Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿಪಕ್ಷಗಳ ವೋಟ್ ಬ್ಯಾಂಕ್...

ಪ್ರತಿಪಕ್ಷಗಳ ವೋಟ್ ಬ್ಯಾಂಕ್ ಭಾರತದಲ್ಲಿದೆಯೋ? ಪಾಕಿಸ್ತಾನದಲ್ಲಿದೆಯೋ?: ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ9 April 2019 7:41 PM IST
share
ಪ್ರತಿಪಕ್ಷಗಳ ವೋಟ್ ಬ್ಯಾಂಕ್ ಭಾರತದಲ್ಲಿದೆಯೋ? ಪಾಕಿಸ್ತಾನದಲ್ಲಿದೆಯೋ?: ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ

ಚಿತ್ರದುರ್ಗ,ಎ.9: ಭಾರತೀಯ ಸೈನಿಕರು ಪಾಪಿ ಪಾಕಿಸ್ತಾನದ ಉಗ್ರರ ಮೇಲೆ ದಾಳಿ ನಡೆಸಿದ್ದಕ್ಕೆ ಪಾಕಿಸ್ತಾನಕ್ಕೆ ನೋವಾಯ್ತು. ಆದರೆ, ಇಲ್ಲಿನ ಕಾಂಗ್ರೆಸ್, ಜೆಡಿಎಸ್‍ಗೂ ಕಣ್ಣೀರು ಬಂತು ಎಂದು ಪ್ರಧಾನಿ ಮೋದಿ ಮೈತ್ರಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 5 ವರ್ಷದ ಹಿಂದೆ ಪಾಕಿಸ್ತಾನ ಭಾರತಕ್ಕೆ ಬೆದರಿಕೆ ಹಾಕುತ್ತಿತ್ತು. ಅಂದಿನ ಭಾರತ ಸರ್ಕಾರ ಹೆದರಿ ಕುಳಿತುಕೊಳ್ಳುತ್ತಿತ್ತು. ಆದರೆ, ಈಗ ಭಾರತ ಹೆದರುತ್ತಿಲ್ಲ. ಬದಲಾಗಿ ಹೆದರಿಸುತ್ತಿದೆ. ಇದರಿಂದ ಪಾಪಿಸ್ತಾನ ಬಾಲ ಮುದುರಿಕೊಂಡು ಕುಳಿತಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಕಿಸ್ತಾನದ ಮೇಲೆ ದಾಳಿ ನಡೆಸುವುದು ಸುತರಾಂ ಇಷ್ಟವಿಲ್ಲ ಎಂದ ಅವರು, ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಒಳ್ಳೆಯದೋ ? ಕೆಟ್ಟದ್ದೋ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ಸರ್ಜಿಕಲ್ ಸ್ಟ್ರೈಕ್‍ಗೆ ಇಡೀ ವಿಶ್ವವೇ ನಮ್ಮನ್ನು ಬೆಂಬಲಿಸಿತು. ಆದರೆ, ನಮ್ಮ ಪ್ರತಿಪಕ್ಷಗಳು ಅದನ್ನು ವಿರೋಧಿಸಿದವು. ಇಡೀ ವಿಶ್ವ ಭಾರತದೊಂದಿಗೆ ನಿಂತರೂ, ಭಾರತದಲ್ಲಿರುವ ಮಹಾಘಟಬಂಧನ್ ಸಂಸತ್‍ನಲ್ಲಿ ಖಂಡನಾ ನಿರ್ಣಯ ಮಂಡಿಸಲು ಯತ್ನಿಸಿತು. ಮುಖ್ಯವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಕಣ್ಣಲ್ಲಿ ಕಣ್ಣೀರು ಜಿನುಗಿತು. ಆದ್ದರಿಂದ, ನಾನು ಪ್ರತಿಪಕ್ಷಗಳನ್ನು ಕೇಳಲು ಬಯಸುತ್ತೇನೆ ನಿಮ್ಮ ವೋಟ್ ಬ್ಯಾಂಕ್ ಭಾರತದಲ್ಲಿದೆಯೋ? ಅಥವಾ ಪಾಕಿಸ್ತಾನದಲ್ಲೋ? ಎಂದು ಪ್ರಶ್ನಿಸಿದ ಅವರು, ವಿಪಕ್ಷಗಳಿಗೆ ಭಾರತೀಯ ಯೋಧರ ಮೇಲೆ ನಂಬಿಕೆಯಿಲ್ಲ. ಬಾಹ್ಯಾಕಾಶ ಕ್ಷೇತ್ರದಲ್ಲಿ ದೇಶ ಮಾಡಿರುವ ಸಾಧನೆಯ ಬಗ್ಗೆ ಹೆಮ್ಮೆ ಇಲ್ಲ. ಇಂಥವರಿಗೆ ಸರಿಯಾದ ಪಾಠ ಕಲಿಸುವ ಸಮಯ ಇದೀಗ ಒದಗಿ ಬಂದಿದೆ ಎಂದು ಹೇಳಿದರು

