Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 10,911 ವಿಕಲಚೇತನ...

ದ.ಕ. ಜಿಲ್ಲೆಯಲ್ಲಿ 10,911 ವಿಕಲಚೇತನ ಮತದಾರರು: ಸಿಇಒ

ವಾರ್ತಾಭಾರತಿವಾರ್ತಾಭಾರತಿ9 April 2019 7:33 PM IST
share
ದ.ಕ. ಜಿಲ್ಲೆಯಲ್ಲಿ 10,911 ವಿಕಲಚೇತನ ಮತದಾರರು: ಸಿಇಒ

ಮಂಗಳೂರು, ಎ.9: ದ.ಕ. ಜಿಲ್ಲೆಯಲ್ಲಿ ಎ.18ರಂದು ನಡೆಯುವ ಲೋಕಸಭಾ ಚುನಾವಣೆ ಸಂಬಂಧ ಮತದಾರರ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮದ ಮುಖಾಂತರ ಹಲವು ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಲ್ಲಿ ಅಶಕ್ತರಿಗೆ ಪ್ರಾಧಾನ್ಯತೆ ನೀಡಿ ಅವರಿಗಾಗಿ ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಸಿಇಒ ಡಾ.ಸೆಲ್ವಮಣಿ ಆರ್. ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಮಾಹಿತಿ ನೀಡಿದ ಸಿಇಒ, ಜಿಲ್ಲೆಯಲ್ಲಿರುವ ವಿಶೇಷ ಚೇತನರನ್ನು ಜಿಲ್ಲಾ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಈಗಾಗಲೇ ಗುರುತಿಸಿದೆ. ಇವರೆಲ್ಲರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 10,911 ವಿಕಲಚೇತನ ಮತದಾರರಿದ್ದು, ಇವರಲ್ಲಿ ದೈಹಿಕ ವಿಕಲಚೇತನರು 5,756, ಅಂಧರು 829. ಶ್ರವಣದೋಷವುಳ್ಳವರು 1,006, ಬಹುವಿಧ ವಿಕಲಚೇತನರು 3,320. ಅರ್ಹ ಮತದಾರರು ಯಾವುದೇ ಕಾರಣದಿಂದ ಮತದಾನದಿಂದ ವಂಚಿತರಾಗಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯ. ಈ ನಿಟ್ಟಿನಲ್ಲಿ ವಿಶೇಷ ಚೇತನರನ್ನು ಗಮನದಲ್ಲಿರಿಸಿ 1,014 ಮತ ಕೇಂದ್ರಗಳಿಗೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಸ್ವಯಂ ಪ್ರೇರಿತರಾಗಿ ಆಗಮಿಸಿ ಮತದಾನ ಮಾಡುವಂತೆ ಪ್ರೇರೇಪಿಸಲು 1,861 ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ, ಮತಗಟ್ಟೆಗಳಲ್ಲಿ ಭೂತಕನ್ನಡಿ ವ್ಯವಸ್ಥೆ ಮತ್ತು 1,014 ಮತಕೇಂದ್ರಗಳಿಗೆ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಮತದಾನ ಮಾಡಲು ಮತಗಟ್ಟೆಗೆ ಬರುವ ಅಂಧರಿಗೆ ಎಲ್ಲ ಮತದಾನ ಕೇಂದ್ರಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಬ್ರೈಲ್ ಲಿಪಿ ಮಾದರಿ ಮತಪತ್ರವನ್ನು ಒದಗಿಸಲಾಗುತ್ತಿದೆ. ವಿಕಲಚೇತರನ್ನೊಳಗೊಂಡಂತೆ ಪ್ರತಿಯೊಂದು ತಾಲೂಕಿನಲ್ಲೂ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಮತದಾನ ಜಾಗೃತಿ ಶಿಬಿರ ಹಾಗೂ ಪಥಸಂಚಲನಗಳನ್ನು ಮಾಡಲಾಗುತ್ತಿದೆ. ಇವರೆಡೆಗೆ ತೆರಳಿ ಇವಿಎಂ ಮೂಲಕ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.

ಮೂರು ವಿಕಲಚೇತನ ಸ್ನೇಹಿ ಮತಗಟ್ಟೆ:

ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಮತದಾನದ ದಿನ ಎಲ್ಲ ವ್ಯವಸ್ಥೆಗಳ ಉಸ್ತುವಾರಿಯನ್ನು ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸ ಲಾಗಿದೆ. ಜಿಲ್ಲೆಯಲ್ಲಿ ಮಂಗಳೂರು, ಬೆಳ್ತಂಗಡಿ, ಪುತ್ತೂರು ತಾಲೂಕಿನಲ್ಲಿ ಒಂದೊಂದು ವಿಕಲಚೇತನ ಸ್ನೇಹಿ ಮತಗಟ್ಟೆ (ಪಿಡಬ್ಲುಡಿ) ಗಳನ್ನು ಸಿದ್ಧಪಡಿಸಲಾಗಿದೆ ಎಂದು ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಯಮುನಾ ಮಾಹಿತಿ ನೀಡಿದ್ದಾರೆ.

ಪಿಡಬ್ಲುಡಿ ಮತಗಟ್ಟೆಗಳ ವಿಶೇಷ ಎಂದರೆ ಮತಗಟ್ಟೆಯ ಎಲ್ಲ ಅಧಿಕಾರಿಗಳೂ ವಿಕಲಚೇತನರು. ಇವರು ಎಲ್ಲ ರೀತಿಯ ಕೆಲಸಗಳನ್ನು ನಿಭಾಯಿಸಬಲ್ಲರು ಎಂಬದುನ್ನು ತೋರಿಸುವುದು ಹಾಗೂ ಸಮಾನರು ಎಂದು ತೋರಿಸಲು ಈ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಶೇ.100 ವಿಕಲಚೇತನರ ಮತದಾನ ದಾಖಲಿಸಲು ಜಿಲ್ಲೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X