ನಾಳೆ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಮೈಸೂರು,ಎ.8: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎ.9 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆಗೆ ಎ.9 ರಂ ಮಂಗಳವಾರ ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತೆರಳಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾತನಾಡಿ, ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅವರ ಭದ್ರತೆಗೆ ಮೈಸೂರು ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಚುನಾವಣಾ ನೀತಿ ಸಂಹಿತೆ ಇಲ್ಲದಿರುವ ಸಂದರ್ಭದಲ್ಲಿ ಪ್ರಧಾನಿ ಅವರಿಗೆ ಯಾವ ರೀತಿ ಭದ್ರತೆ ನೀಡಲಾಗುತ್ತದೋ ಅದೇ ರೀತಿಯ ಭದ್ರತೆಯನ್ನು ಈಗಲೂ ಒದಗಿಸಬೇಕು ಅನ್ನೋ ಕಾನೂನು ಇರುವುದರಿಂದ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಾಗುವುದು ಎಂದು ತಿಳಿಸಿದರು.
Next Story