Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೌಹಾರ್ದ, ಸಹಬಾಳ್ವೆ ಆಶಯದ ಪ್ರಕಾಶ್ ರಾಜ್...

ಸೌಹಾರ್ದ, ಸಹಬಾಳ್ವೆ ಆಶಯದ ಪ್ರಕಾಶ್ ರಾಜ್ ಪ್ರಣಾಳಿಕೆಯಲ್ಲಿ ಏನೇನಿದೆ?

ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ12 April 2019 8:24 PM IST
share
ಸೌಹಾರ್ದ, ಸಹಬಾಳ್ವೆ ಆಶಯದ ಪ್ರಕಾಶ್ ರಾಜ್ ಪ್ರಣಾಳಿಕೆಯಲ್ಲಿ ಏನೇನಿದೆ?

ಬೆಂಗಳೂರು, ಎ.12: ಸೌಹಾರ್ದ, ಸಹಬಾಳ್ವೆ ಆಶಯ, ಸಾಮಾಜಿಕ ನ್ಯಾಯದ ಪಾಲನೆ ಹಾಗೂ ನ್ಯಾಯಯುತ ಬೆಂಗಳೂರು ನಿರ್ಮಾಣದ ಭರವಸೆಯನ್ನು ಒಳಗೊಂಡ ಪ್ರಣಾಳಿಕೆಯನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್ ರಾಜ್ ಬಿಡುಗಡೆ ಮಾಡಿದರು.

ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಲ್ಲಿ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶವನ್ನು ಮುನ್ನಡೆಸಬೇಕಾದ ಸರಕಾರದಲ್ಲಿ ಹಾಗೂ ಸಮಾಜದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ದಾಳಿ ನಡೆಯುತ್ತಿದೆ ಮತ್ತು ದ್ವೇಷದ, ಅಸಹನೆಯ ವಾತಾವರಣ ಹೆಚ್ಚುತ್ತಿದೆ ಎನಿಸಿದಾಗ ತಳಮಳಗೊಂಡವನು ನಾನು. ಈಗ ಅನಿರೀಕ್ಷಿತವಾಗಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಜನರಪರ ಧ್ವನಿಯಾಗಲು ಬಯಸುತ್ತಿದ್ದೇನೆ ಎಂದು ತಿಳಿಸಿದರು.

ರಾಜಕರಣವು ದುಷ್ಟರ ತಾಣವೆಂದೂ, ಜನಸಾಮಾನ್ಯರು ರಾಜಕಾರಣಿಗಳನ್ನು ಬಯ್ಯುತ್ತಾ, ಅದರಿಂದ ದೂರವೇ ಉಳಿಯಬೇಕೆಂದೂ ತಿಳಿದಿರುವುದು ಸ್ಥಾಪಿತ ಶಕ್ತಿಗಳಿಗೆ ಹಿತವನ್ನುಂಟು ಮಾಡಿದೆ. ಅದನ್ನು ಬದಲಿಸಬೇಕೆಂದು ಮತ್ತು ಬದಲಿಸಲು ಸಾಧ್ಯವೆಂದು ದಿನೇ ದಿನೇ ನನಗೆ ಖಚಿತವಾಗುತ್ತಿದೆ. ಈ ಪಯಣದಲ್ಲಿ ನಾನು ಒಂಟಿಯಾಗಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಸಂಘಟನೆ ಹಾಗೂ ಪಕ್ಷಗಳ ಗಡಿಗಳನ್ನು ದಾಟಿ ಸಾವಿರಾರು ಜನ ಈ ದಾರಿಯಲ್ಲಿ ಜೊತೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸರಕಾರಿ ಶಾಲೆಗಳನ್ನು ಬಲಪಡಿಸುವುದು, ಕೆರೆಗಳ ಪುನರ್ಜೀವನ, ಹಸಿರು ಹೊದಿಕೆ ಹೆಚ್ಚಿಸುವುದು, ಕಸ-ಪಾರ್ಕ್‌ಗಳ ನಿರ್ವಹಣೆ, ಭ್ರಷ್ಟಾಚಾರ ನಿಗ್ರಹ, ಸಾಮಾನ್ಯ ನಾಗರಿಕ ಸಂಹಿತೆ ವಿರೋಧ ಮತ್ತು ದೂರು ನೀಡಲು ಮುಂದೆ ಬರುವ ಧೈರ್ಯದಿಂದ ಮಾತ್ರ ಸಾಧ್ಯ. ಇದನ್ನೆಲ್ಲ ಮಾಡಬಯಸುವ ನಾಗರಿಕರಿಗೆ ಒತ್ತಾಸೆಯಾಗಿ ಜನಪ್ರತಿನಿಧಿಗಳು ನಿಂತರೆ ಅದ್ಭುತವನ್ನೇ ಸಾಧಿಸಬಹುದು. ಅದನ್ನು ನಾನು ಮಾಡಿ ತೋರಿಸಲು ಬಯಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನದಲ್ಲಿ ಆರೋಗ್ಯದ ಹಕ್ಕು: ಸಂವಿಧಾನದಲ್ಲಿ ಆರೋಗ್ಯದ ಹಕ್ಕನ್ನೂ ಒಂದು ಮೂಲಭೂತ ಹಕ್ಕನ್ನಾಗಿ ಮಾಡುವುದಕ್ಕಾಗಿ ಒಂದು ತಿದ್ದುಪಡಿಯನ್ನು ತರುವ ಕೆಲಸ ಇಲ್ಲಿಯವರೆಗೂ ಆಗಿಲ್ಲ. ಗುಣಮಟ್ಟದ ಆರೋಗ್ಯ ಸೇವೆಯ ಲಭ್ಯತೆಯನ್ನು ಒಂದು ಮೂಲಭೂತ ಹಕ್ಕನ್ನಾಗಿ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಆಶ್ವಾಸನೆ ನೀಡಿದರು.

