Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಅವಧಿಯಲ್ಲಿ ಸಾಕ್ಷರತೆ, ಬಡ...

ಕಾಂಗ್ರೆಸ್ ಅವಧಿಯಲ್ಲಿ ಸಾಕ್ಷರತೆ, ಬಡ ಜನರಿಗೆ ಅನ್ನಭಾಗ್ಯ, ಮನೆ ದೊರಕಿದವು: ನಿಕೇತ್ ರಾಜ್ ಮೌರ್ಯ

ವಾರ್ತಾಭಾರತಿವಾರ್ತಾಭಾರತಿ12 April 2019 12:29 PM IST
share
ಕಾಂಗ್ರೆಸ್ ಅವಧಿಯಲ್ಲಿ ಸಾಕ್ಷರತೆ, ಬಡ ಜನರಿಗೆ ಅನ್ನಭಾಗ್ಯ, ಮನೆ ದೊರಕಿದವು: ನಿಕೇತ್ ರಾಜ್ ಮೌರ್ಯ

ಬಂಟ್ವಾಳ, ಎ. 12: ದೇಶ ಹಾಳಾಗಲು 60 ವರ್ಷಗಳ ಕಾಂಗ್ರೆಸ್ ಆಡಳಿತ ಕಾರಣ ಎಂದು ಬಿಜೆಪಿ ಹೇಳುತ್ತಾ ಬಂದಿರುವುದೇ ಸುಳ್ಳಿನ ಕಂತೆ. ಅಸಲಿಗೆ ಕಾಂಗ್ರೆಸ್ ಅವಧಿಯಲ್ಲಿ ಸಾಕ್ಷರತೆ, ಬಡ ಜನರಿಗೆ ಅನ್ನಭಾಗ್ಯ, ಬೆಳಕು, ಮನೆಗಳು ದೊರಕಿದವು. ದೊಡ್ಡ ಯೋಜನೆಗಳು ಬಂದವು ಎಂದು ಭಾಷಣಕಾರ ನಿಕೇತ್ ರಾಜ್ ಮೌರ್ಯ ಹೇಳಿದರು. 

ಬಿ.ಸಿ.ರೋಡಿನ ಪೊಳಲಿ ದ್ವಾರದ ಬಳಿ ಇರುವ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರ ಭಾಷಣ ಮಾಡಿದ ಅವರು, ಹಗರಣಗಳ ಬಗ್ಗೆ ಮಾತನಾಡುವ ನರೇಂದ್ರ ಮೋದಿ ನೇತೃತ್ವದ ಸರಕಾರದಿಂದ ಜನರು ಕೇವಲ ಭಾಷಣಗಳನ್ನಷ್ಟೇ ಕೇಳಬೇಕಾಯಿತು ಎಂದರು.

ಧರ್ಮನಿರಪೇಕ್ಷ ತತ್ವಗಳನ್ನು ಆಚರಿಸುವ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ಬಿಜೆಪಿಯಿಂದ ಆಯ್ಕೆಗೊಂಡ ಸಂಸದರು ಶೂನ್ಯ ಸಾಧನೆ ಮಾಡಿದ್ದಾರೆ, ಅಪಪ್ರಚಾರ ಮಾಡಿದರೆ ಗೆಲ್ಲುತ್ತೇವೆ ಎಂದು ನಂಬಿದ್ದಾರೆ ಎಂದು ಲೇವಡಿ ಮಾಡಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಅಪಪ್ರಚಾರದಿಂದ ತಾನು ವಿಧಾನಸಭೆಯಲ್ಲಿ ಸೋಲನುಭವಿಸಬೇಕಾಯಿತು. ಜನಪರ ಕೆಲಸ ಮಾಡಿದ ತೃಪ್ತಿ ತನಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸಂಸದರಿಂದ ಅಭಿವೃದ್ಧಿಗಳಾಗಿವೆ. ಬಿಜೆಪಿಯಿಂದ ಆಯ್ಕೆಗೊಂಡ ಸಂಸದರ ಯಾವುದಾದರೂ ಒಂದು ಸಾಧನೆಯನ್ನು ಹೇಳುವಿರಾ ಎಂದು ಪ್ರಶ್ನಿಸಿದರು.

ಪಕ್ಷದ ಅಭ್ಯರ್ಥಿ ಮಿಥುನ್ ರೈ ಮಾತನಾಡಿ, ತಾನು ಕೇಸರಿ ಶಾಲು ಹಾಕುವ ಬಗ್ಗೆ ಕೆಲವರು ಪ್ರಸ್ತಾಪಿಸುತ್ತಾರೆ. ಆದರೆ ಕೇಸರಿ ಎಲ್ಲರನ್ನೂ ಒಗ್ಗೂಡಿಸುವ ಸಂಕೇತ, ಹಿಂದು, ಮುಸ್ಲಿಂ, ಕ್ರೈಸ್ತರನ್ನು ಜೊತೆಗೂಡಿಸಿ ಕೆಲಸ ಮಾಡುತ್ತೇನೆ, ತನಗೆ ಅವಕಾಶ ನೀಡಿದರೆ ನಿಷ್ಠೆಯಿಂದ ಕೆಲಸ ಮಾಡುವೆ ಎಂಬ ಆಶ್ವಾಸನೆ ನೀಡಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡಿ, ಈ ಬಾರಿ ಮಿಥುನ್ ರೈ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಈ ಸಂದರ್ಭ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಶಾಹುಲ್ ಹಮೀದ್, ಪಕ್ಷ ಪ್ರಮುಖರಾದ ಬಿ.ಎಚ್. ಖಾದರ್, ಕೋಡಿಜಾಲ್ ಇಬ್ರಾಹಿಂ, ಜೆಡಿಎಸ್ ಪ್ರಮುಖರಾದ ಮಹಮ್ಮದ್ ಶಫಿ, ಪಿ.ಎ.ರಹೀಂ, ಹಾರೂನ್ ರಶೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ ಮಾಣಿ, ಅಬ್ಬಾಸ್ ಅಲಿ, ಪ್ರಮುಖರಾದ ಬಾಲಕೃಷ್ಣ ಆಳ್ವ ಕೊಡಾಜೆ, ಸದಾಶಿವ ಬಂಗೇರ, ಪ್ರಶಾಂತ್ ಕುಲಾಲ್, ರಾಜಶೇಖರ, ಯುವ ಜೆಎಡಿಸ್ ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X