Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಳಿನ್ ಕುಮಾರ್ ಕಟೀಲು ಗೆದ್ದರೆ ಮೋದಿಗೆ...

ನಳಿನ್ ಕುಮಾರ್ ಕಟೀಲು ಗೆದ್ದರೆ ಮೋದಿಗೆ ಗೆಲುವು: ಮಾಳವಿಕಾ

ವಾರ್ತಾಭಾರತಿವಾರ್ತಾಭಾರತಿ11 April 2019 1:31 PM IST
share
ನಳಿನ್ ಕುಮಾರ್ ಕಟೀಲು ಗೆದ್ದರೆ ಮೋದಿಗೆ ಗೆಲುವು: ಮಾಳವಿಕಾ

ಮಂಗಳೂರು, ಎ.11: ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಸಾಧನೆಗಳನ್ನು ಹೇಳಿಕೊಂಡು ಅವರ ಹೆಸರಿನಲ್ಲಿ ಮತ ಕೇಳಲು ನಮಗೆ ಯಾವುದೇ ಸಂಕೋಚ ಇಲ್ಲ. ಹಾಗಾಗಿ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರವಾಗಿ ಮೋದಿ ಹೆಸರಿನಲ್ಲಿ ಜನರ ಬಳಿಗೆ ಹೋಗುತ್ತಿದ್ದೇವೆ. ನಳಿನ್ ಕುಮಾರ್ ಗೆದ್ದರೆನೇ ಮೋದಿಗೆ ಗೆಲುವು ಎಂದು ಬಿಜೆಪಿ ಪ್ರಚಾರಕಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ಕ್ಷೇತ್ರದ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರ ಪ್ರಚಾರಕ್ಕೆ ಜಿಲ್ಲೆಗೆ ಆಗಮಿಸಿರುವ ಅವರು ಪಕ್ಷದ ಚುನಾವಣಾ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯೆ ನೀಡಿದರು.

ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಅವರ ಸಾಧನೆಯ ಜತೆಗೆ ನಾವು ಸ್ಥಳೀಯ ಅಭ್ಯರ್ಥಿಗಳ ರಿಪೋರ್ಟ್ ಕಾರ್ಡ್‌ಗಳನ್ನು ತಂದಿದ್ದೇವೆ. ನಳಿನ್ ಕುಮಾರ್ ಅವರ ಸಾಧನೆಯ ರಿಪೋರ್ಟ್ ಕಾರ್ಡ್ ಕೂಡಾ ಇದೆ ಎಂದು ಅವರು ಹೇಳಿದರು.

ಐದು ವರ್ಷಗಳ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭ ನರೇಂದ್ರ ಮೋದಿ ಜನಸಾಮಾನ್ಯರ ಪಾಲಿಗೆ ಒಂದು ಹೆಸರು ಮಾತ್ರವಾಗಿದ್ದರು. ಇಂದು ಅವರು ಮಂತ್ರವಾಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ, ಆಂತರಿಕ ಭದ್ರತೆ, ರೈತರು ಕಾರ್ಮಿಕರಿಗೆ ಪೂರಕವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ ಎಂದು ಮಾಳವಿಕಾ ಹೇಳಿದರು.

ಕಾಂಗ್ರೆಸ್ ಪಕ್ಷದ ಘೋಷಣಾ ಪತ್ರದಲ್ಲಿ ಈ ಬಾರಿ ನ್ಯಾಯ್ ಎಂಬ ಯೋಜನೆಯನ್ನು ಘೋಷಿಸಿದ್ದಾರೆ. ಹಾಗಾದರೆ ಇಷ್ಟು ವರ್ಷಗಳಿಂದ ಅವರಿಂದ ಅನ್ಯಾಯವೇ ಆಗಿರುವುದು ಎಂಬುದನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆಯೇ ಎಂಬ ಬಗ್ಗೆ ಅವರು ಉತ್ತರ ನೀಡಬೇಕು. ಬಿಜೆಪಿಗೆ ದೇಶ ಮೊದಲಾದರೆ ಕಾಂಗ್ರೆಸ್‌ಗೆ ಮತ ಬ್ಯಾಂಕೇ ಮೊದಲು ಎಂದು ಮಾಳವಿಕಾ ಮೂದಲಿಸಿದರು.

ರಾಜ್ಯದಲ್ಲಿ ಈಗಿರುವುದು ಮಹಾ ಮಿಲಾವಟ್ ಸರಕಾರ ಎಂದು ಕಟಕಿಯಾಡಿದ ಅವರು, ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಉಳಾಯಿಬೆಟ್ಟು ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಗಳನ್ನು ಖುಲಾಸಿಗೊಳಿಸಿ, ಹಿಂದೂಗಳ ಮೇಲೆ ಮಲತಾಯಿ ಧೋರಣೆ ಅನುಸರಿಸಿದ್ದಾರೆ. ಈ ಬಗ್ಗೆ ಅವರು ಉತ್ತರಿಸಬೇಕು. ಬಾಲಾಕೋಟ್ ದಾಳಿ ಸಂದರ್ಭ ಬಿಜೆಪಿ ಸಂಭ್ರಮಾಚರಣೆ ಮಾಡಿತ್ತು. ಆದರೆ ಸಂಭ್ರಮಾಚರಣೆಯಿಂದ ಕೆಲವರಿಗೆ ನೋವಾಗುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ದೇಶಭಕ್ತರಿಗೆ ಹಾಡಿದ ಅವಮಾನ ಎಂದು ಹೇಳಿದರು.

ಬಿಜೆಪಿಯು ಕರ್ನಾಟಕದಲ್ಲಿ 36 ಜನ ತಾರಾ ಪ್ರಚಾರಕರನ್ನು ನೇಮಕ ಮಾಡಿದ್ದು, ಅವರಲ್ಲಿ ತಾನೂ ಒಬ್ಬಾಕೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಕೆಲ ದಿನಗಳ ಹಿಂದೆ ಸುರತ್ಕಲ್,ಬಂಟ್ವಾಳ ಸೇರಿದಂತೆ ಕೆಲವು ಕಡೆಗಳಲ್ಲಿ ಪ್ರಬುದ್ಧರ ಸಮಾವೇಶಗಳಲ್ಲಿ ಭಾಗವಹಿಸಿದ್ದೇನೆ. ಇದೀಗ ಸಂಪೂರ್ಣ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿರುವುದಾಗಿ ಅವರು ಹೇಳಿದರು.

ಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಮೋನಪ್ಪ ಭಂಡಾರಿ, ಪೂಜಾ ಪೈ, ಪ್ರಭಾ ಮಾಲಿನಿ, ಧನಲಕ್ಷ್ಮಿ ಗಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X