ಯಾವ ಸರ್ಕಾರ ಬೇಕು ನೀವೇ ನಿರ್ಧರಿಸಿ: ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸ್ಥಿರ ಸರಕಾರ ಬೇಕೋ? ಅಥವಾ 12 ಜನರ ಕೈಯಲ್ಲಿ ರಿಮೋಟ್ ಇರುವ ಸರ್ಕಾರ ಬೇಕೋ ಎಂಬುದನ್ನು ನಿರ್ಧರಿಸಿ ಎಲ್ಲರೂ ಮತ ಚಲಾಯಿಸಿ. ನಾಡಿನ ಯುವ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ದೇಶದ ಅಭಿವೃದ್ಧಿ ನಿಮ್ಮ ಕೈಯಲ್ಲಿದೆ. ಆದ್ದರಿಂದ ಮತದಾರರು ಯೋಚಿಸಿ ಕಮಲಕ್ಕೆ ಮತ ನೀಡಬೇಕು ಎಂದು ಅವರು ಮನವಿ ಮಾಡಿದರು.

ತಪ್ಪಿತಸ್ಥರು ಜೈಲಿಗೆ: ಈವರೆಗಿನ ಕಾಂಗ್ರೆಸ್‍ನ ನಾಲ್ಕು ತಲೆಮಾರಿನ ಮುಖಂಡರು ಭ್ರಷ್ಟಾಚಾರದಲ್ಲಿ ಮುಳುಗಿ ದೇಶದ ಹಿತಾಸಕ್ತಿ ಬಲಿಕೊಟ್ಟರು. 20ನೇ ಶತಮಾನದಲ್ಲಿ ಬೋಪೋರ್ಸ್ ಹಗರಣದಿಂದ ಆರಂಭಗೊಂಡು ನ್ಯಾಷನಲ್ ಹೆರಾಲ್ಡ್ ಹಗರಣ, ಕಾಮನ್ವೆಲ್ತ್ ಹಗರಣ, 2ಜಿ ಹಗರಣ, ಕಲ್ಲಿದ್ದಲು ಹಗರಣ ಸೇರಿ ಹಲವು ಹಗರಣ ಮಾಡಿದರು. ಅವರು ಮಾಡಿದ ಈ ಎಲ್ಲ ತಪ್ಪಿಗೆ 21ನೇ ಶತಮಾನದ ಯುವ ಮತದಾರರು ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಅವರು ಹೇಳಿದರು.

