Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿಯಿಂದ ಜನರ ಭಾವನೆಯೊಂದಿಗೆ...

ಬಿಜೆಪಿಯಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡುವ ಪ್ರಣಾಳಿಕೆ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ11 April 2019 3:48 PM IST
share
ಬಿಜೆಪಿಯಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡುವ ಪ್ರಣಾಳಿಕೆ: ಸಚಿವ ಯು.ಟಿ.ಖಾದರ್

ಮಂಗಳೂರು, ಎ.11: ಪ್ರತೀ ಚುನಾವಣೆಯ ಸಂದರ್ಭ ಬಿಜೆಪಿ ಜನರ ಭಾವನೆಯೊಂದಿಗೆ ಚೆಲ್ಲಾಟವಾಡುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದೆ. ಈ ಬಾರಿಯೂ ಕಳೆದ ಪ್ರಣಾಳಿಕೆಯ ‘ಕಟ್ ಆ್ಯಂಡ್ ಪೇಸ್ಟ್’ ಮಾಡಿ ಬಿಡುಗಡೆಗೊಳಿಸಿ ಜನರನ್ನು ವಂಚಿಸಲು ಮುಂದಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಭಾವನಾತ್ಮಕ ವಿಚಾರದಿಂದ ಜಿಲ್ಲೆಯ ಅಭಿವೃದ್ಧಿ ಆಗುವುದಿಲ್ಲ. ಬಿಜೆಪಿಯು ಜನರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ನಳಿನ್‌ಗೆ ಪ್ರಜ್ಞಾವಂತ ಮತದಾರರು ಮತ ಚಲಾಯಿಸಬಾರದು. ಬದಲಾಗಿ ಆತ್ಮಾವಲೋಕನ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಮತ ಚಲಾಯಿಸಬೇಕು. ಆ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಯ ಬಗ್ಗೆ ಪಾರ್ಲಿಮೆಂಟ್‌ ನಲ್ಲಿ ಧ್ವನಿ ಎತ್ತುವ ಸಂಸದನ ಆಯ್ಕೆ ಮಾಡಬೇಕು ಎಂದರು.

ಕಾಂಗ್ರೆಸ್ ಜನರ ಬದುಕಿಗೆ ಬೇಕಾದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಆಶ್ವಾಸನೆಯನ್ನು ಈಡೇರಿಸಲಾಗುವುದು ಎಂದ ಖಾದರ್, ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಂಗದಲ್ಲೂ ವಿಫಲರಾಗಿದ್ದಾರೆ. ಅವರಿಂದಾಗಿ ವಿದೇಶದಲ್ಲಿ ಭಾರತ ತಲೆತಗ್ಗಿಸುವಂತಾಗಿದೆ ಎಂದರು.

ದ.ಕ.ಜಿಲ್ಲೆಯಲ್ಲಿ ಬಿಜೆಪಿಗರು ಅಭ್ಯರ್ಥಿ ನಳಿನ್‌ಗೆ ಅಲ್ಲ, ಪ್ರಧಾನಿ ನರೇಂದ್ರ ಮೋದಿಗಾಗಿ ಮತ ಚಲಾಯಿಸಿ ಎನ್ನುತ್ತಿದ್ದಾರೆ. ಹಾಗಿದ್ದರೆ ನಾಳೆ ದ.ಕ.ಜಿಲ್ಲೆಯ ಅಭಿವೃದ್ಧಿಯನ್ನು ಮೋದಿ ಬಂದು ಮಾಡುತ್ತಾರಾ? ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ಬಳಿ ಜನರು ಹೋಗಬೇಕೋ ಅಥವಾ ಮೋದಿಯ ಬಳಿ ಹೋಗಬೇಕೋ ಎಂದು ಖಾದರ್ ಪ್ರಶ್ನಿಸಿದರು.

ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ನಳಿನ್‌ರಿಂದ ದ.ಕ.ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ. ವಿಜಯಾ ಬ್ಯಾಂಕನ್ನು ಅವರಿಂದ ಉಳಿಸಿಕೊಳ್ಳಲಾಗಲಿಲ್ಲ, ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆಯನ್ನು ಉದ್ಯಮಿಯ ಕೈಗೆ ಕೊಡುವುದರಿಂದ ಅವರಿಗೆ ತಪ್ಪಿಸಿಕೊಳ್ಳಲಾಗಲಿಲ್ಲ. ಹೀಗಿರುವಾಗ ನಳಿನ್‌ಗೆ ಯಾಕೆ ಮತ ನೀಡಬೇಕು? ಎಂದು ಪ್ರಶ್ನಿಸಿದರಲ್ಲದೆ, ಕಾಂಗ್ರೆಸ್‌ನ ಸಮರ್ಥ ಅಭ್ಯರ್ಥಿ ಮಿಥುನ್ ರೈಗೆ ಮತ ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಸ್‌ಸಿಡಿಸಿಸಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ, ಬಿ.ಎ.ಮುಹಮ್ಮದ್ ಹನೀಫ್, ಸದಾಶಿವ ಉಳ್ಳಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X