ಪ್ರಮೋದ್ ಮಧ್ವರಾಜರ ಪಾದಯಾತ್ರೆ ರದ್ದು
ಉಡುಪಿ, ಎ.15: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ ಅವರು ಎ.16ರ ಮಂಗಳವಾರ ಹಮ್ಮಿಕೊಂಡಿದ್ದ ಪಾದಯಾತ್ರೆ ರದ್ದಾಗಿದೆ.
ಪೂರ್ವ ನಿಯೋಜಿತ ಕಾರ್ಯಕ್ರಮದ ಪ್ರಕಾರ ಅವರು ತರಿಕೆರೆಯಲ್ಲಿ ಇರಬೇಕಾದುದರಿಂದ ನಾಳೆ ನಡೆಯಬೇಕಾಗಿದ್ದ ಪಾದಯಾತ್ರೆ ರದ್ದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





