ನಟಿ ಖುಷ್ಬೂರಿಂದ ಯುವಕನಿಗೆ ಕಪಾಳಮೋಕ್ಷ!

ಬೆಂಗಳೂರು, ಎ. 11: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಿಝ್ವಿನ್ ಅರ್ಶದ್ ಪರ ಎಐಸಿಸಿ ವಕ್ತಾರೆ ಹಾಗೂ ನಟಿ ಖುಷ್ಬೂ ಪ್ರಚಾರದ ವೇಳೆ ಅವರ ಜತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ, ಖುಷ್ಬೂ ಕಪಾಳಮೋಕ್ಷ ಮಾಡಿದ್ದಾರೆ.
ಗುರುವಾರ ಇಲ್ಲಿನ ಹೊಯ್ಸಳ ನಗರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಯುವಕನೊಬ್ಬ ನಟಿ ಖುಷ್ಬೂ ಅವರ ಸೊಂಟ ಮುಟ್ಟಿದ್ದ. ಇದರಿಂದ ರೊಚ್ಚಿಗೆದ್ದ ನಟಿ ಖುಷ್ಬೂ ಹಿಂದಿರುಗಿ ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಆರೋಪಿಯನ್ನು ಹಿಡಿದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಮೈತ್ರಿ ಅಭ್ಯರ್ಥಿ ರಿಝ್ವಾನ್ ಅರ್ಶದ್ ಪ್ರತಿಕ್ರಿಯೆ ನೀಡಿದ್ದು, ನನ್ನ ಪರ ಪ್ರಚಾರ ಸಭೆಯಲ್ಲಿ ನಡೆದ ಈ ಘಟನೆ ನೋವಿನ ಸಂಗತಿಯಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪೊಲೀಸರ ಜತೆ ಸಮಾಲೋಚನೆ ಮಾಡುತ್ತೇನೆ ಎಂದು ಸ್ಪಷ್ಟಣೆ ನೀಡಿದರು.
Next Story





