Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಚುನಾವಣಾ ಕಾರ್ಯದಲ್ಲಿ ಹೀಗೊಬ್ಬ...

ಉಡುಪಿ: ಚುನಾವಣಾ ಕಾರ್ಯದಲ್ಲಿ ಹೀಗೊಬ್ಬ ಶ್ರಮಜೀವಿ

ವಾರ್ತಾಭಾರತಿವಾರ್ತಾಭಾರತಿ11 April 2019 9:14 PM IST
share
ಉಡುಪಿ: ಚುನಾವಣಾ ಕಾರ್ಯದಲ್ಲಿ ಹೀಗೊಬ್ಬ ಶ್ರಮಜೀವಿ

ಉಡುಪಿ, ಎ.11: ಚುನಾವಣಾ ಸಂದರ್ಭದಲ್ಲಿ ಚುನಾವಣೆ ಡ್ಯೂಟಿ ಬಂದಿದೆ ಎಂದರೆ ಸಾಕು ನೌಕರರಲ್ಲಿ ನಡುಕ ಪ್ರಾರಂಭವಾಗುತ್ತದೆ. ನೇಮಕ ಆದೇಶ ಬಂದ ತಕ್ಷಣ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ವೈದ್ಯರ ಪ್ರಮಾಣಪತ್ರ ಪಡೆದುಕೊಂಡು ಬಂದು, ಚುನಾವಣಾ ಕರ್ತವ್ಯಕ್ಕೆ ನೇಮಿಸಬಾರದೆಂದು ಕೋರಿ ಅಧಿಕಾರಿಗಳ ಮುಂದೆ ಕ್ಯೂ ನಿಲ್ಲುವವರ ಸಂಖ್ಯೆ ಸಾಕಷ್ಟು ದೊಡ್ಡದಿದೆ.

ಆದರೆ ಇಲ್ಲೊಬ್ಬ ಸಿಬ್ಬಂದಿಯಿದ್ದಾರೆ, ಚುನಾವಣೆ ಬಂತೆಂದರೆ ಇವರಿಗೆ ಬಿಡುವಿಲ್ಲದ ಕೆಲಸ. ಯಾವುದೇ ಬೇಸರವಿಲ್ಲದೆ, ಚುನಾವಣೆಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಾರೆ. ಇವರೇ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ 'ಡಿ ಗ್ರೂಪ್' ಸಿಬ್ಬಂದಿ ವಿಶ್ವನಾಥ ಶೆಟ್ಟಿ.

ಚುನಾವಣಾ ಕಾರ್ಯಕ್ಕೆ ನಿಯೋಜನೆಯಾಗುವ ಸಿಬ್ಬಂದಿ ತನ್ನ ಇಡೀ ಸೇವಾವಧಿಯಲ್ಲಿ ಸುಮಾರು 10 ರಿಂದ 15 ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಬಹುದು. ಅದೂ ಪ್ರತಿ ಚುನಾವಣೆಗೆ ಕೇವಲ 2 ದಿನ. ಆದರೆ ವಿಶ್ವನಾಥ್ ಶೆಟ್ಟಿ ಸೇವೆಗೆ ಸೇರಿ ಪ್ರಸ್ತುತ 18 ವರ್ಷಗಳಾಗಿದ್ದು, ಇದುವರೆಗೆ ಸುಮಾರು 80ಕ್ಕೂ ಅಧಿಕ ಚುನಾವಣೆಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾದ ದಿನದಿಂದ, ಮತದಾನ ಮುಗಿದು, ಫಲಿತಾಂಶ ಘೋಷಣೆಯಾಗಿ ಚುನಾವಣಾ ಪ್ರಕಿಯೆ ಮುಗಿಯುವವರೆಗೂ ಕರ್ತವ್ಯ ನಿರ್ವಹಿಸುತ್ತಾರೆ.

ಚುನಾವಣಾ ಸಂದರ್ಭದಲ್ಲಿ ಸದಾ ಬ್ಯುಸಿಯಾಗಿ, ಸಮಯದ ಮಿತಿಯಿಲ್ಲದೇ, ಕೆಲಸದ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಇವರು, ಯಾವುದೇ ಕೆಲಸ ಹೇಳಿದರೂ ಬೇಸರಗೊಳ್ಳದೆ ತಮಗೆ ನೀಡಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ.