ಅಧಿಕಾರಕ್ಕಾಗಿ ಅಪವಿತ್ರ ಮೈತ್ರಿ

ನಾವು ಅಧಿಕಾರ ಅನುಭವಿಸಬೇಕು, ಬಿಜೆಪಿ ದೂರವಿಡಬೇಕು ಎಂಬ ಉದ್ದೇಶದಿಂದ ಚುನಾವಣೆಯಲ್ಲಿ ಸೋತಿದ್ದ ಎರಡು ಪಕ್ಷಗಳು ಸ್ವಾರ್ಥ ಮತ್ತು ಅಧಿಕಾರದಾಹದಿಂದ ಒಂದಾಗಿ ಅಪವಿತ್ರ ಸರ್ಕಾರ ರಚಿಸಿವೆ. ಕೇವಲ 38 ಸೀಟು ಬಂದ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಯಾರು ಸರ್ಕಾರ ನಡೆಸುತ್ತಿದ್ದಾರೋ ಗೊತ್ತಾಗುತ್ತಿಲ್ಲ. ಈ ಸರ್ಕಾರಕ್ಕೆ ಕರ್ನಾಟಕ ರಾಜ್ಯದ ಹಿತಾಸಕ್ತಿಯ ಬಗ್ಗೆ ಎಳ್ಳಷ್ಟೂ ಗಮನವಿಲ್ಲ. ಕೇಂದ್ರದಲ್ಲೂ ಇಂಥದ್ದೇ ಮಹಾಘಟಬಂಧನ್ ಸರ್ಕಾರ ಅಧಿಕಾರಕ್ಕೆ ಬಂದರೆ, ರಿಮೋಟ್ ಹಿಡಿದು ಅದನ್ನು ನಿಯಂತ್ರಿಸಿಕೊಂಡು, ಮನಬಂದಂತೆ ಆಡಳಿತ ನಡೆಸಬಹುದು ಎಂಬುದು ಇವುಗಳ ಲೆಕ್ಕಾಚಾರವಾಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ದಶಕಗಳಿಂದಲೂ ಇಲ್ಲಿನ ಭದ್ರಾ ಮೇಲ್ಡಂಡೆ ಯೋಜನೆ ನೆನೆಗುದಿಗೆ ಬಿದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಜನರ ಹಿತಾಸಕ್ತಿ ಕಾಯುವ ಬಗ್ಗೆ ಆಸಕ್ತಿ ಇಲ್ಲ. ಇದ್ದಿದ್ದರೆ, ಈ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸುತ್ತಿದ್ದರು ಎಂದು ಹೇಳಿದರು.

ದಾವಣಗೆರೆ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜ್, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ನಾರಾಯಣಸ್ವಾಮಿ, ಶಾಸಕರಾದ ಶ್ರೀರಾಮಲು, ಅಶೋಕ್, ಗೋವಿಂದ ಕಾರಜೋಳ, ಎಂ.ಪಿ. ರೇಣುಕಾಚಾರ್ಯ, ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿಗೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲಾ ಲೋಕಸಭಾ ವತಿಯಿಂದ ಬಿಜೆಪಿಯ ಕಮಲ ಚಿಹ್ನೆಯನ್ನು ಒಳಗೊಂಡಿದ್ದ ಬಿಳಿ ಬಣ್ಣದ ಕಂಬಳಿ ಮತ್ತು ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ರಥದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿ, ಸನ್ಮಾನಿಸಲಾಯಿತು.

ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ

ಪ್ರಧಾನಿ ಮೋದಿ ಎಂದಿನಂತೆ ಕನ್ನಡದಲ್ಲೇ ಭಾಷಣ ಆರಂಭಿಸಿ, ಆತ್ಮೀಯ ನಾಗರಿಕ ಬಂಧುಗಳೇ ನಿಮಗೆಲ್ಲರಿಗೂ ನಿಮ್ಮ ಚೌಕಿದಾರ ನರೇಂದ್ರ ಮೋದಿ ಮಾಡುವ ನಮಸ್ಕಾರಗಳು. ಎರಡು ದಿನಗಳ ಹಿಂದೆ ನಾವೆಲ್ಲ ಯುಗಾದಿ ಹಬ್ಬ ಆಚರಿಸಿದ್ದೇವೆ. ಕರ್ನಾಟಕದ ನನ್ನ ಆತ್ಮೀಯ ಬಂಧು-ಮಿತ್ರರಿಗೆ ಯುಗಾದಿ ಹಬ್ಬದ ಶುಭಾಶಯಗಳು. ಶರಣರ ನಾಡಾದ ಚಿತ್ರದುರ್ಗ, ಸಿದ್ದಗಂಗಾ ಮಠದ ಶತಾಯುಷಿಗಳನ್ನು ಮೋದಿ ಸ್ಮರಿಸಿದರು.

ಅವಳಿ ಜಿಲ್ಲೆಗೆ ಸೋಲಾರ್ ಅಭಿವೃದ್ಧಿ

ದಾವಣಗೆರೆ ಹಾಗೂ ಚಿತ್ರದುರ್ಗ ಅವಳಿ ಜಿಲ್ಲೆಗಳಲ್ಲಿ ಸೋಲಾರ್ ಅಭಿವೃದ್ಧಿ ಪಡಿಸಲಾಗುವುದು. ಅಲ್ಲದೆ, ದಾವಣಗೆರೆಯನ್ನು ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಗೊಳಿಸಲು ನಾವು ಬದ್ಧರಾಗಿದ್ದೇವೆ. ಭದ್ರಾ ಮೇಲ್ಡಂಡೆ ಯೋಜನೆ,ಅಪ್ಪರ್ ಭದ್ರಾ ಯೋಜನೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X