Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಕ್ಫ್ ಆಸ್ತಿ ಕಬಳಿಕೆ ವರದಿ ಮಂಡಿಸಲು ಕೋಟ...

ವಕ್ಫ್ ಆಸ್ತಿ ಕಬಳಿಕೆ ವರದಿ ಮಂಡಿಸಲು ಕೋಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 April 2019 8:39 PM IST
share
ವಕ್ಫ್ ಆಸ್ತಿ ಕಬಳಿಕೆ ವರದಿ ಮಂಡಿಸಲು ಕೋಟ ಆಗ್ರಹ

ಮಂಗಳೂರು, ಎ.10: ಅನ್ವರ್ ಮಾಣಿಪ್ಪಾಡಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭ ವಕ್ಫ್ ಆಸ್ತಿಗಳ ಕಬಳಿಕೆ ಕುರಿತಾಗಿ ಒಂದು ವರದಿ ನೀಡಿದ್ದರು. ಅದರಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿತ್ತು. ಆ ವರದಿಯನ್ನು ಸದನಕ್ಕೆ ಮಂಡಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

ನಗರದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 2.5 ಲಕ್ಷ ಕೋಟಿ ವೌಲ್ಯದ 27 ಸಾವಿರ ಎಕರೆ ಜಮೀನು ಕಬಳಿಕೆ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅದನ್ನು ಸದನದ ಮುಂದಿಡಲು ತಡೆ ಒಡ್ಡುತ್ತಿರುವವರು ಯಾರು ಎಂದು ಪ್ರಶ್ನಿಸಿದರು.

ರಾಷ್ಟ್ರಕ್ಕಾಗಿ ಕಠಿಣ ನಿರ್ಧಾರ: ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 370ನೇ ವಿಧಿಯನ್ನು ರದ್ದು ಪಡಿಸುವ ಸ್ಪಷ್ಟ ಭರವಸೆ ನೀಡಿದೆ. ಸೌಹಾರ್ದದಿಂದ ರಾಮಮಂದಿರ ನಿರ್ಮಾಣದ ಆಶ್ವಾಸನೆ ನೀಡಿದೆ. ನದಿ ಜೋಡಣೆಯ ಬಗ್ಗೆ ಬಿಜೆಪಿ ಸ್ಪಷ್ಟ ಕಲ್ಪನೆ ಹೊಂದಿದೆ. ರಾಷ್ಟ್ರಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳು ಅಗತ್ಯ ಎಂಬುದನ್ನು ಪಕ್ಷ ಮನಗಂಡಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಲೋಕಸಭಾ ಕ್ಷೇತ್ರದ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳು ಮತ್ತು 1,861 ಮತಗಟ್ಟೆಗಳ ಕಾರ್ಯಕರ್ತರ ಅನುಭವ ಮತ್ತು ಅವರು ನೀಡುವ ಮಾಹಿತಿಯಂತೆ ದೇಶ ಮೊದಲು ಎನ್ನುವವರ ಪರವಾಗಿ ಮತದಾರರಿದ್ದಾರೆ. ಅಭ್ಯರ್ಥಿ ನಳಿನ್‌ಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿಯನ್ನು ಬೆಂಬಲಿಸಲು ಮತದಾರರು ಉತ್ಸುಕರಾಗಿದ್ದಾರೆ ಎಂದು ಅವರು ಹೇಳಿದರು.

ಅಭಿವೃದ್ಧಿ ವಿಜಯಕ್ಕೆ ಸಹಕಾರಿ: ಕೇಂದ್ರದಲ್ಲಿ ಎನ್‌ಡಿಎ ಸರಕಾರ ಕೈಗೊಂಡಿರುವ ಜನ ಕಲ್ಯಾಣ ಕಾರ್ಯಕ್ರಮಗಳು, ನರೇಂದ್ರ ಮೋದಿಯವರ ಕೆಲವೊಂದು ದಿಟ್ಟ ನಿರ್ಧಾರಗಳು ಹಾಗೂ 10 ವರ್ಷಗಳಲ್ಲಿ ನಳಿನ್‌ಕುಮಾರ್ ಕಟೀಲು ಅವರ ವ್ಯಾಪಕ ಜನಸಂಪರ್ಕ, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿರುವ ರೀತಿ ಮತ್ತು ಅಪಾರ ಅಭಿವೃದ್ಧಿ ಅದ್ಭುತ ವಿಜಯಕ್ಕೆ ಸಹಕಾರಿಯಾಗಲಿದೆ ಎಂದು ಶ್ರೀನಿವಾಸ ಪೂಜಾರಿ ನುಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ನಿತಿನ್‌ಕುಮಾರ್, ವಿಕಾಸ್ ಪುತ್ತೂರು ಮತ್ತು ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.

‘ಕೇಂದ್ರದ ಯೋಜನೆಗೆ ಮೈತ್ರಿ ಸರಕಾರ ಅಡ್ಡಗಾಲು’

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜಾರಿ ಮಾಡಲು ಆಸಕ್ತಿ ಹೊಂದಿಲ್ಲ. ಸರಕಾರ ಅಸಹಕಾರ ನೀಡುವ ಮೂಲಕ ಕೇಂದ್ರದ ಯೋಜನೆಗಳು ಜನತೆಯ ಬಳಿಗೆ ತಲುಪದಂತೆ ಅಡ್ಡಗಾಲು ಹಾಕುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಕಿಸಾನ್ ಸಮ್ಮಾನ್‌ಗೆ ರಾಜ್ಯದ 76 ಲಕ್ಷ ರೈತರು ಅರ್ಹರಿದ್ದರೂ ಕೇವಲ 16 ಲಕ್ಷ ರೈತರ ಪಟ್ಟಿ ಮಾಡಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ತುರ್ತು ಸಂದರ್ಭದಲ್ಲೂ ಸರಕಾರಿ ಆಸ್ಪತ್ರೆಗಳಿಗೆ ತೆರಳಿ ಹೆಸರು ನೋಂದಾಯಿಸಬೇಕು ಎಂಬ ನಿಯಮ ರೂಪಿಸಿ ಆರೋಗ್ಯ ಸೌಲಭ್ಯದಿಂದ ಬಡವರನ್ನು ವಂಚಿಸುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X