Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ರಾಜಕೀಯಕ್ಕಾಗಿ ಕರಾವಳಿಯಲ್ಲಿ ಆತಂಕದ...

‘ರಾಜಕೀಯಕ್ಕಾಗಿ ಕರಾವಳಿಯಲ್ಲಿ ಆತಂಕದ ವಾತಾವರಣ ಸೃಷ್ಟಿ’

ವಕೀಲ ಮಿತ್ರರೊಂದಿಗೆ ಕಾಂಗ್ರೆಸ್ ಸಂವಾದ

ವಾರ್ತಾಭಾರತಿವಾರ್ತಾಭಾರತಿ11 April 2019 10:46 PM IST
share
‘ರಾಜಕೀಯಕ್ಕಾಗಿ ಕರಾವಳಿಯಲ್ಲಿ ಆತಂಕದ ವಾತಾವರಣ ಸೃಷ್ಟಿ’

ಮಂಗಳೂರು, ಎ.11: ನೆಲದ ಮಣ್ಣಿನ ಗುಣವನ್ನು ಅರ್ಥೈಸಿಕೊಳ್ಳದಿದ್ದಾಗ ಅಭಿವೃದ್ಧಿಯಲ್ಲಿ ಕುಂಠಿತಗೊಳ್ಳುತ್ತದೆ. ಕರಾವಳಿಯಲ್ಲಿ ಕೆಲವರು ಸೌಹಾರ್ದಕ್ಕೆ ಧಕ್ಕೆ ತರುವುದರ ಜತೆಗೆ ರಾಜಕೀಯದ ಉದ್ದೇಶದಿಂದ ಆತಂಕದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ‘ವಕೀಲ ಮಿತ್ರರೊಂದಿಗೆ ಕಾಂಗ್ರೆಸ್ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಗಳೂರು ಬಾರ್ ಅಸೋಸಿಯೇಶನ್‌ಗೆ 150 ವರ್ಷಗಳ ಇತಿಹಾಸವಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಪ್ರತಿಭಾವಂತರಿಂದ ಕೂಡಿದೆ. ಜಗತ್ತಿನ ಯಾವುದೇ ಭಾಗದಲ್ಲೂ ಕರಾವಳಿ ಮಂದಿ ಕಾಣಿಸಿಕೊಳ್ಳುತ್ತಾರೆ. ಬುದ್ಧಿವಂತರ ಜಿಲ್ಲೆಯ ಜನತೆ ಹಲವು ವರ್ಷಗಳಿಂದ ಸಮರ್ಥ ವ್ಯಕ್ತಿಯನ್ನು ಚುನಾಯಿಸುವಲ್ಲಿ ಎಡವಿದ್ದಾರೆ. ಇನ್ನಾದರೂ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಕರಾವಳಿಯಿಂದಲೇ ಆರಂಭವಾದ ರಾಷ್ಟ್ರೀಕೃತ ಬ್ಯಾಂಕ್‌ಗಳು ಪ್ರಸ್ತುತ ದಿನಗಳಲ್ಲಿ ದೇಶದಲ್ಲಿ ಉತ್ತಮ ಜವಾಬ್ದಾರಿಯನ್ನು ವಹಿಸುತ್ತಿವೆ. ಇಲ್ಲಿ ದೂರದೃಷ್ಟಿಯಿಂದ ಕೂಡಿದ ಅಭಿವೃದ್ಧಿ ಕೆಲಸಗಳಾಗಿವೆ. ಮುಂಬೈ ಮತ್ತು ಚೆನ್ನೈಗಳನ್ನು ಮೀರಿ ಬೆಳೆಯುವಂತಹ ಸಾಮರ್ಥ್ಯ ಮಂಗಳೂರಿಗಿದೆ. ಆದರೆ ಇಲ್ಲಿನ ಅಭಿವೃದ್ಧಿಹೀನ ಜನಪ್ರನಿಧಿಗಳಿಂದ ಮಂಗಳೂರು ಹಿನ್ನಡೆ ಸಾಧಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಲಸಾರಿಗೆ ಮೂಲಕ ನಡೆಸುವ ಹಲವು ಸಾಗಣೆಗಳು ಇಂದಿಗೂ ಚೆನ್ನೈನ ಬಂದರ್ ಮೂಲಕವೇ ಹೋಗುತ್ತಿವೆ. ನವಮಂಗಳೂರು ಬಂದರ್ ಹಿಂದುಳಿದಿದೆ. ಬೆಂಗಳೂರು-ಮಂಗಳೂರು ಸಂಪರ್ಕ ರಸ್ತೆಗಳು ಹೇಳಿಕೊಳ್ಳುವಷ್ಟು ಅಭಿವೃದ್ಧಿಯಾಗಿಲ್ಲ. ಇದು ನೇರವಾಗಿ ಪ್ರಯಾಣಿಕರಿಗೆ ಪ್ರಯಾಸದಾಯಕವಾಗಿದೆ. ಅಭಿವೃದ್ಧಿಗೆ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಹೇಳಿದರು.

ಸಂಸತ್‌ನ ಮಹತ್ವ ಕುಂಠಿತ: ಸಂಸದರಾದವರು ಸಂಸತ್‌ನಲ್ಲಿ ಅಭಿವೃದ್ಧಿ ವಿಚಾರಗಳನ್ನು ಮಂಡಿಸಿ, ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು. ಆದರೆ ಕೇಂದ್ರ ಸರಕಾರದಲ್ಲಿ ಕೇವಲ ರಾಜಕೀಯ ಭಾಷಣಗಳನ್ನು ಮಾಡಲಾಗುತ್ತಿದೆ. ಸಂಸತ್‌ನ ಮಹತ್ವ ಕಡಿಮೆಯಾಗುತ್ತಿದೆ. ಸಂಸದರೆನಿಸಿಕೊಂಡವರು ತಮ್ಮ ಜವಾಬ್ದಾರಿಗಳನ್ನು ಅರಿಯಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಅಭಿವೃದ್ಧಿಗೆ ವೇಗ ತರಬೇಕು ಎಂದು ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಬಿ.ಇಬ್ರಾಹೀಂ, ಸದಾಶಿವ ಉಳ್ಳಾಲ್, ಎ.ಸಿ.ಗೋಪಾಲ, ಮುಹಮ್ಮದ್ ಹನೀಫ್, ಟಿ.ಎಂ. ಪೂಜಾರಿ, ಚೆಂಗಪ್ಪ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್‌ನ ವಿನಯರಾಜ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X