ಚುನಾವಣೆ ಬಳಿಕ ಮೋದಿ ಮನೆಗೆ ಹೋಗುತ್ತಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಎ.15: ಲೋಕಸಭ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಏನು ಕೆಲಸ ಮಾಡಿದ್ದಾರೆ ಎಂದು ಜನ ಓಟು ಹಾಕುತ್ತಾರೆ. ಬರೀ ಎಮೋಷನಲ್ ವಿಷಯವನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಒಂದು ದಿನವೂ ಮಾತನಾಡಿಲ್ಲ, ಪ್ರಧಾನಿಯಾಗಿ ಸನ್ಯಾಸತ್ವ, ಪರ್ಸೆಂಟೇಜ್ ಬಗ್ಗೆ ಮಾತನಾಡುತ್ತಾರೆ. ಐದು ವರ್ಷದ ಅವರ ಸಾಧನೆ ಬಗ್ಗೆ ಮಾತನಾಡುವುದಿಲ್ಲ. ಜನ ಅಭಿವೃದ್ಧಿ ಮಾಡಿರುವವರಿಗೆ ಮತ ನೀಡುತ್ತಾರೆ. ಬರೀ ಸುಳ್ಳುಗಳನ್ನೇ ಹೇಳಿಕೊಂಡು ತಿರುಗಾಡಿದ ಮೋದಿಯನ್ನು ಲೋಕಸಭಾ ಚುನಾವಣೆ ಬಳಿಕ ಮನೆಗೆ ಕಳುಹಿಸುತ್ತಾರೆ. ಅಮಿತ್ ಶಾ ಬೇಲ್ ಸಹ ಕ್ಯಾನ್ಸಲ್ ಆಗಬಹುದು ಎಂದು ಹೇಳಿದರು.
ಪರ್ಸೆಂಟೆಜ್ ಸರ್ಕಾರ ಎಂಬ ಮೋದಿ ಹೇಳಿಕೆಗೆ ಕೆಂಡಾಮಂಡಲರಾದ ಅವರು, ಒಬ್ಬ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ಕೊಡಬಾರದು. ಇದೊಂದು ಬೇಸ್ಲೆಸ್ ಆರೋಪ. ಮೋದಿ ಸರ್ಕಾರ 100% ಭ್ರಷ್ಟ ಸರ್ಕಾರ ಅಂತ ಆರೋಪ ಮಾಡ್ತೇನೆ. ಅದನ್ನು ನೀವು ಹಾಕುತ್ತೀರ, ಒಬ್ಬ ಪ್ರಧಾನಿ ಈ ಮಟ್ಟಕ್ಕೆ ಇಳಿದು ಮಾತನಾಡಬಾರದು. ಅವರ ಬಳಿ ಇಂಟೆಲಿಜೆನ್ಸ್ ಸೇರಿದಂತೆ ಹಲವು ಇಲಾಖೆಗಳಿವೆ. ಇಂತಹ ಆರೋಪ ಮಾಡುವ ಮುನ್ನ ಯೋಚನೆ ಮಾಡಬೇಕು. ಕಳೆದ ಐದು ವರ್ಷದಲ್ಲಿ ಎಮೋಷನಲ್ ಇಶ್ಯೂ ಬಿಟ್ಟು ಬೇರೆ ಏನು ಮಾತನಾಡಿಲ್ಲ. ರಾಹುಲ್ ಗಾಂಧಿ ವಯನಾಡಲ್ಲಿ ನಿಲ್ಲೋದನ್ನೂ ಕಮೆಂಟ್ ಮಾಡ್ತಾರೆ. ಅಲ್ಲಿ ಮೈನಾರಿಟಿ ಇರುವುದರಿಂದ ಅಲ್ಲಿ ನಿಲ್ಲುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಾರೆ. ಇದು ಕಮ್ಯೂನಲ್ ವಯಲೆನ್ಸ್ ಆಗಲ್ವಾ? ಇಂತಹ ಹೇಳಿಕೆಯನ್ನು ಪ್ರಧಾನಿ ಕೊಡಬಹುದಾ ಎಂದು ಪ್ರಶ್ನಿಸಿದರು.
ನಾನು ಕೇವಲ ಚಾಮುಂಡೇಶ್ವರಿಯಲ್ಲಿ ಮಾತ್ರ ಚುನಾವಣೆಯಲ್ಲಿ ನಿಲ್ಲಲ್ಲ ಅಂತ ಹೇಳಿದ್ದೆ. ನಾನು ಬೇರೆ ಕಡೆ ನಿಲ್ಲೋದಿಲ್ಲ ಅಂತ ಹೇಳಿದ್ದೇನಾ ಎಂದು ಕೇಳುವ ಮೂಲಕ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸುಳಿವನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದರು.
ಇನ್ನೂ ಚುನಾವಣೆಗೆ ನಾಲ್ಕು ವರ್ಷ ಬಾಕಿ ಇದೆ, ಮುಂದೆ ನೋಡೋಣ ಬಿಡಿ. ನನಗೂ ಚಾಮುಂಡೇಶ್ಚರಿ ಕ್ಷೇತ್ರದ ಖುಣ ಮುಗಿದಿದೆ ಎಂದರು. ಮೈತ್ರಿ ಪಕ್ಷ ಸೋತರೆ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಬಹುದು ಎಂದು ಹೇಳಿದ್ದೇನೆ. ಬಿಜೆಪಿ ಸದಾ ಮೈತ್ರಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಯಡಿಯೂರಪ್ಪ ಮೊದಲಿಂದಲೂ ಹೇಳಿಕೊಂಡು ಬರುತ್ತಿದ್ದಾರೆ. ಸರ್ಕಾರ ಬೀಳಿಸೋಕೆ ಆಗಿದ್ಯಾ ? ಯಡಿಯೂರಪ್ಪ ಒಬ್ಬ ಲೀಡರಾ? ಬಿಜೆಪಿ ಒಂದು ಪಾರ್ಟಿನಾ, ಒಂದು ತತ್ವ ಸಿದ್ಧಾಂತ ಇಲ್ಲ, ಅವರಿಗೆ ನೈತಿಕತೆ ಇದೆಯಾ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.