ಚುನಾವಣಾ ಶಾಖೆಯಲ್ಲಿ ವಿವಿಧ ಪತ್ರಗಳನ್ನು ಸಂಬಂಧಪಟ್ಟವರಿಗೆ ತಲುಪಿಸುವುದು, ಜೆರಾಕ್ಸ್ ಕಾರ್ಯ, ಚುನಾವಣೆಗೆ ಸಂಬಂಧಿಸಿದ ಕಡತಗಳ ಜೋಡಣೆ, ಚುನಾವಣಾ ಕಾರ್ಯಕ್ಕೆ ಬರುವ ಸಾಮಗ್ರಿಗಳ ಶೇಖರಣೆ, ವಿತರಣೆ, ಮತ ಎಣಿಕಾ ಕೇಂದ್ರದಲ್ಲಿನ ಅಗತ್ಯ ಕಾರ್ಯಗಳನ್ನು ಇವರು ನಿರ್ವಹಿಸುತ್ತಾರೆ.

2001ರಲ್ಲಿ ಕೇವಲ 900 ರೂ. ವೇತನಕ್ಕೆ ಗ್ರಾಮ ಸಹಾಯಕರಾಗಿ ಸೇರಿದ ಇವರು, ಇದುವರೆಗೂ ಜಿಲ್ಲೆಯ ಗ್ರಾಪಂ, ತಾಪಂ, ನಗರಸಭೆ, ಪುರಸಭೆ, ವಿಧಾನಸಭೆ, ವಿಧಾನ ಪರಿಷತ್, ಎಪಿಎಂಸಿ ಚುನಾವಣೆ, ಲೋಕಸಭಾ ಚುನಾವಣೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ.

ಮತದಾನ ಪವಿತ್ರ ಕರ್ತವ್ಯ, ಮತದಾನ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲ ಎಂದು ಹೇಳುವುದನ್ನು ಕೇಳಿರುವ ಇವರು, ನಾವು ಚುನಾವಣೆಗಾಗಿ ಎಷ್ಟೆಲ್ಲಾ ಕಷ್ಟ ಪಡುತ್ತೇವೆ. ಇದರ ಉದ್ದೇಶ ಒಂದೇ ಯಾವುದೇ ಹಂತದಲ್ಲೂ ಚುನಾವಣಾ ಕಾರ್ಯದಲ್ಲಿ ತೊಂದರೆಯಾಗಬಾರದು ಎಂಬುದು. ಪ್ರತಿಯೊ ಬ್ಬರು ಮತದಾನ ಮಾಡಬೇಕು ಎನ್ನುವ ಇವರು, ಸುಗಮ ಚುನಾವಣೆಗೆ ನನ್ನಿಂದ ಕೈಲಾದಷ್ಟು ಸೇವೆ ಸಲ್ಲಿಸುವ ಭಾಗ್ಯ ದೊರೆತಿರುವುದೇ ನನಗೆ ಹೆಮ್ಮ ಎನ್ನುತ್ತಾರೆ.

ಇವರು ಈ ಹಿಂದೆ ಚುನಾವಣಾ ಸಾಮಗ್ರಿಗಳನ್ನು ತರಲು ಬೆಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಈಗ ಇಲ್ಲಿಗೆ ನೇರವಾಗಿ ಬರುತ್ತಿದೆ. ಹಿಂದೆ ಮತಪತ್ರ ಎಣಿಕೆ ಸಮಯದಲ್ಲಿ ಬೆಳಗಿನ ಜಾವದವರೆಗೂ ಕರ್ತವ್ಯ ನಿರ್ವಹಿಸಿದ್ದೇನೆ. ಈಗ ಇವಿಎಂ ಬಂದ ಕಾರಣ ಮತದಾನ ಸುಲಭವಾಗಿದೆ ಎಂದು ಹೇಳುವ ವಿಶ್ವನಾಥ ಶೆಟ್ಟಿ, ತನ್ನ ಬಿಡುವಿಲ್ಲದ ಕಾರ್ಯದಲ್ಲಿಯೂ ಇಷ್ಟು ಮಾಹಿತಿ ನೀಡಿ, ಅಧಿಕಾರಿಗಳು ಕರೆಯುತ್ತಿದ್ದಾರೆ ಸರ್.... ಎನ್ನುತ್ತಾ ಮತ್ತೆ ತನ್ನ ಕಾರ್ಯದಲ್ಲಿ ಮಗ್ನರಾದರು.

(ವಿಶ್ವನಾಥ ಶೆಟ್ಟಿ ಸಂಪರ್ಕಕ್ಕೆ ಮೊ.ಸಂ.9686915459)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X