Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ...

ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಮಾಹಿತಿ: 14 ಪ್ರಕರಣಗಳಲ್ಲಿ 24.5 ಲಕ್ಷ ರೂ. ನಗದು ವಶ

ವಾರ್ತಾಭಾರತಿವಾರ್ತಾಭಾರತಿ12 April 2019 8:01 PM IST
share

ಉಡುಪಿ, ಎ.12: ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಕ್ಷಣದಿಂದ ಇದುವರೆಗೆ ಒಟ್ಟು 14 ಪ್ರಕರಣಗಳಲ್ಲಿ, 24,59,290ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 23,50,290 ರೂ.ಗಳನ್ನು ಸಮರ್ಪಕ ದಾಖಲೆ ಪಡೆದು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಬಕಾರಿ ಇಲಾಖೆ ಜಿಲ್ಲೆಯಲ್ಲಿ 15,845.03ಲೀ. ಮದ್ಯ ವಶಪಡಿಸಿ ಕೊಂಡಿದ್ದು, ಇದರ ಮೌಲ್ಯ 64,39,144 ರೂ. ಆಗಿದೆ. ಈ ಸಂಬಂದ 3 ಟ್ರಕ್, 3 ದ್ವಿಚಕ್ರ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. 30 ಟನ್ ಅಕ್ಕಿ ಸೇರಿದಂತೆ ಒಟ್ಟು ಎಲ್ಲಾ ಪ್ರಕರಣಗಳ ಒಟ್ಟು ಮೊತ್ತ 1,99,97,185 ರೂ. ಆಗಿದೆ. ಪೊಲೀಸ್ ಇಲಾಖೆ ವತಿಯಿಂದ 6,107ರೂ.ಮೊತ್ತದ 11.7ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ 153 ದೂರುಗಳನ್ನು ಸ್ವೀಕರಿ ಸಿದ್ದು, 146 ದೂರುಗಳನ್ನು ವಿಲೇ ಮಾಡಲಾಗಿದೆ. 7 ಬಾಕಿ ಇದೆ. ಸುವಿಧಾ ಏಕ ಗವಾಕ್ಷಿ ಅನುಮತಿ ವ್ಯವಸ್ಥೆ ಮೂಲಕ ವಿವಿಧ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಒಟ್ಟು 168 ಅರ್ಜಿ ಸ್ವೀಕರಿಸಿದ್ದು, 145 ಅರ್ಜಿಗೆ ಅನುಮತಿ ನೀಡಲಾಗಿದೆ. 17 ಅರ್ಜಿಗಳು ತಿರಸ್ಕೃತಗೊಂಡಿದ್ದು, 6 ಅನುಮತಿಗೆ ಬಾಕಿ ಇವೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.

ವಾಹನ ಅನುಮತಿಗಾಗಿ 38 ಅರ್ಜಿ ಸ್ವೀಕರಿಸಿದ್ದು, ಇದರಲ್ಲಿ 35ಕ್ಕೆ ಅನುಮತಿ ನೀಡಲಾಗಿದೆ. 2ನ್ನು ತಿರಸ್ಕೃರಿಸಿದ್ದು, ಒಂದು ಅನುಮತಿಗೆ ಬಾಕಿ ಇದೆ. ಸಿವಿಜಿಲ್ ಆಪ್ ಮೂಲಕ ಈವರೆಗೆ 168 ದೂರುಗಳನ್ನು ಸ್ವೀಕರಿಸಿದ್ದು, ಇವುಗಳನ್ನು ಪರಿಶೀಲಿಸಿ ವಿಲೆವಾರಿ ಮಾಡಲಾಗಿದೆ. 39 ಡಮ್ಮಿ ಕೇಸ್ ಆಗಿದ್ದು, 130 ಸರಿಯಾದ ಪ್ರಕರಣಗಳಲ್ಲಿ 118 ಪ್ರಕರಣಗಳನ್ನು 100 ನಿಮಿಷಗಳ ಒಳಗೆ ವಿಲೇವಾರಿ ಮಾಡಲಾಗಿದೆ.

ಜಿಲ್ಲೆಯಲ್ಲಿ 8154 ಅಂಗವಿಕಲ ಮತದಾರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಮತಗಟ್ಟೆಯಲ್ಲಿ ಸಹಾಯ ಕೇಂದ್ರ, ಶೌಚಾಲಯ ವ್ಯವಸ್ಥೆ, ವೀಲ್‌ಚೇರ್ ವ್ಯವಸ್ಥೆ, ವಾಹನ ಪಾರ್ಕಿಂಗ್ ವ್ಯವಸ್ಥೆ, ಮ್ಯಾಗ್ನಿಪೈಡ್ ಗ್ಲಾಸ್, ಆದ್ಯತೆಯ ಮೇಲೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರಿಗೆ ಸಹ ಎಲ್ಲಾ ರೀತಿಯ ಅಗತ್ಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಲಾಗಿದೆ.

ಮತದಾರರ ಸಹಾಯವಾಣಿ 1950ರ ಮೂಲಕ 1462 ಕರೆಗಳನ್ನು ಸ್ವೀಕರಿಸಿದ್ದು, ಅಗತ್ಯ ಮಾಹಿತಿ ಹಾಗೂ ಸಹಾಯ ನೀಡಲಾಗಿದೆ. ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಸೇರ್ಪಡೆ ಕಾರ್ಯ ಮುಕ್ತಾಯ ಗೊಂಡಿದ್ದು, ಹೆಸರು ಸೇರ್ಪಡೆಯ ಬಳಿಕ ಮತಯಂತ್ರಗಳ ಕಾರ್ಯ ವೈಖರಿ ಯನ್ನು ಪರೀಕ್ಷಿಸಿ, ಖಚಿತಪಡಿಸಿಕೊಳ್ಳಲಾಗಿದೆ. 

ಜಿಲ್ಲೆಯಲ್ಲಿ 865 ಮತಗಟ್ಟೆಗಳನ್ನು ಸಂಬಂದಪಟ್ಟ ಸಹಾಯಕ ಚುನಾವಣಾಧಿ ಕಾರಿ, ಸೆಕ್ಟರ್‌ಅಧಿಕಾರಿ, ತಹಶೀಲ್ದಾರ್ ಅವರಿಂದ ಪರಿಶೀಲನೆ ನಡೆಸಿ, ಅಗತ್ಯ ವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು, ಚುನಾವಣಾ ಆಯೋಗದ ನಿರ್ದೇಶನದಂತೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X