Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಸರಕಾರದ ಅಭಿವೃದ್ಧಿಯೇ ನನ್ನ...

ರಾಜ್ಯ ಸರಕಾರದ ಅಭಿವೃದ್ಧಿಯೇ ನನ್ನ ಗೆಲುವಿಗೆ ಶ್ರೀರಕ್ಷೆ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ15 April 2019 11:21 PM IST
share
ರಾಜ್ಯ ಸರಕಾರದ ಅಭಿವೃದ್ಧಿಯೇ ನನ್ನ ಗೆಲುವಿಗೆ ಶ್ರೀರಕ್ಷೆ: ಪ್ರಮೋದ್ ಮಧ್ವರಾಜ್

ಉಡುಪಿ, ಎ.15: ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ರೂಪಿಸಲಾಗಿದ್ದ ಯೋಜನೆಗಳೊಂದಿಗೆ ಈಗಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರವು ಹೊಸ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಕಳಸದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯ ಕರ್ತರ ಸಭೆಯಲ್ಲಿ ಅವರು ಮಾತನಾಡುತಿದ್ದರು. ಸರ್ವರಿಗೂ ಸಮಬಾಳು, ಸಮಪಾಲು ಸಿದ್ಧಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನ ಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್, ಕೃಷಿ ಮುಂತಾದ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದ ಅಧಿಕಾರದ ಅವಧಿಯಲ್ಲಿ ಪ್ರಾದ್ಯಾನ್ಯತೆ ನೀಡುವ ಮೂಲಕ ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವು ಮುಂಚೂಣಿ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದರು.

ಕಾಂಗ್ರೆಸ್ ಎಂದರೆ ಅದು ಕೇವಲ ಪಕ್ಷವಲ್ಲ ಅದು ಅಭಿವೃದ್ಧಿಯ ಸಂಕೇತವೂ ಕೂಡಾ. ಸಿದ್ಧರಾಮಯ್ಯ ಆಡಳಿತ ಅವಧಿಯಲ್ಲಿ ಕರ್ನಾಟಕ ರಾಜ್ಯ ಸಮಗ್ರ ಅಭಿವೃದ್ಧಿಯನ್ನು ಕಂಡಿತ್ತಿಲ್ಲದೆ ಅನ್ನ ಭಾಗ್ಯ, ಪಶುಭಾಗ್ಯ ಯೋಜನೆ, ವಸತಿ ಯೋಜನೆ, ಮನಸ್ವಿನಿ, ಮಾತೃಪೂರ್ಣ, ವಿದ್ಯಾಸಿರಿ, ಶಾದಿ ಭಾಗ್ಯ, ಅನಿಲ ಭಾಗ್ಯ, ಅಂಗವಿಕಲ ವೇತನ ಹಾಗೂ ವೃದ್ದಾಪ್ಯವೇತನ, ಪುನರ್‌ಬೆಳಕು ಯೋಜನೆಗಳಂತಹ ಎಲ್ಲಾ ವರ್ಗಗಳಿಗೂ ಬೆಂಬಲ ನೀಡುವ ಯೋಜನೆಗಳನ್ನು ರೂಪಿಸಲಾಗಿತ್ತು ಎಂದು ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿಗಾಗಿ ಸ್ಮಾರ್ಟ್ ಗ್ರಾಪಂ, ನಗರಾಭಿವೃದ್ಧಿಗಾಗಿ ಸ್ಮಾಟ್ ಸಿಟಿ ಯೋಜನೆಯನ್ನು ರೂಪಿಸಿ ಗ್ರಾಮೀಣ ಹಾಗೂ ನಗರದ ಆಭಿವೃದ್ಧಿಗಾಗಿ ಸರಕಾರ ಹೆಚ್ಚಿನ ಆಧ್ಯತೆ ನೀಡಿತ್ತು. ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯ ದೃಢವಾದ ಬೆಳವಣಿಗೆಯನ್ನು ಕಂಡಿದೆ. ತನ್ನ ಎಲ್ಲಾ ಆರ್ಥಿಕ ಸುಧಾರಣೆಯಲ್ಲೂ ಏರಿಕೆಯನ್ನು ದಾಖಲಿಸಿದೆ. ದ.ಕ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಅಭಿವೃದ್ದಿೆ ಯೋಜನೆ ರೂಪಿಸಲಾಗಿತ್ತು ಎಂದರು.

ಜನಗಳ ಮಧ್ಯೆ ಹೋಗದೆ ಕೆಲಸವನ್ನು ಮಾಡದೆ ಇರುವವರು ಗೆಲ್ಲುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಿರುವಾಗ ಜನಸಾಮ್ಯಾನ್ಯರ ಮಧ್ಯೆ ಇದ್ದು ಕೆಲಸ ಮಾಡಿದ, ಸಚಿವ ಸ್ಥಾನದ ಅವಧಿಯಲ್ಲಿ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ದ ನನ್ನನ್ನು ಕ್ಷೇತ್ರದ ಜನತೆ ಬೆಂಬಲಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಮೋದಿ ಅಲೆಯಲ್ಲಿ ಗೆದ್ದವರು ಹೆಸರನ್ನು ಉಳಿಸಿಕೊಳ್ಳಲಿಲ್ಲ. ಮೋದಿಯೂ ದೇಶದ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಅವರು ಟೀಕಿಸಿದರು.

ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಮತ್ತು ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X