Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಈ ಬಾರಿ ಅಂಧ ಮತದಾರರಿಗೆ ಮತದಾನ...

ಉಡುಪಿ: ಈ ಬಾರಿ ಅಂಧ ಮತದಾರರಿಗೆ ಮತದಾನ ಸುಲಭ

ವಾರ್ತಾಭಾರತಿವಾರ್ತಾಭಾರತಿ15 April 2019 10:42 PM IST
share

ಉಡುಪಿ, ಎ.15: ಚುನಾವಣೆಯಲ್ಲಿ ಎಲ್ಲರನ್ನೂ ಒಳಗೊಳ್ಳುವ ಚುನಾವಣಾ ಆಯೋಗದ ಆಶಯದಂತೆ, ಈ ಬಾರಿ ಅಂಧ ಮತದಾರರಿಗೆ ಅನುಕೂಲ ವಾಗುವಂತೆ ಬ್ರೈಲ್ ಮತಪತ್ರವನ್ನು ಸಿದ್ದಪಡಿಸಲಾಗಿದ್ದು, ಇದರಿಂದ ಅಂಧ ಮತದಾರರು ಸ್ವತ: ತಾವೇ ಕಣದಲ್ಲಿರುವ ಅಭ್ಯರ್ಥಿಗಳನ್ನು ಸುಲಭದಲ್ಲಿ ಗುರುತಿಸಿ ಮತ ಚಲಾಯಿಸಬಹುದಾಗಿದೆ.

ಅಂಧ ಮತದಾರರು ಮತ ಚಲಾಯಿಸಲು ಸಹಾಯಕರೊಬ್ಬರನ್ನು ಕರೆತರುವ ಅವಕಾಶ ಇದ್ದರೂ ಸಹ, ಸಹಾಯಕರು ಸೂಚಿಸಿದ ಕ್ರಮ ಸಂಖ್ಯೆಯ ಬಟನ್ ಒತ್ತಿ, ತಮ್ಮ ಮತ ಚಲಾಯಿಸುತ್ತಿದ್ದರು. ಆದರೆ ತಮ್ಮ ಮತ ತಾವು ಇಚ್ಚಿಸಿದ ಪಕ್ಷ ಅಥವಾ ಅಭ್ಯರ್ಥಿಗೆ ಬಿದ್ದಿರುವ ಕುರಿತು ಸ್ವಯಂ ದೃಢೀಕರಿಸಿಕೊಳ್ಳಲು ಸಾಧ್ಯವಿರಲಿಲ್ಲ. ಆದರೆ ಪ್ರಸ್ತುತ ಚುನಾವಣಾ ಆಯೋಗದ ನಿರ್ದೇಶನದಂತೆ ಅಂಧ ಮತದಾರರಿಗೆ ಅನುಕೂಲವಾಗುವಂತೆ ಬ್ರೈಲ್ ಮಾದರಿ ಮತಪತ್ರ ವನ್ನು ಸಿದ್ದಪಡಿಸಿದ್ದು, ಈ ಮತಪತ್ರದಲ್ಲಿ ಸಾಮಾನ್ಯ ಮತಪತ್ರದಲ್ಲಿರುವಂತೆ, ಕ್ರ,ಸಂ. ಅ್ಯರ್ಥಿಗಳ ಹೆಸರನ್ನು ಬ್ರೈಲ್ ಲಿಪಿಯಲ್ಲಿ ಸಿದ್ದಪಡಿಸಿದ್ದು, ಎಲ್ಲಾ ಮತಗಟ್ಟೆ ಗಳಿಗೆ ರವಾನಿಸಲಾಗಿದೆ.

ಮತ ಚಲಾಯಿಸಲು ಬರುವ ಅಂಧ ಮತದಾರರು ಮತಗಟ್ಟೆ ಅಧಿಕಾರಿ ಯಿಂದ/ ಸ್ವಯಂ ಸೇವಕರಿಂದ, ಬ್ರೈಲ್ ಮತಪತ್ರವನ್ನು ಪಡೆದು ತಮ್ಮ ಬೆರಳಲ್ಲಿ ಅದರಲ್ಲಿ ನಮೂದಿಸಿರುವ ಸಂಕೇತಾಕ್ಷರಗಳ ಮೂಲಕ ತಮ್ಮ ಆಯ್ಕೆ ಅಭ್ಯರ್ಥಿಯನ್ನು ಗುರುತಿಸಿ, ಮತಯಂತ್ರದಲ್ಲಿ ಅಳವಡಿಸಿರುವ ಬ್ರೈಲ್ ಅಕ್ಷರಗಳ ಕ್ರಮ ಸಂಖ್ಯೆ ಮೂಲಕ ಗುರುತಿಸಿ ಮತ ಚಲಾಯಿಸಬಹುದಾಗಿದೆ.

ಪ್ರತಿ ಜಿಲ್ಲೆಯಲ್ಲಿ ಕಣದಲ್ಲಿರುವ ಅ್ಯರ್ಥಿಗಳ ವಿವರಗಳನ್ನು, ಅಯಾ ಜಿಲ್ಲಾ ಚುನಾವಣಾಧಿಕಾರಿಗಳು ಸಿದ್ದಪಡಿಸಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿದೇರ್ಶನದಂತೆ, ಈ ಬ್ರೈಲ್ ಮತಪತ್ರವನ್ನು , ಸಾಮಾನ್ಯ ಮತಪತ್ರಕ್ಕೆ ತಾಳೆಯಾಗುವ ಬಗ್ಗೆ ಅಂಧ ಶಾಲೆಯ ಪ್ರಾಂಶುಪಾಲ ರಿಂದ ಪರೀಕ್ಷಿಸಿ, ಖಚಿತಪಡಿಸಿಕೊಂಡು ಆಯಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಿಗೆ ತಲುಪಿಸಬೇಕಿದೆ.

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ನಿರ್ದೇಶನದಂತೆ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ, ಮಸ್ಟರಿಂಗ್ ದಿನದಂದು ಇದನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ.

ಈ ಬ್ರೈಲ್ ಮತಮತ್ರದ ನೆರವಿನಿಂದ, ಅಂಧ ಮತದಾರರು ಮತಯಂತ್ರದ ಬಳಿ ಸಹಾಯಕರ ನೆರವಿಲ್ಲದೇ, ಮತಯಂತ್ರದಲ್ಲಿ ತಾವೇ ಖುದ್ದು ತಮ್ಮ ಇಷ್ಠದ ಅ್ಯರ್ಥಿಗೆ ಮತ ಚಲಾಯಿಸುವ ಮೂಲಕ ತಮ್ಮ ಅಮೂಲ್ಯ ಮತವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X