Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಸ್ಥಾನಕ್ಕೆ ಮೋದಿಗೆ ಪರ್ಯಾಯ...

ಪ್ರಧಾನಿ ಸ್ಥಾನಕ್ಕೆ ಮೋದಿಗೆ ಪರ್ಯಾಯ ಅಭ್ಯರ್ಥಿ ಇಲ್ಲ: ರಾಮ್ ಮಾಧವ್

ವಾರ್ತಾಭಾರತಿವಾರ್ತಾಭಾರತಿ10 April 2019 6:07 PM IST
share
ಪ್ರಧಾನಿ ಸ್ಥಾನಕ್ಕೆ ಮೋದಿಗೆ ಪರ್ಯಾಯ ಅಭ್ಯರ್ಥಿ ಇಲ್ಲ: ರಾಮ್ ಮಾಧವ್

ಬೆಂಗಳೂರು, ಎ.10: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಸ್ಥಾನವನ್ನು ನರೇಂದ್ರ ಮೋದಿಯನ್ನು ಬಿಟ್ಟರೆ ಸಮರ್ಥವಾಗಿ ನಿಭಾಯಿಸಬಲ್ಲ ಪರ್ಯಾಯ ಅಭ್ಯರ್ಥಿ ಯಾರು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅಭಿಪ್ರಾಯ ಪಟ್ಟಿದ್ದಾರೆ.

ಬುಧವಾರ ನಗರದ ವಿ.ವಿ.ಪುರಂನಲ್ಲಿರುವ ಶ್ರೀ ಸಂಭವ್ ನಾಥ್ ಭವನದಲ್ಲಿ ಆಯೋಜಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಂದು ಕಡೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿಯಾಗಲು ಕನಸು ಕಾಣುತ್ತಿದ್ದು, ಯಾರೊಬ್ಬರು ಮೋದಿಯಷ್ಟು ಸಮರ್ಥರಲ್ಲ, ಭಾರತದಲ್ಲಿ ಈಗ ಯಾರಿಂದಲೂ ಮೋದಿಗೆ ಪರ್ಯಾಯವಾಗಿ ನಿಲ್ಲುವವರು ಇಲ್ಲ ಎಂದು ಅವರು ಹೇಳಿದರು.

ಈ ಬಾರಿಯ ಚುನಾವಣೆಯ ಫಲಿತಾಂಶ ಆರು ವಾರಗಳ ಮೊದಲೆ ಹೊರಬಿದ್ದಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಜನರು ನಿರ್ಧರಿಸಿದ್ದಾರೆ. ಅದೇ ರೀತಿಯಲ್ಲಿ ಬೆಂಗಳೂರು ದಕ್ಷಿಣದಲ್ಲೂ ಜನರ ಆಶೀರ್ವಾದದಿಂದ ತೇಜಸ್ವಿ ಸೂರ್ಯ ಗೆಲುವಿನ ದಟ್ಟ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಹೇಳಿದರು.

ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ ವಿರೋಧ ಪಕ್ಷಗಳು ಅಲೆ ಎಬ್ಬಿಸುತ್ತವೆ. ಆದರೆ, ಈ ಬಾರಿ ಮಾತ್ರ ಆಡಳಿತ ಪಕ್ಷವೇ ಈ ಅಲೆಯನ್ನು ಸೃಷ್ಟಿಸಿದೆ ಎಂದ ಅವರು, ಶ್ರೀಸಾಮಾನ್ಯ ಜನರು ಮೋದಿಯನ್ನು ಮತ್ತೊಮ್ಮೆ ಬಯಸುತ್ತಿದ್ದಾರೆ ಎಂದರು.

ಮೋದಿ ಜನರ ಜೀವನಾಡಿಯನ್ನು ಅರ್ಥ ಮಾಡಿಕೊಂಡಿದ್ದು, ಅವರಿಗೆ ಏನು ಬೇಕು ಎಂಬುದನ್ನು ಚೆನ್ನಾಗಿ ಅರಿತಿದ್ದಾರೆ. ಈ ವೇಳೆ ಕಾಂಗ್ರೆಸ್‌ನ ಜಾಗತಿಕ ಕನಿಷ್ಟ ಆದಾಯ ಯೋಜನೆಯನ್ನು ಹೀಯಾಳಿಸಿದ ರಾಮ್ ಮಾಧವ್, ನಾಗರಿಕರನ್ನು ಸೋಮಾರಿಗಳನ್ನಾಗಿಸಲು ಯೋಜಿಸಿರುವ ನೀತಿ ಇದು. ಬಿಜೆಪಿ ಅದರ ಬದಲು ದೇಶದಲ್ಲಿ ಉದ್ಯೋಗದ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿದೆ ಎಂದರು.

ಮನಮೋಹನ್ ಸಿಂಗ್ ಭ್ರಷ್ಟರಾಗಿರಲಿಲ್ಲ: ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರಕಾರದಲ್ಲಿ ಒಂದೇ ಒಂದು ಭ್ರಷ್ಟಾಚಾರ ನಡೆದಿಲ್ಲ. ಈ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಭ್ರಷ್ಟರಾಗಿರಲಿಲ್ಲ, ಆದರೆ, ಅವರ ಸುತ್ತಲಿನ ವಾತಾವರಣ ಭ್ರಷ್ಟವಾಗಿತ್ತು ಎಂದು ರಾಮ್ ಮಾಧವ್ ತಿಳಿಸಿದರು.

ಭಾರತದಲ್ಲಿ ಈಗ ಕಾರ್ಯಾಂಗ, ಆಡಳಿತ ವರ್ಗ, ಭ್ರಷ್ಟಾಚಾರ ರಹಿತ ಕಡೆಗೆ ಸಾಗುತ್ತಿದೆ, ಅದಕ್ಕೆ ಕಾರಣ ನೇರವಾಗಿ ಫಲಾನುಭವಿಗಳ ಖಾತೆಗೆ ನಗದು ನೇರ ಜಮೆ ಯೋಜನೆಗಳು. ಜೊತೆಗೆ ಮೋದಿ ಸರಕಾರ ಜಾರಿಗೆ ತಂದ ನವೋದ್ಯಮ, ಸ್ಟಾರ್ಟ್ ಅಪ್ ಯೋಜನೆಗಳಿಂದ ಏಳು ಕೋಟಿ ಜನರಿಗೆ ಭದ್ರತಾ ರಹಿತ ಸಾಲಗಳನ್ನು ನೀಡಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಹೇಳಿದರು.

ಭಾರತ ಜಾಗತಿಕವಾಗಿ ಐದು ತ್ವರಿತಗತಿಯ ರಾಷ್ಟ್ರಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ, ಬಲಿಷ್ಠ ಭಾರತವನ್ನು ನಿರ್ಮಿಸಿದ್ದು ಮೋದಿ ಸರಕಾರದ ಮತ್ತೊಂದು ಗರಿ. ದೇಶದ ನಾಗರಿಕರ ಯೋಚನಾ ಶೈಲಿಯು ಈಗ ಬದಲಾಗಿದೆ ಎಂದು ರಾಮ್ ಮಾಧವ್ ತಿಳಿಸಿದರು.

ಸಂವಾದದಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್, ಬಿಜೆಪಿ ನಗರ ಜಿಲ್ಲಾ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X