Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಗಟ್ಟೆಯಲ್ಲಿ ‘ನಮೋ ಫುಡ್ಸ್’ ಆಹಾರ...

ಮತಗಟ್ಟೆಯಲ್ಲಿ ‘ನಮೋ ಫುಡ್ಸ್’ ಆಹಾರ ಪ್ಯಾಕೆಟ್ ವಿತರಣೆ: ವರದಿ ಕೋರಿದ ಚು. ಆಯೋಗ

ವಾರ್ತಾಭಾರತಿವಾರ್ತಾಭಾರತಿ11 April 2019 8:06 PM IST
share
ಮತಗಟ್ಟೆಯಲ್ಲಿ ‘ನಮೋ ಫುಡ್ಸ್’ ಆಹಾರ ಪ್ಯಾಕೆಟ್ ವಿತರಣೆ: ವರದಿ ಕೋರಿದ ಚು. ಆಯೋಗ

ನೋಯ್ಡ, ಎ. 11: ನೋಯ್ಡಾದ ಮತಗಟ್ಟೆಯೊಂದರಲ್ಲಿ ಬುಧವಾರ ‘ನಮೋ’ ಬ್ರಾಂಡ್‌ನ ಆಹಾರದ ಪ್ಯಾಕೆಟ್‌ಗಳನ್ನು ಪೊಲೀಸರಿಗೆ ವಿತರಿಸಲಾಗಿದೆ. ಚುನಾವಣೆ ದಿನ ಮತಗಟ್ಟೆಯಿಂದ 200 ಮೀಟರ್‌ಗಳ ಅಂತರದಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ನಿಷೇಧಿಸಬೇಕು ಎಂದು ಚುನಾವಣಾ ನೀತಿ ಸಂಹಿತೆ ಪ್ರತಿಪಾದಿಸುವುದರಿಂದ ಈ ಘಟನೆ ವಿವಾದಕ್ಕೆ ಕಾರಣವಾಗಿದೆ.

ಇದು ಮಾದರಿ ನೀತಿ ಸಂಹಿತೆ ಉಲ್ಲಂಘಿಸುತ್ತದೆಯೇ ಎಂಬ ಬಗ್ಗೆ ವರದಿ ನೀಡುವಂತೆ ಉತ್ತರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಗೌತಮ್‌ ಬುದ್ಧ ನಗರದ ಜಿಲ್ಲಾ ದಂಡಾಧಿಕಾರಿಗೆ ಸೂಚಿಸಿದ್ದಾರೆ.

ಹಲವು ಪ್ರಚಾರ ಹಾಗೂ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನಮೋ’ ಎಂದು ಉಲ್ಲೇಖಿಸುತ್ತಿರುವುದರಿಂದ ಬಿಜೆಪಿ ಹಾಗೂ ಈ ಆಹಾರ ಪ್ಯಾಕೇಟ್‌ಗೆ ಸಂಬಂಧ ಇದೆ ಎಂಬ ಪ್ರತಿಪಾದನೆಯನ್ನು ಗೌತಮ್ ಬುದ್ಧ ನಗರದ ಎಸ್‌ಎಸ್‌ಪಿ ನಿರಾಕರಿಸಿದ್ದಾರೆ.

  ಕೆಲವು ಪೊಲೀಸರು ರಾಜಕೀಯ ಪಕ್ಷದ ಆಹಾರದ ಪ್ಯಾಕೆಟ್‌ಗಳನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ತಪ್ಪು ಮಾಹಿತಿ ಹರಡಿದೆ. ಇದು ಪೂರ್ಣ ಸುಳ್ಳು. ಸ್ಥಳೀಯ ‘ನಮೋ ಫುಡ್ ಶಾಪ್’ನಿಂದ ಈ ಆಹಾರದ ಪ್ಯಾಕೆಟ್‌ಗಳನ್ನು ತರಿಸಲಾಗಿದೆ. ಇದರೊಂದಿಗೆ ಯಾವುದೇ ರಾಜಕೀಯ ಪಕ್ಷಗಳಿಗೆ ಸಂಬಂಧ ಇಲ್ಲ. ಕೆಲವು ವ್ಯಕ್ತಿಗಳು ತಪ್ಪು ಹಾಗೂ ರಾಜಕೀಯವಾಗಿ ಉತ್ತೇಜಿಸುವ ಹೇಳಿಕೆ ಹರಡುತ್ತಿದ್ದಾರೆ. ನಿರ್ದಿಷ್ಟ ಶಾಪ್‌ನಿಂದ ಆಹಾರ ತರಬೇಕು ಎಂದು ಯಾವುದೇ ಅಧಿಕೃತ ಆದೇಶ ಇಲ್ಲ ಎಂದು ಎಸ್‌ಎಸ್‌ಪಿ ವೈಭವ್ ಕೃಷ್ಣಾ ಹೇಳಿದ್ದಾರೆ.

“ಇದು ದೊಡ್ಡ ವಿಚಾರವಲ್ಲ. ಸಿಬ್ಬಂದಿ ಊಟ ಮಾಡಬೇಡವೇ ?, ಬಹುಶಃ ಶಾಪ್‌ನ ಹೆಸರು ಪ್ಯಾಕೆಟ್‌ನಲ್ಲಿ ಮುದ್ರಿಸಿರಬೇಕು. ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ” ಎಂದು ಜಿಲ್ಲಾ ದಂಡಾಧಿಕಾರಿ ಹೇಳಿದ್ದಾರೆ.

ನಾವು ಪೂರೈಸಿಲ್ಲ ಎಂದ ‘ನಮೋ ಫುಡ್ಸ್’

ಕುತೂಹಲಕಾರಿ ವಿಚಾರವೆಂದರೆ, ‘‘ನಾವು ಯಾವುದೇ ಆಹಾರದ ಪ್ಯಾಕೆಟ್‌ಗಳನ್ನು ಪೂರೈಸಿಲ್ಲ’’ ಎಂದು ‘ನಮೋ ಫುಡ್ಸ್’ ಹೇಳಿದೆ. ‘‘ನಮ್ಮ ಶಾಪ್ ಬುಧವಾರ ಸಂಜೆಯಿಂದ ಮುಚ್ಚಿದೆ. ಯಾವುದೇ ಆರ್ಡರ್ ಬಗ್ಗೆ ನಮಗೆ ಗೊತ್ತಿಲ್ಲ’’ ಎಂದು ‘ನಮೋ ಫುಡ್ಸ್’ನ ಸಿಬ್ಬಂದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X