ಮೈತ್ರಿ ಅಭ್ಯರ್ಥಿ ರಿಝ್ವಾನ್ ಅರ್ಶದ್ ಪರ ನಟಿ ಖುಷ್ಬು ಮತಯಾಚನೆ

ಬೆಂಗಳೂರು, ಎ. 10: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಝ್ವಾನ್ ಅರ್ಶದ್ ಪರ, ಖ್ಯಾತ ನಟಿ, ಎಐಸಿಸಿ ವಕ್ತಾರರಾದ ಖುಷ್ಬು ಅವರು ಕ್ಷೇತ್ರದ ವಿವಿಧೆಡೆಗಳಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಬುಧವಾರ ಇಲ್ಲಿನ ಹೊಯ್ಸಳ ನಗರದಲ್ಲಿ ರೋಡ್ ಶೋ ನಡೆಸಿದ ಖುಷ್ಬು ಕನ್ನಡದಲ್ಲೆ ಪ್ರಚಾರ ಭಾಷಣ ಮಾಡಿದರು. ರಿಝ್ವಾನ್ ಅರ್ಶದ್ ಯುವಕರಿದ್ದು ಅವರನ್ನು ಕ್ಷೇತ್ರದ ಜನತೆ ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಿ ಮೋದಿ 5 ವರ್ಷ ಏನೇನು ಮಾಡಿದ್ದಾರೆಂದು ಎಲ್ಲರಿಗೂ ಗೊತ್ತು. ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಮೋದಿ ಸುಳ್ಳು ಹೇಳುತ್ತಿದ್ದು, ಮತ್ತೆ ಅಧಿಕಾರ ಕೊಡಿ ಎಂದು ಕೇಳುತ್ತಿದ್ದಾರೆ. ಈ ಭಾರಿ ಅವರನ್ನ ಅಧಿಕಾರದಿಂದ ಕೆಳಗಿಳಿಸಿ ರಾಹುಲ್ ಗಾಂಧಿಯವರನ್ನ ಪ್ರಧಾನಿಯಾಗಿ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಶಾಸಕ ಎನ್.ಎ.ಹಾರಿಸ್, ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ರಿಝ್ವಾನ್ ಅರ್ಶದ್ ಸೇರಿದಂತೆ ಸ್ಥಳೀಯ ಮುಖಂಡರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.






.jpg)
.jpg)




