Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರಿಕಾ ಸಮುದಾಯಕ್ಕೆ ಇನ್ನಷ್ಟು...

ಮೀನುಗಾರಿಕಾ ಸಮುದಾಯಕ್ಕೆ ಇನ್ನಷ್ಟು ನೆರವು: ಬಿ.ಎಲ್. ಸಂತೋಷ್

ವಾರ್ತಾಭಾರತಿವಾರ್ತಾಭಾರತಿ11 April 2019 10:15 PM IST
share

ಮಂಗಳೂರು, ಎ.11: ಮೀನುಗಾರಿಕೆ ಮತ್ತು ಮೀನುಗಾರಿಕಾ ಸಮುದಾಯದ ಅಭಿವೃದ್ಧಿಗೆ ಇನ್ನಷ್ಟು ನೆರವು ದೊರೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.

ಬಿಜೆಪಿ ದ.ಕ. ಜಿಲ್ಲಾ ಮೀನುಗಾರರ ಪ್ರಕೋಷ್ಠದಿಂದ ನಗರದ ಸುಧೀಂದ್ರ ಸಭಾಂಗಣದಲ್ಲಿ ಗುರುವಾರ ನಡೆದ ಮೀನುಗಾರ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರದಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕಾ ಸಚಿವಾಲಯ ಘೋಷಿಸಿ, 500 ಕೋಟಿ ರೂ. ಅನುದಾನ ನೀಡುವ ಮೂಲಕ ಮೀನುಗಾರಿಕಾ ಸಮುದಾಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಮುಂದಿನ ಸರಕಾರದಲ್ಲಿ ಮೀನುಗಾರಿಕಾ ಸಚಿವರು ಇರಲಿದ್ದಾರೆ ಎಂದು ತಿಳಿಸಿದರು.

ಮೀನುಗಾರಿಕೆಗೆ ಪೂರಕವಾಗಿ ಮಂಗಳೂರಿನ ಕುಳಾಯಿ ಬಂದರು ಸಹಿತ ದೇಶಾದ್ಯಂತ 40ಕ್ಕೂ ಹೆಚ್ಚು ಸರ್ವಋತು ಬಂದರು ಕಾಮಗಾರಿಯನ್ನು ಮುಂದಿನ ಮೂರು ವರ್ಷದೊಳಗೆ ಪೂರ್ಣಗೊಳಿಸಲು ಮೋದಿ ಸರಕಾರ ಸಂಕಲ್ಪ ತೊಟ್ಟಿದೆ. ಮತ್ಸಸಂಪದ ಯೋಜನೆಯಡಿ ಮೀನುಗಾರಿಕೆಗೆ 20 ಸಾವಿರ ಕೋಟಿ ರೂ. ಒದಗಿಸಲಾಗುತ್ತಿದೆ. ಓಶಿಯನ್ ಸ್ಮಾರ್ಟ್ ಯೋಜನೆಯಡಿ ಮತ್ಸಸಂಪತ್ತು ಇರುವ ಪ್ರದೇಶದ ಬಗ್ಗೆ ಮೀನುಗಾರರ ಮೊಬೈಲ್‌ಗೆ ಸಂದೇಶ ಕಳುಹಿಸಲಾಗುತ್ತಿದೆ. 5 ಲಕ್ಷ ಮೀನುಗಾರರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಕಳೆದ ಐದು ವರ್ಷದ ಅವಧಿಯಲ್ಲಿ ಮೋದಿ ಸರಕಾರ ಏಳು ಕೋಟಿ ಮನೆಗೆ ಗ್ಯಾಸ್ ಸಂಪರ್ಕ ಒದಗಿಸಿದೆ. 9.70 ಶೌಚಗೃಹ ನಿರ್ಮಾಣಗೊಂಡಿದೆ. 18,600 ಗ್ರಾಮಗಳಿಗೆ ವಿದ್ಯುತ್ ಪೂರೈಸಲಾಗಿದೆ. 453 ಯೋಜನೆಗಳ 6.7 ಲಕ್ಷ ಕೋಟಿ ರೂ. ಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಿದೆ. ಮುಂದಿನ ಐದು ವರ್ಷದಲ್ಲಿ ಎಲ್ಲ ಸಬ್ಸಿಡಿ ಹಣ ಲಾನುಭವಿಗಳ ಖಾತೆಗೆ ನೇರವಾಗಿ ಬರಲಿದೆ. ಮಾಡುವ ಕೆಲಸ ಇನ್ನಷ್ಟಿದೆ. ಅದಕ್ಕಾಗಿ ಈ ಚುನಾವಣೆಯಲ್ಲಿ ಬೆಂಬಲಿಸಲು ಮನವಿ ಮಾಡಿದರು.

ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್, ಬಿಜೆಪಿ ದ.ಕ. ಲೋಕಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಮೀನುಗಾರಿಕಾ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷರಾದ ನಿತಿನ್‌ಕುಮಾರ್, ರಾಮಚಂದ್ರ ಬೈಕಂಪಾಡಿ, ಪ್ರಮುಖರಾದ ಬಾಬು ಬಂಗೇರ, ಶೋಭೇಂದ್ರ ಸಸಿಹಿತ್ಲು ಉಪಸ್ಥಿತರಿದ್ದರು.

‘ಭವಿಷ್ಯದಲ್ಲಿ ಮೀನುಗಾರರ ಸಮಸ್ಯೆಗೆ ಪರಿಹಾರ’

ಮೀನುಗಾರಿಕಾ ಸಮುದಾಯ ಹಿಂದಿನಿಂದಲೂ ಹಿಂದುತ್ವ ಮತ್ತು ದೇಶಾಭಿಮಾನದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಆಡಳಿತದಲ್ಲಿ ಮೀನುಗಾರಿಕಾ ಸಮುದಾಯಕ್ಕೆ ಸಾಕಷ್ಟು ಕೊಡುಗೆ ದೊರೆತಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಯಡಿಯೂರಪ್ಪ ಸರಕಾರ ಇದ್ದಾಗ ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿದೆ. ಕೇಂದ್ರದಲ್ಲೂ ಮೀನುಗಾರಿಕಾ ಸಮುದಾಯದ ಹಲವಾರು ಮಂದಿ ಬಿಜೆಪಿ ಸಂಸದರಿದ್ದು, ಮುಂದಿನ ದಿನಗಳಲ್ಲಿ ಮೀನುಗಾರರ ಸಮಸ್ಯೆ ಪರಿಹಾರಗೊಳ್ಳಲಿದೆ. ಈ ಬಾರಿಯೂ ಕರಾವಳಿಯ ಮೂರೂ ಲೋಕಸಭಾ ಕ್ಷೇತ್ರದಲ್ಲಿ ಮೀನುಗಾರಿಕಾ ಸಮುದಾಯ ಬಿಜೆಪಿಗೆ ಮತ ನೀಡಬೇಕು ಎಂದು ವಿನಂತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X