Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಂತಿ, ಸಾಮರಸ್ಯ - ದೇಶದ ಅಭಿವೃದ್ಧಿಗಾಗಿ...

ಶಾಂತಿ, ಸಾಮರಸ್ಯ - ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ನ್ಯಾ. ನೂರುದ್ದೀನ್ ಸಾಲ್ಮರ

ವಾರ್ತಾಭಾರತಿವಾರ್ತಾಭಾರತಿ12 April 2019 11:12 PM IST
share

ಪುತ್ತೂರು: ಅಧಿಕಾರದ ಆಸೆಯಿಂದ ಜಾತಿ, ಧರ್ಮಗಳ ಹೆಸರಿನಲ್ಲಿ ದ್ವೇಷವನ್ನು ಸೃಷ್ಠಿಸುವ ವಾತಾವರಣಗಳು ನಡೆಯುತ್ತಿದ್ದು, ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ. ಇವುಗಳನ್ನು ತಡೆದು ಸಾಮರಸ್ಯದ ಜೀವನ ಸಾಗಿಸಲು ಅನುಕೂಲಕರವಾದ ವಾತಾವರಣವನ್ನು ಕಾಂಗ್ರೆಸ್ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಂತಿ, ಸಾಮರಸ್ಯ ಮತ್ತು ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೆಪಿಸಿಸಿ ಅಲ್ಪ ಸಂಖ್ಯಾತರ ಸಮಿತಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಸಹಿಷ್ಣುತೆ ಅಧಿಕವಾಗಿದೆ. ಕೇಂದ್ರದ ಸಚಿವರು, ಸಂಸದರು ಕೋಮು ಧ್ವೇಷವನ್ನು ಸಾರುತ್ತಿದ್ದಾರೆ. ದೇಶದ ಅಭಿವೃದ್ಧಿಗೆ ಬದಲಾಗಿ ಕೋಮು ಧ್ವೇಷದ ಹೆಸರಿನಲ್ಲಿ ಸಮಾಜವನ್ನು ಒಡೆಯಲಾಗುತ್ತಿದೆ. ಸಮಾಜದಲ್ಲಿ ಅಶಾಂತಿಯ ಪರಿಣಾಮದಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳೂ ಸಂಸದರಿಂದ ಕೇಳಿ ಬರುತ್ತಿದೆ. ದೇಶದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ದೇಶದ ಸಂವಿಧಾನವನ್ನು ಉಳಿಸುವುದು ಮತದಾರರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಾತ್ಯಾತೀತ ನಿಲುವಿನ ಮಿಥುನ್ ರೈ ಅವರನ್ನು ಈ ಬಾರಿ ಎಲ್ಲರೂ ಬೆಂಬಲಿಸಲಿದ್ದಾರೆ ಎಂದರು.

ಸಾಮರಸ್ಯ ಬಯಸುವವರು ಯಾವತ್ತೂ ಕೋಮುವಾದಿಗಳಾದ ಬಿಜೆಪಿ ಅಥವಾ ಎಸ್‍ಡಿಪಿಐಯ ಜೊತೆ ಹೋಗುವುದಿಲ್ಲ. ಈ ಎರಡೂ ಪಕ್ಷಗಳು ಸಮುದಾಯದ ಸಮಸ್ಯೆಗಳನ್ನು ವೈಭವೀಕರಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ತ್ರಿವಳಿ ತಲಾಖ್ ವಿಚಾರದಲ್ಲಿ ಶರೀಯತ್ ಬೋರ್ಡ್‍ನ ಮಾಹಿತಿ ಪಡೆಯದೆ ಏಕಾಏಕಿ ಜಾರಿಗೊಳಿಸುವ ಮೂಲಕ ಮೋದಿ ಸರ್ಕಾರವು ಮುಸ್ಲಿಂ ಸಮುದಾಯದ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಓಟಿಗಾಗಿ ಮೋದಿಯವರು ಈ ಕಾನೂನು ಜಾರಿಗೊಳಿಸಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. 

ಎಸ್‍ಡಿಪಿಐಗೆ ಮುಸ್ಲಿಂ ಬೆಂಬಲವಿಲ್ಲ-ನಝೀರ್ ಮಠ
ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯದರ್ಶಿ ನಝೀರ್ ಮಠ ಅವರು ಮಾತನಾಡಿ ಚುನಾವಣೆಯ ಸಂದರ್ಭದಲ್ಲಿ ಮಾತ್ರ ಜಾತ್ಯಾತೀತ ಪಕ್ಷವಾದ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡುತ್ತಿರುವ ಎಸ್‍ಡಿಪಿಐಗೆ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಬೆಂಬಲವಿಲ್ಲ. ಬಿಜೆಪಿ, ಮೋದಿ, ನಳಿನ್ ವಿರುದ್ದ ಎಂದೂ ಮಾತನಾಡದ ಎಸ್‍ಡಿಪಿಐ ಪಕ್ಷದವರು ಮಿಥುನ್ ವಿರುದ್ಧ ಮಾತ್ರ ಮಾತನಾಡುತ್ತಿದ್ದಾರೆ. ಈ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ. ಜಿಲ್ಲೆಯ ಮತದಾರರಿಗೆ ತಿಳುವಳಿಕೆಯಿದೆ. ಎಸ್‍ಡಿಪಿಐ ಕಾರ್ಯಕರ್ತರ ಹೊರತಾಗಿ ಇತರ ಯಾವುದೇ ಮತಗಳು ಅವರಿಗೆ ಸಿಗುವುದಿಲ್ಲ ಎಂದರು. 

ಸುದ್ದಿಗೋಷ್ಠಿಯಲ್ಲಿ ಪಕ್ಷದ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಕರ್ನಾಟಕ ಪ್ರದೇಶ ಯುವಕ ಕಾಂಗ್ರೆಸ್ ಸಂಯೋಜಕ ಅಬ್ದುಲ್ ಸಮದ್ ಸೋಂಪಾಡಿ, ನವಾಝ್ ಕೆರೆಮೂಲೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X