Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರನ್ನು ಸುಸ್ಥಿರ, ಆರ್ಥಿಕ ಸದೃಢತೆ...

ರೈತರನ್ನು ಸುಸ್ಥಿರ, ಆರ್ಥಿಕ ಸದೃಢತೆ ಹೊಂದಿದ ಕೃಷಿರನ್ನಾಗಿ ರೂಪಿಸಿ: ಆರ್.ವಿ.ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ9 April 2019 10:43 PM IST
share
ರೈತರನ್ನು ಸುಸ್ಥಿರ, ಆರ್ಥಿಕ ಸದೃಢತೆ ಹೊಂದಿದ ಕೃಷಿರನ್ನಾಗಿ ರೂಪಿಸಿ: ಆರ್.ವಿ.ದೇಶಪಾಂಡೆ

ಬೆಂಗಳೂರು, ಎ.9: ರೈತರ ಸಾಲ ಮನ್ನಾ ಮಾಡಿ ಋಣಮುಕ್ತರನ್ನಾಗಿ ಮಾಡುವ ಬದಲಿಗೆ ಅವರನ್ನು ಸುಸ್ಥಿರ ಮತ್ತು ಆರ್ಥಿಕವಾಗಿ ಸದೃಢತೆ ಹೊಂದಿದ ಕೃಷಿಕರನ್ನಾಗಿ ರೂಪಿಸುವ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.

ಮಂಗಳವಾರ ನಗರದಲ್ಲಿ ನಡೆದ ಹೈಡ್ರೊಫೋನಿಕ್ (ಮಣ್ಣು ರಹಿತ ಜಲಕೃಷಿ ಪದ್ಧತಿ) ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಗರದ ಫಾರ್ಮ್ಸ್ 2050 ಮತ್ತು ಅಮೆರಿಕದ ಆ್ಯಮ್‌ಹೈಡ್ರೊ ಕಂಪೆನಿಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಿನೇ ದಿನೇ ಕೃಷಿಭೂಮಿ ಸಂಕುಚಿತವಾಗುತ್ತಿದ್ದು, ಭವಿಷ್ಯದಲ್ಲಿ ಊರ್ಧ್ವಮುಖಿ ಕೃಷಿಯತ್ತ ಗಮನ ಹರಿಸುವ ಅಗತ್ಯವಿದೆ. ನಗರೀಕರಣ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಹೈಡ್ರೊಫೋನಿಕ್ ಕೃಷಿ ತಂತ್ರಜ್ಞಾನ ರೈತರ ಪಾಲಿನ ಆಶಾಕಿರಣವಾಗಿದೆ ಎಂದರು.

ಕೃಷಿ ಸಚಿವ ಶಿವಶಂಕರ ರೆಡ್ಡಿ ಮಾತನಾಡಿ, ಕಡಿಮೆ ಸಂಪನ್ಮೂಲದ ಸೂಕ್ಷ್ಮ ಕೃಷಿ ಪದ್ಧತಿ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಹೈಡ್ರೊಫೋನಿಕ್ ಕೃಷಿಯನ್ನು ಉತ್ತೇಜಿಸುವ ಅಗತ್ಯವಿದೆ ಎಂದರು.

ಫಾರ್ಮ್ಸ್ 2050 ಕಂಪನಿಯ ಮುಖ್ಯಸ್ಥರಾದ ಬಿ.ಎಂ.ಪಾಟೀಲ ಅವರು, ಮಧ್ಯಮ ವರ್ಗದ ಕೃಷಿಕರು ಆಧುನಿಕ ತಂತ್ರಜ್ಞಾನವನ್ನು ಸರಳವಾಗಿ ಬಳಸಿಕೊಳ್ಳುವತ್ತ ಮುಖ ಮಾಡಬೇಕು. ಭವಿಷ್ಯದಲ್ಲಿ ಎದುರಾಗಲಿರುವ ನೀರಿನ ಅಭಾವದಲ್ಲಿ, ಸುಲಭ ವಿಧಾನಗಳ ಮೂಲಕ ಹೇಗೆ ಕೃಷಿ ಮಾಡಬೇಕು ಎಂಬುದರತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಆ್ಯಮ್‌ಹೈಡ್ರೊ ಕಂಪೆನಿಯ ಮುಖ್ಯ ಕಾರ್ಯ ನಿರ್ವಾಹಕಿ ಜೆನ್ನಿ ಹ್ಯಾರಿಸ್ ಮತ್ತು ತಾಂತ್ರಿಕ ನಿರ್ದೇಶಕ ಜೋ ಸ್ವಾರ್ಟ್ಸ್ ಪ್ರಶ್ನೋತ್ತರ ಸಂವಾದ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಗಹ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ಆ್ಯಮ್‌ಹೈಡ್ರೊ ಕಂಪೆನಿಯ ಸಿಇಒ ಜೆನ್ನಿ ಹ್ಯಾರಿಸ್, ತಾಂತ್ರಿಕ ನಿರ್ದೇಶಕ ಜೋ ಸ್ಪಾರ್ಟ್ಸ್ ಹಾಗೂ ಬಿ.ಎಂ.ಪಾಟೀಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X