Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ...

ನನ್ನ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ11 April 2019 3:55 PM IST
share
ನನ್ನ ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: ಸದಾನಂದಗೌಡ

ಬೆಂಗಳೂರು, ಎ.11-ಕಳೆದ ಐದು ವರ್ಷಗಳಲ್ಲಿ  ಕ್ಷೇತ್ರದಲ್ಲಿ ತಾವು ಕೈಗೊಂಡ ಅಭಿವೃದ್ಧಿ  ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಬೆಂಗಳೂರು ಉತ್ತರ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಡಿ.ವಿ.ಸದಾನಂದಗೌಡ  ವಿಶ್ವಾಸ ವ್ಯಕ್ತಪಡಿಸಿದರು. 

ಇಂದು ಬೆಳಗ್ಗೆ ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದ ಸುಂಕದಕಟ್ಟೆಯ  ಪೈಪ್‍ಲೈನ್ ರಸ್ತೆಯ ಹೊಯ್ಸಳ ನಗರದ ಗಣೇಶನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ   ಸುದ್ದಿಗಾರರರೊಂದಿಗೆ ಅವರು ಮಾತನಾಡಿದರು.

ಕ್ಷೇತ್ರಕ್ಕೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಯಶವಂತಪುರದಲ್ಲಿ ಕೇಂದ್ರೀಯ ವಿದ್ಯಾಲಯ,  ಜಾಲಹಳ್ಳಿಯಲ್ಲಿ ಪಾಸ್‍ಪೋರ್ಟ್ ಕಚೇರಿ ಸ್ಥಾಪನೆ ಮಾಡಲಾಗಿದೆ, ಬೆಂಗಳೂರಿಗೆ ನಾಲ್ಕು ಟಿಎಂಸಿ ಕಾವೇರಿ ನೀರು ಸಿಗುವಲ್ಲಿ  ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಸುವಾಗ ಮುತುವರ್ಜಿ ವಹಿಸಿದ್ದೇನೆ ಎಂದು ವಿವರಿಸಿದರು. 

ಕಾಂಗ್ರೆಸ್‍ನವರಿಗೆ ಸ್ವಂತ ವಿಚಾರಗಳಿಲ್ಲ. ಆದ್ದರಿಂದಲೇ ಟೀಕೆಯನ್ನೇ ಪ್ರಮುಖವಾಗಿ ಮಾಡುತ್ತಿದ್ದಾರೆ. ದೇಶ ಅಭಿವೃದ್ಧಿ ಹೊಂದುವುದು ಅವರಿಗೆ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಕಳೆದ ಬಾರಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಕೊಟ್ಟಿದ್ದೀರಿ.  ನಿಮ್ಮ ವಿಶ್ವಾಸಕ್ಕೆ ಚ್ಯುತಿ ಬರದಂತೆ ಸೇವೆ ಸಲ್ಲಿಸುತ್ತೇನೆ ಎಂದು ಹೇಳಿದರು. 

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರವು ದೇಶದ ರಕ್ಷಣೆಗೆ ಬದ್ದವಾಗಿದೆ. ಸಮರ್ಥ ನಾಯಕತ್ವ ಮತ್ತು ಸ್ಥಿರ ಸರ್ಕಾರದಿಂದಾಗಿ ಭಾರತ ವಿಶ್ವದ ಪ್ರಮುಖ ಐದು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಮೋದಿ ಅವರು ಪುನಃ ಪ್ರಧಾನಿಯಾದರೆ ವಿಶ್ವದಲ್ಲಿ ಭಾರತ ಮುಂಚೂಣಿಗೆ ಬರಲಿದೆ ಎಂದು ಹೇಳಿದರು. 

ದೇಶದ ರಕ್ಷಣೆ ವಿಚಾರದಲ್ಲಿ ನರೇಂದ್ರ  ಮೋದಿ ಅವರು ರಾಜಿಯಾಗುವುದಿಲ್ಲ. ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಪುಲ್ವಾಮಾ ದಾಳಿಯಾದ ನಂತರ ಪಾಕಿಸ್ತಾನದ ನೆಲೆಗೆ ನುಗ್ಗಿ ಉಗ್ರರ ತರಬೇತಿ ಶಿಬಿರಗಳನ್ನು ಧ್ವಂಸ ಮಾಡಲಾಗಿದೆ. ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಆಡಳಿತವಿದ್ದಾಗ ಬಾಂಬೆ,  ಹೈದರಾಬಾದ್ ಸೇರಿದಂತೆ ದೇಶದ ಹಲವೆಡೆ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದರು. ಆದರೆ ಮೋದಿ ಅವರು ಪ್ರಧಾನಿಯಾದ ನಂತರ ಇಂತಹ ಕಹಿ ಘಟನೆಗಳಿಗೆ ಆಸ್ಪದ ನೀಡಿಲ್ಲ ಎಂದರು. 

ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ಸದಾನಂದಗೌಡರು, ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ 11 ತಿಂಗಳು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಆದ್ದರಿಂದ ಅವರನ್ನು ಪುನರಾಯ್ಕೆ  ಮಾಡಬೇಕೆಂದು ಮನವಿ ಮಾಡಿದರು. 

ಚಲನಚಿತ್ರ ನಟ ಜಗ್ಗೇಶ್, ಮುಖಂಡರಾದ ಡಿ.ಎಸ್.ವೀರಯ್ಯ, ಸುರೇಶ್, ಭಾಗ್ಯಮ್ಮ  ಕೃಷ್ಣಯ್ಯ, ಆನಂದ್, ರಾಜು ಬ್ಯಾಡರಗಟ್ಟಿ, ಶಿವಲಿಂಗಯ್ಯ, ರಾಜಣ್ಣ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X