ಮಂಗಳೂರು: ಎ.13ರಂದು ಮದ್ಯ ಮಾರಾಟ ನಿಷೇಧ
ಮಂಗಳೂರು, ಎ.12: ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಎ.13ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿ, ನೆಹರೂ ಮೈದಾನದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡಲು ಸಾರ್ವಜನಿಕರ ಹಿತದೃಷ್ಟಿಯಿಂದ ಎ.13ರಂದು ಪೂರ್ವಾಹ್ನ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಂಗಳೂರು, ಮೂಡುಬಿದಿರೆ ಹಾಗೂ ಬಂಟ್ವಾಳ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಕರ್ನಾಟಕ ಅಬಕಾರಿ ಕಾಯ್ದೆಯಡಿ ಕಾರ್ಯಾಚರಿಸುತ್ತಿರುವ ಸನ್ನದು ಆವರಣ ಹಾಗೂ ಮಾರಾಟ ಕೇಂದ್ರಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
Next Story





