Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಅಭಿವೃದ್ಧಿ ಬಗ್ಗೆ ಭಾರತ...

ಆರ್ಥಿಕ ಅಭಿವೃದ್ಧಿ ಬಗ್ಗೆ ಭಾರತ ಪಾರದರ್ಶಕವಾಗಿರಲೇಬೇಕು : ಐಎಂಎಫ್ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್

ಐಎಂಎಫ್ ಹೆಸರು ಹೇಳಿ ಮೋದಿ ಬೆನ್ನು ತಟ್ಟಿಕೊಂಡ ಬೆನ್ನಿಗೇ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ11 April 2019 11:32 AM IST
share
ಆರ್ಥಿಕ ಅಭಿವೃದ್ಧಿ ಬಗ್ಗೆ ಭಾರತ ಪಾರದರ್ಶಕವಾಗಿರಲೇಬೇಕು : ಐಎಂಎಫ್ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್

ಹೊಸದಿಲ್ಲಿ, ಎ. 11: ಭಾರತದ ಅಂದಾಜು ಪ್ರಗತಿ ದರವನ್ನು 2019-20 ಹಾಗೂ 2020-21 ಆರ್ಥಿಕ ವರ್ಷಗಳಿಗೆ 20 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸುವ ಮೂಲಕ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾತ್ ಭಾರತಕ್ಕೆ ಜಿಡಿಪಿ ಲೆಕ್ಕಾಚಾರದ ಬಗ್ಗೆ  ಸಂದೇಶವೊಂದನ್ನು ನೀಡಿದ್ದಾರೆ.

ಭಾರತ ತನ್ನ ಪ್ರಗತಿ ದರವನ್ನು ಲೆಕ್ಕ ಹಾಕುವ ವಿಧಾನದಲ್ಲಿ ಇನ್ನೂ ಕೆಲ ಸಮಸ್ಯೆಗಳಿವೆ,  ಹೊರಬರುತ್ತಿರುವ ಹೊಸ ಸಂಖ್ಯೆಗಳ ಮೇಲೆ ಐಎಂಎಫ್ ನಿಗಾ ಇಡಲಿದೆ ಎಂದು ಅವರು ಹೇಳಿದ್ದಾರೆ. ''ಭಾರತದಲ್ಲಿನ ನಮ್ಮ ಸಹೋದ್ಯೋಗಿಗಳೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದು ಭಾರತ ಪ್ರಕಟಿಸುವ ಹೊಸ ಅಂಕಿಸಂಖ್ಯೆಗಳ ಬಗ್ಗೆ ನಂತರ ನಿರ್ಧಾರ ಕೈಗೊಳ್ಳುತ್ತೇವೆ,'' ಎಂದಿದ್ದಾರೆ.

ಜಿಡಿಪಿ ಲೆಕ್ಕಾಚಾರ ಪ್ರಕ್ರಿಯೆಯಲ್ಲಿ ಹಾಗೂ ಬೇಸ್ ಇಯರ್ ನಲ್ಲಿ 2015ರಲ್ಲಿ ಮಾಡಲಾದ ಬದಲಾವಣೆಗಳನ್ನು ಸ್ವಾಗತಿಸಿದ ಗೀತಾ ಗೋಪಿನಾಥ್ ಅದೇ ಸಮಯ ನಿಜವಾದ ಜಿಡಿಪಿ ಲೆಕ್ಕಾಚಾರ ನಡೆಸಲು 'ಡಿಫ್ಲೇಟರ್' ಬಳಕೆ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ ಭಾರತ ತಾನು ಹೊಂದಿರುವ ಮಹತ್ವದ ಸ್ಥಾನವನ್ನು ಪರಿಗಣಿಸಿ ಅದು ತನ್ನ ಅಂಕಿಸಂಖ್ಯೆಗಳ ಬಗ್ಗೆ ಹೆಚ್ಚು ಪಾರದರ್ಶಕತೆಯಿಂದ ವಿವರಗಳನ್ನು ನೀಡಬೇಕು ಎಂದು ಗೋಪಿನಾಥ್ ತಿಳಿಸಿದ್ದಾರೆ.

''ಭಾರತವು 2019 ಹಾಗೂ 2020ರಲ್ಲಿ  ಶೇ 7ಕ್ಕಿಂತಲೂ ಹೆಚ್ಚಿನ ಪ್ರಗತಿ ದಾಖಲಿಸಲಿದೆ ಎಂಬ ಅಂದಾಜಿದೆ ಹಾಗೂ ಹೀಗಾದಲ್ಲಿ ಅದು ವಿಶ್ವದಲ್ಲಿಯೇ ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ಆಥಿಕತೆಯಾಗಲಿರುವುದರಿಂದ ದೇಶವು ಬಿಡುಗಡೆ ಮಾಡುವ ಅಂಕಿಸಂಖ್ಯೆಗಳ ವಿಚಾರದಲ್ಲಿಯೂ ಪಾರದರ್ಶಕತೆ ಇರಬೇಕು ಎಂದು ಅವರು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತ ಸರಕಾರವು 2016-17 ಹಾಗೂ 2017-18ಗೆ ಜಿಡಿಪಿ ದತ್ತಾಂಶವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಗೀತಾ ಗೋಪಿನಾಥ್  ಪ್ರತಿಕ್ರಿಯೆ ಬಂದಿದೆ. ಆರ್ಥಿಕ ವರ್ಷ 2016-17ಗೆ ಜಿಡಿಪಿಯನ್ನು  ಶೇ 7.1ರಿಂದ ಶೇ 8.2ಗೆ ಏರಿಸಲಾಗಿದ್ದು ಮೋದಿ ಸರಕಾರದ ಆಡಳಿತದಲ್ಲಿನ ಅತ್ಯಧಿಕ ಪ್ರಗತಿ ಪ್ರಮಾಣ ದಾಖಲಾದ ವರ್ಷ ಅದಾಗಲು ಇದು ಸಹಕಾರಿಯಾಗಿದೆ. ಇದೇ ವರ್ಷ ಭಾರತ  ನೋಟು ಅಮಾನ್ಯೀಕರಣ ಕ್ರಮ ಕೂಡ ಕೈಗೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X