ್ಲಿ ಪಕ್ಷಿಗಳು, ಬೀದಿನಾಯಿಗಳು, ಬೆಕ್ಕುಗಳು, ಬೀಡಾಡಿ ಜಾನುವಾರಗಳ ಸಂಚಾರ, ನೆಲೆ ಇರುವ ಸ್ಥಳಗಳನ್ನು ಗುರುತಿಸಿ, ಆಯಕಟ್ಟಿನ ಸ್ಥಳದಲ್ಲಿ ಕಲ್‌ಮರ್ಗಿಗಳನ್ನು ಇರಿಸಲಾಗಿದೆ. ಪ್ರತಿದಿನ ಕಲ್‌ಲ್ ಮರ್ಗಿಯೊಳಗೆ ನೀರು ತುಂಬಲು ಬಡಾವಣೆಯ ಮನೆ ನಿವಾಸಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಪ್ರಾಣಿ ಪಕ್ಷಿಗಳು ಬಿಸಿಲ ಧಗೆಯಲ್ಲಿ ನೀರು ಸೇವಿಸಿ ದಾಹ ತೀರಿಸಿಕೊಳ್ಳುತ್ತಿವೆ.

ನಗರದ ತೆಂಕಪೇಟೆ ಭುವನೇಂದ್ರ ಮಂಟಪ ರಸ್ತೆಯಲ್ಲಿ, ಹರಿಶ್ಚಂದ್ರ ಮಾರ್ಗ, ರಾಜಾಂಗಣ ವಾಹನ ನಿಲುಗಡೆ ಸ್ಥಳ, ಚಿತ್ತರಂಜನ್ ಸರ್ಕಲ್ ಬಳಿ, ಅಜ್ಜರ ಕಾಡು ಭುಜಂಗ ಪಾರ್ಕಿನಲ್ಲಿ ಕಲ್‌ಲ್ಮರ್ಗಿಯನ್ನು ಇಡಲಾಗಿದೆ. ಬಾಲಕೃಷ್ಣ ಭಂಡಾರಿ, ಅಜ್ಜರಕಾಡು ಸರೋಜನಿ ದೇವೆಂದ್ರ ಕಾಮತ್ ಹಾಗೂ ಚಿತ್ಪಾಡಿ ವಿಕಾಸ ಇಂಜಿನಯರಿಂಗ್ ವರ್ಕ್ಸ್‌ನ ಮಾಲಕರು ಉಚಿತವಾಗಿ ಕಲ್‌ಲ್ ಮರ್ಗಿ ಗಳನ್ನು ಒದಗಿಸಿ ಸಮಿತಿಯ ಯೋಜನೆಗೆ ಸಹಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X