Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಣಾಳಿಕೆಗಳಲ್ಲಿ ನೀರು-ಪರಿಸರ ಕಡೆಗಣನೆ:...

ಪ್ರಣಾಳಿಕೆಗಳಲ್ಲಿ ನೀರು-ಪರಿಸರ ಕಡೆಗಣನೆ: ಜಲತಜ್ಞ ರಾಜೇಂದ್ರ ಸಿಂಗ್

ವಾರ್ತಾಭಾರತಿವಾರ್ತಾಭಾರತಿ15 April 2019 11:29 PM IST
share

ಬೆಂಗಳೂರು, ಎ.15: ಲೋಕಸಭಾ ಚುನಾವಣೆ ನಿಮ್ಮಿತ್ತ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ದೋಷಪೂರಿತ ಅಭಿವೃದ್ಧಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆಯೇ ಹೊರತು ಜನರ ಮೂಲಭೂತ ಅವಶ್ಯಕತೆಗಳಾದ ನೀರು ಮತ್ತು ಪರಿಸರ ಅಂಶಗಳನ್ನು ಕಡೆಗಣಿಸಿದ್ದಾರೆ ಎಂದು ಜಲತಜ್ಞ ರಾಜೇಂದ್ರ ಸಿಂಗ್ ಆರೋಪಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಕೇವಲ ಮತ ಪಡೆಯುವ ಉದ್ದೇಶದಿಂದ ಪ್ರಣಾಳಿಕೆಯಲ್ಲಿ ಅಭಿವೃದ್ಧಿಯಲ್ಲದ ಅಂಶಗಳನ್ನು ಸೇರಿಸಿದ್ದಾರೆ. ಆದರೆ ರಾಜಕೀಯ ನಾಯಕರು ಜನರ ನಡುವೆ ಬೆರೆತು ಅವರ ಸಮಸ್ಯೆಗಳನ್ನು ಚರ್ಚಿಸಿ, ಮೂಲಭೂತ ಅವಶ್ಯಕತೆಗಳನ್ನು ಪೂರೈಸಬೇಕೇ ಹೊರತು, ಕೇವಲ ಚುನಾವಣೆಯ ಉದ್ದೇಶದಿಂದ ಪ್ರಣಾಳಿಕೆ ಬಿಡುಗಡೆ ಮಾಡಿ ