Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ...

ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖ: ಪ್ರೊ. ಪದ್ಮಾ ರಾಮಚಂದ್ರನ್

► ಮಂಗಳೂರು ವಿವಿ 37ನೇ ಘಟಿಕೋತ್ಸವ ► 34 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 98 ವಿದ್ಯಾರ್ಥಿಗಳಿಗೆ ನಗದು ಬಹುಮಾನ

ವಾರ್ತಾಭಾರತಿವಾರ್ತಾಭಾರತಿ12 April 2019 8:48 PM IST
share
ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖ: ಪ್ರೊ. ಪದ್ಮಾ ರಾಮಚಂದ್ರನ್

ಕೊಣಾಜೆ: ಉತ್ತಮ ಬದುಕನ್ನು ಕಟ್ಟಿಕೊಡುವಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದುದು. ಶಿಕ್ಷಣದೊಂದಿಗೆ ಉತ್ತಮ ಕೌಶಲ್ಯ, ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಜೀವನದಲ್ಲಿ ಯಶಸ್ವಿಗಳಿಸಲು ಸಾಧ್ಯ ಎಂದು ಬರೋಡ ಎಂ.ಎಸ್. ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಕೇರಳ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಪ್ರೊ.ಪದ್ಮಾ ರಾಮಚಂದ್ರನ್ ಅವರು ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ 37 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು.

ಇಡೀ ಜಗ್ತತನ್ನೇ ಗೆಲ್ಲುವ ಶಕ್ತಿ ಶಿಕ್ಷಣಕ್ಕಿದೆ. ಇಂದು ಉನ್ನತ ಶಿಕ್ಷಣವನ್ನು ಕಲಿಯಲು ಬಹಳಷ್ಟು ಅವಕಾಶಗಳಿವೆ. ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ನಮ್ಮಲ್ಲಿರುವ ನಕಾರಾತ್ಮಕ ಚಿಂತನೆಗಳನ್ನು ದೂರಗೊಳಿಸಿ ಸಮಾಜಪರ ಮನೋಭಾವವನ್ನು  ಬೆಳೆಸಿಕೊಂಡರೆ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ ಎಂದರು.

ಮಂಗಳೂರು ವಿಶ್ವವಿದ್ಯಾಲಯವು ಯುವ ವಿಶ್ವವಿದ್ಯಾಲಯವಾಗಿದ್ದು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದರೊಂದಿಗೆ ದೇಶದ ಪ್ರಮುಖ ವಿಶ್ವವಿದ್ಯಾಲಯದೊಂದಿಗೆ ಗುರುತಿಸಲ್ಟಟ್ಟಿದೆ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಅವರು ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪದವಿ ಪ್ರದಾನ ಮಾಡಿದರು. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಎ.ಎಂ.ಖಾನ್ ಅವರು ಸ್ವಾಗತಿಸಿ, ವಿಶ್ವವಿದ್ಯಾಲಯದ ಸಾಧನೆಯನ್ನು ಪರಿಚಯಿಸಿದರು. ಕಾರ್ಯ ಕ್ರಮದಲ್ಲಿ ವಿವಿಧ ವಿಭಾಗಗಳ ಡೀನ್, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಭಾಗವಹಿಸಿದ್ದರು.

34 ಮಂದಿಗೆ ಚಿನ್ನದ ಪದಕ

ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳ 149 ಮಂದಿಗೆ ಪಿ.ಎಚ್‍ಡಿ, ಒಬ್ಬರಿಗೆ ಡಾಕ್ಟರ್ ಆಫ್ ಸಯನ್ಸ್, 34 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 98 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪಡೆದುಕೊಂಡರು. ವಿವಿಧ ಕೋರ್ಸ್‍ಗಳಲ್ಲಿ ಪ್ರಥಮ ರ್ಯಾಂಕ್ ಪಡೆದ 70 ಮಂದಿಗೆ ರ್ಯಾಂಕ್ ಪ್ರಮಾಣ ಪತ್ರ ನೀಡಲಾಯಿತು.

ಮಂಗಳೂರು ವಿಶ್ವವಿದ್ಯಾಲಯವು  2017-18ರಲ್ಲಿ ನಡೆಸಿದ ವಿವಿಧ ಪರೀಕ್ಷೆಗಳಿಗೆ ಒಟ್ಟು 42,742 ವಿದ್ಯಾರ್ಥಿಗಳು ಹಾಜರಾಗಿದ್ದು 29,110 ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದಾರೆ. ಸ್ನಾತಕೋತ್ತರ ಪದವಿ ಪರೀಕ್ಷೆಗೆ 7.052 ವಿದ್ಯಾರ್ಥಿಗಳು ಹಾಜರಾಗಿದ್ದು 6,642 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

138 ಪಿ.ಎಚ್‍ಡಿ, 1 ಡಿಎಸ್ಸಿ, 1,189 ಸ್ನಾತಕೋತ್ತರ ಪದವಿ, 3,449 ಪದವಿ ಸೇರಿದಂತೆ ಒಟ್ಟು 4,777ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಖುದ್ದು ಹಾಜರಾಗಿ ಪದವಿ ಪಡೆದರು.

ಪದಕ, ನಗದು ಪುರಸ್ಕಾರದೊಂದಿಗೆ ಮಿಂಚಿದ ವಿದ್ಯಾರ್ಥಿಗಳು

ಘಟಿಕೋತ್ಸವದಲ್ಲಿ ಕನ್ನಡ ವಿಭಾಗದಲ್ಲಿ ಸೌಮ್ಯ ಕೆ ಅವರು 1 ಚಿನ್ನದ ಪದಕ 5 ನಗದು ಪುರಸ್ಕಾರ, ಇತಿಹಾಸ ವಿಭಾಗದಲ್ಲಿ ರಕ್ಷಿತಾ 2 ಚಿನ್ನದ ಪದಕ ದೊಂದಿಗೆ 3 ನಗದು ಪುರಸ್ಕಾರ, ಎಂಸಿಜೆ ವಿಭಾಗದಲ್ಲಿ ಅಶ್ವಿನ್ ಜೈನ್ ಅವರು 2 ಚಿನ್ನದ ಪದಕ ಹಾಗೂ 3 ನಗದು, ಎಂಎಸ್ಸಿಯಲ್ಲಿ ಗಣೇಶ್ ಕೃಷ್ಣ ಅವರು 2 ಚಿನ್ನದ ಪದಕ ಹಾಗೂ ಒಂದು ನಗದು ಪುರಸ್ಕಾರ, ರಸಾಯನಶಾಸ್ತ್ರ ವಿಭಾಗದಲ್ಲಿ ಸುಮಲತಾ 3 ಚಿನ್ನದ ಪದಕ ಹಾಗೂ 2 ನಗದು ಪುರಸ್ಕಾರ, ಎಂ.ಕಾಂ ನಲ್ಲಿ ಸುಮಾ ಅವರು ಎರಡು ಚಿನ್ನದ ಪದಕ ಹೀಗೆ ಹಲವು ವಿದ್ಯಾರ್ಥಿಗಳು ರ್ಯಾಂಕ್ ಚಿನ್ನದ ಪದಕ, ನಗದು ಪುರಸ್ಕಾರವನ್ನು ಪಡೆದು ಸಂಭ್ರಮಿಸಿದರು.

ಪಿಎಚ್‍ಡಿ ಪದವಿ ಪಡೆದ ವಿದೇಶಿಯರು

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪದವಿಯನ್ನು ಪೂರೈಸಿದ ರಿಗ್ವಾಂಡ ದೇಶದ ಡ್ಯುಕುಝಿಯಾ ಟ್ಯುರೇಮಿಯಾ ಪಿಯಾರ್ರೆ, ದುಸೈಡಿ ಒಡೆಟ್ಟಿ, ರುಸಗರ ಜೀನ್ ಬೋಸ್ಟಾ, ಇಯೋಲಾರಿಯ ಮುಟಾಮುಡಿಯಾ ಸೇರಿದಂತೆ ಒಟ್ಟು ಆರು ಜನ ವಿದೇಶಿ ವಿದ್ಯಾಥಿಗಳು ಪಿಎಚ್‍ಡಿ ಪದವಿಯನ್ನು ಪಡೆದುಕೊಂಡರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X