Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಆಶಯದಂತೆ ಮೋದಿ ಆಡಳಿತ:...

ಅಂಬೇಡ್ಕರ್ ಆಶಯದಂತೆ ಮೋದಿ ಆಡಳಿತ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ15 April 2019 10:45 PM IST
share
ಅಂಬೇಡ್ಕರ್ ಆಶಯದಂತೆ ಮೋದಿ ಆಡಳಿತ: ಡಿ.ವಿ.ಸದಾನಂದಗೌಡ

ಬೆಂಗಳೂರು, ಎ.15: ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಪ್ರಧಾನಿ ನರೇಂದ್ರ ಮೋದಿ, ಕಳೆದ ಐದು ವರ್ಷಗಳಲ್ಲಿ ಜಾತಿ, ಮತ, ಧರ್ಮ ನೋಡದೆ ಸರ್ವಧರ್ಮ ಸಮನ್ವಯತೆಯೊಂದಿಗೆ ಆಡಳಿತ ನಡೆಸಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಪ್ರಶಂಸೆ ವ್ಯಕ್ತಪಡಿಸಿದರು.

ನಗರದ ಯಶವಂತಪುರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಗಳಿಗೂ ಸಂವಿಧಾನಬದ್ಧ ಸವಲತ್ತುಗಳು ಸಿಕ್ಕಾಗ ಮಾತ್ರ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದನ್ನು ನನಸು ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ 130 ಕೋಟಿ ರೂ.ಜನರ ನಿರೀಕ್ಷೆಗೆ ತಕ್ಕಂತೆ ಯಶಸ್ವಿ ಆಡಳಿತ ನೀಡಿದ್ದಾರೆ ಎಂದರು.

ಇಡೀ ಜಗತ್ತಿನಲ್ಲಿ ಅತ್ಯಂತ ಸರ್ವಶ್ರೇಷ್ಠವಾದ ಸಂವಿಧಾನವನ್ನು ನೀಡಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ನಮ್ಮ ಸರಕಾರ ಸಂವಿಧಾನ ದಿನ ಆಚರಣೆಯನ್ನು ಜಾರಿ ಮಾಡಲು ತೀರ್ಮಾನಿಸಿದೆವು. ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸದಾನಂದ ಗೌಡ ಹೇಳಿದರು.

ಕಾಂಗ್ರೆಸ್ ಕೇವಲ ಅಂಬೇಡ್ಕರ್ ಅವರ ಹೆಸರನ್ನು ವೋಟ್ ಬ್ಯಾಂಕ್‌ಗೆ ಸೀಮಿತಗೊಳಿಸಿದೆ. 60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದರೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ದೀನದಲಿತರು, ಅಲೆಮಾರಿಗಳು, ಆದಿವಾಸಿಗಳು ಸೇರಿದಂತೆ ಸಮಾಜದ ಕಟ್ಟಕಡೆಯ ಯಾವುದೇ ವ್ಯಕ್ತಿಗೆ ಸಂವಿಧಾನಬದ್ಧ ಸವಲತ್ತುಗಳು ಸಿಗಲಿಲ್ಲ. ಇಂಥ ತಳ ಸಮುದಾಯಗಳನ್ನು ಗುರುತಿಸಿ ಅವರನ್ನು ಸಮಾಜದ ಮುನ್ನೆಲೆಗೆ ತಂದಿದ್ದು ಮೋದಿ ಎಂದು ಅವರು ತಿಳಿಸಿದರು.

ಅಂಬೇಡ್ಕರ್ ಸಂಸತ್‌ಗೆ ಆಯ್ಕೆಯಾಗಿದ್ದರೆ ತಮಗೆ ಉಳಿಗಾಲವಿಲ್ಲ ಎಂಬುದನ್ನು ಅರಿತಿದ್ದ ಕಾಂಗ್ರೆಸ್ ನಾಯಕರು ಅವರನ್ನು ಚುನಾವಣೆಯಲ್ಲಿ ಸೋಲಿಸಲು ಷಡ್ಯಂತ್ರ ನಡೆಸಿದರು. ಕೊನೆಗೆ ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅವರು ಮಾಡಿದ ಕೆಲಸ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಸದಾನಂದ ಗೌಡ ಹೇಳಿದರು.

ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ. ನನ್ನ ವಿರುದ್ಧ ಯಾರೂ ಏನೇ ಅಪಪ್ರಚಾರ ಮಾಡಿದರೂ ಮತದಾರ ನನ್ನನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಐದು ವರ್ಷಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿರುವಾಗ ಬೇರೊಬ್ಬರನ್ನು ಹೇಗೆ ಬೆಂಬಲಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X