ನನ್ನ ಪ್ರಣಾಳಿಕೆ ದೇಶದ ಪ್ರಮುಖ ನಗರಗಳ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವಂತಿದೆ. ಅಲ್ಲದೆ, ಹತ್ತು ವರ್ಷಗಳಿಂದ ಬೆಂಗಳೂರಿನಲ್ಲೇ ನೆಲೆಸಿರುವ ಎಲ್ಲರಿಗೂ ಕೈಗೆಟುಕುವ ದರದ ವಸತಿ ವ್ಯವಸ್ಥೆಯನ್ನು ಮಾಡಲು ವಿಶೇಷ ಯೋಜನೆ ರೂಪಿಸಲಾಗುತ್ತದೆ.

ಪ್ರಣಾಳಿಕೆಯ ಅಂಶಗಳು

* ಮಹಿಳಾ ಹಾಗೂ ಹಿರಿಯ ನಾಗರಿಕ ಸಮಸ್ಯೆಗಳಿಗೆ ಪರಿಹಾರ

* ಕಸ ಮತ್ತು ಮಾಲಿನ್ಯದ ಸಮಸ್ಯೆಗೆ ರಚನಾತ್ಮಕ ಪರಿಹಾರ

* ರಾಜಧಾನಿಯ ಉದ್ಯಾನ ಹಾಗೂ ಕೆರೆಗಳ ಪುನಶ್ಚೇತನ

* ಸಾರ್ವತ್ರಿಕ ಆರೋಗ್ಯ ಸೇವೆ

* ನೀರು ಮತ್ತು ನಗರ ನೈರ್ಮಲ್ಯ

* ಆಧುನಿಕ ಮತ್ತು ಕೈಗೆಟುಕುವ ಸಂಚಾರ ವ್ಯವಸ್ಥೆ

* ಅಸಂಘಟಿತ ವಲಯದ ಕಾರ್ಮಿಕರೆಡೆ ಗಮನ

* ಮಕ್ಕಳ ಅಭಿವೃದ್ಧಿ; ಎಲ್ಲರಿಗೂ ಸಮಾನ ಶಿಕ್ಷಣ

* ಕ್ರೀಡೆ, ಕಲೆ ಹಾಗೂ ಸಂಸ್ಕೃತಿಗೆ ಹೆಚ್ಚು ಒತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X