Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಧಾನಿ ಮೋದಿ ಓರ್ವ ವ್ಯಕ್ತಿಯಲ್ಲ,...

ಪ್ರಧಾನಿ ಮೋದಿ ಓರ್ವ ವ್ಯಕ್ತಿಯಲ್ಲ, ಭವಿಷ್ಯದ ನವಭಾರತ ನಿರ್ಮಾಣದ ಶಕ್ತಿ: ಶಾಸಕ ಸುನೀಲ್

ವಾರ್ತಾಭಾರತಿವಾರ್ತಾಭಾರತಿ9 April 2019 10:29 PM IST
share
ಪ್ರಧಾನಿ ಮೋದಿ ಓರ್ವ ವ್ಯಕ್ತಿಯಲ್ಲ, ಭವಿಷ್ಯದ ನವಭಾರತ ನಿರ್ಮಾಣದ ಶಕ್ತಿ: ಶಾಸಕ ಸುನೀಲ್

ಬಂಟ್ವಾಳ, ಎ. 9: ಪ್ರಧಾನಿ ನರೇಂದ್ರ ಮೋದಿಯವರು ಓರ್ವ ವ್ಯಕ್ತಿಯಲ್ಲ, ಭವಿಷ್ಯದ ನವ ಭಾರತ ನಿರ್ಮಾಣದ ಶಕ್ತಿಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ಉಸ್ತುವಾರಿ, ಶಾಸಕ ಸುನೀಲ್ ಕುಮಾರ್  ಹೇಳಿದ್ದಾರೆ.

ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗಿಂತ ವಯಸ್ಸಿನಲ್ಲಿ ಮೋದಿ ಹಿರಿಯರು, ಆದರೆ ನರೇಂದ್ರ ಮೋದಿಯವರು ಯುವಜನತೆಯ ಐಕಾನ್ ಆಗಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಿ ರಚಿಸಿರುವ ಜಂಟಿ ಪ್ರಣಾಳಿಕೆಯಾಗಿದೆ ಎಂದ ಟೀಕಿಸಿದ ಅವರು ಬಿಜೆಪಿ ದೇಶದ ಮುಂದಿನ ಭವಿಷ್ಯ ಮತ್ತು ರೈತ ಪರವಾದ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ ಎಂದರು.

ದ.ಕ.ಜಿಲ್ಲೆಯಲ್ಲಿ ಮೂರು ಹಂತದ ಮನೆ ಮನೆ ಭೇಟಿ ನೀಡಿ ಪ್ರಚಾರ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರದ 1861 ಬೂತ್ ಗಳಲ್ಲಿಯೂ ಮೊದಲ ಹಂತದ ಪ್ರಚಾರ ಕಾರ್ಯ ಮುಗಿದಿದ್ದು, ಎ.10 ರಿಂದ ಎರಡನೇ ಹಂತದ ಮನೆ, ಮನೆ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು. 

ಎ.13 ರಂದು ಸಂಜೆ 3.30ಕ್ಕೆ  ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಭಾಗವಹಿಸುವ ವಿಜಯಸಂಕಲ್ಪ ರ್ಯಾಲಿಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಈ ರ್ಯಾಲಿ ಚುನಾವಣಾ ಪ್ರಚಾರದ ದಿಕ್ಕನ್ನೇ ಬದಲಿಸಲಿದ್ದು, ಬಂಟ್ವಾಳ ಕೇತ್ರದಿಂದಲೂ ಶಾಸಕ ಯು. ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರ ಮಂದಿ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ. ಈ ರ್ಯಾಲಿಯಲ್ಲಿ 5 ಸಾವಿರ ಮಂದಿ ಕಾರ್ಯಕರ್ತರಿಗೆ ಚೌಕಿದಾರಪೇಟೆ ಧರಸಲು ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವವರು ಸಂಜೆ 3.30ರ ಒಳಗಾಗಿ ಮೈದಾನದ ಒಳಗೆ ಪ್ರವೇಶಿ ಸಬೇಕು ಎಂದು ಸುನೀಲ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ರಾಜೇಶ್ ನಾಯ್ಕ್ ,ಸಹ ಪ್ರಭಾರಿ ಪ್ರತಾಪ್ ಸಿಂಹ ನಾಯಕ್,ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಸಂಚಾಲಕ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ, ಬಂಟ್ವಾಳ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಕಾರ್ಯದರ್ಶಿ ರಮಾನಾಥ ರಾಯಿ, ಮಾಜಿ ಪುರಸಭಾಧ್ಯಕ್ಷ ದಿನೇಶ್ ಭಂಡಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X