Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಗೆಲ್ಲಿಸಿದರೆ ಬಡವರ ಪರ ಸೇವೆ...

ಕಾಂಗ್ರೆಸ್ ಗೆಲ್ಲಿಸಿದರೆ ಬಡವರ ಪರ ಸೇವೆ ಮಾಡಲು ಅವಕಾಶವಾಗುತ್ತದೆ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ10 April 2019 6:44 PM IST
share
ಕಾಂಗ್ರೆಸ್ ಗೆಲ್ಲಿಸಿದರೆ ಬಡವರ ಪರ ಸೇವೆ ಮಾಡಲು ಅವಕಾಶವಾಗುತ್ತದೆ: ರಮಾನಾಥ ರೈ

ಬಂಟ್ವಾಳ, ಎ. 10: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಜನರ ಬೆಂಬಲ ವ್ಯಕ್ತವಾಗಿದ್ದು, ದ.ಕ. ಕ್ಷೇತ್ರದಿಂದ ಕಾಂಗ್ರೆಸ್ ಗೆಲ್ಲಿಸಿದರೆ ಬಡವರ ಪರ ಸೇವೆ ಮಾಡಲು ಅವಕಾಶವಾಗುತ್ತದೆ ಎಂದು ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳದ ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೊದಲ ಸುತ್ತಿನ ಪ್ರಚಾರ ಪೂರ್ಣಗೊಂಡಿದ್ದು, ಎ. 11ರಂದು ಬಂಟ್ವಾಳದಲ್ಲಿ 2 ನೆ ಸುತ್ತಿನ ಬಹಿರಂಗ ಪ್ರಚಾರ ನಡೆಯಲಿದೆ. ಬೆಳಗ್ಗೆ 7 ಕ್ಕೆ ಸರಪಾಡಿ, 7.30ಕ್ಕೆ ಕಕ್ಯಬೀಡು, 8 ಗಂಟೆಗೆ ಕಕ್ಯಪದವು, 8.30ಕ್ಕೆ ಕಾವಳಕಟ್ಟೆ, 9ಕ್ಕೆವಗ್ಗ, 9.15ಕ್ಕೆ ಕಾರಿಂಜ, 9.30ಕ್ಕೆ ಪೂಂಜ, 10ಕ್ಕೆ ಕೆರೆಬಳಿ, 10.30ಕ್ಕೆ ಸಂಗಬೆಟ್ಟು, 10.45ಕ್ಕೆ ಕಲ್ಕುರಿ, 11 ಗಂಟೆಗೆ ಸಿದ್ದಕಟ್ಟೆಯ ವಿವಿಧೆಡೆ ಭೇಟಿ, 11.30ಕ್ಕೆ ಬಡ್ಡಕಟ್ಟೆಯಿಂದ ಬಸ್ತಿಪಡ್ಪುವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದ ಅವರು, ಮಧ್ಯಾಹ್ನ 2 ಗಂಟೆಗೆ ಕರೋಪಾಡಿ, 3 ಗಂಟೆಗೆ ಕನ್ಯಾನದಲ್ಲಿ ಸಾರ್ವಜನಿಕ ಸಭೆ, 4 ಗಂಟೆಗೆ ಸಾಲೆತ್ತೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ 5ಕ್ಕೆ ನಂದಾವರ, 6ಕ್ಕೆ ಗೂಡಿನಬಳಿಯಲ್ಲಿ ಪಾದಯಾತ್ರೆ ನಡೆಸಿ, 7ಕ್ಕೆ ಕೈಕಂಬ ಜಂಕ್ಷನ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಯುಪಿಎ ಸರಕಾರದ ಹಲವು ಯೋಜನೆಗಳು ಬಡವರಿಗೆ ಪ್ರಯೋಜನ ಲಭಿಸಿದ್ದರೆ, ಉದ್ಯಮಪತಿಗಳಿಗೆ ಲಾಭದಾಯಕವಾಗುವ ಯೋಜನೆಗಳನ್ನು ಎನ್‍ಡಿ.ಎ ಮಾಡಿತು. ಇದರ ಪರಿಣಾಮ ಲಕ್ಷಾಂತರ ಮಧ್ಯಮ, ಬಡ ವರ್ಗದವರು ಬೀದಿಗೆ ಬರುವಂತಾಯಿತು ಎಂದು ಹೇಳಿದರು.

ಶಿಕ್ಷಣ, ಆರೋಗ್ಯ, ಸಾಕ್ಷರತೆ ಸಹಿತ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರಕಾರ ತಂದಿತ್ತು. ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು ಯೋಜನೆಗಳಿಂದಾಗಿ ಜನರಿಗೆ ಲಾಭವಾಗಿತ್ತು. ಹಲವು ಕಾಯ್ದೆಗಳು ಜನರಿಗೆ ವರವಾದರೆ, ಬಿಜೆಪಿಯ ಯಾವುದೇ ಯೋಜನೆಗಳು ಜನರಿಗೆ ಲಾಭ ನೀಡದೆ ಕೇವಲ ಉದ್ಯಮ ಪತಿಗಳಿಗೆ, ಬಡವರಲ್ಲದವರಿಗೆ ಉಪಕಾರವಾಗಿದೆ ಎಂದು ಆರೋಪಿಸಿದರು.

ಪಣಂಬೂರಿನಲ್ಲಿರುವ ಡಾಕ್‍ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಎನ್‍ಡಿಎ ಸರಕಾರದ ಅವಧಿಯಲ್ಲಿ ಇದ್ದಕ್ಕಿದ್ದಂತೆ ಮುಂಬಯಿಗೆ ವರ್ಗಾಯಿಸಲಾ ಯಿತು. ನೂರಾರು ದಕ್ಷಿಣ ಕನ್ನಡದ ಕಾರ್ಮಿಕರು ಬೀದಿ ಪಾಲಾಗುವ ಸ್ಥಿತಿ ಬಂತು. ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರಿಗೆ ವೇತನ ನೀಡದೆ ನಾಲ್ಕಾರು ತಿಂಗಳಾಯಿತು. ಆ ಸಂದರ್ಭ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ಎಲ್ಲಿ ಹೋಗಿದ್ದರು ? ಎಂದು ಅವರು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲಿಯಾನ್, ಪಕ್ಷ ಪ್ರಮುಖರಾದ ಸಂಜೀವ ಪೂಜಾರಿ, ಸದಾಶಿವ ಬಂಗೇರ, ಜಗದೀಶ ಕೊಯ್ಲ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X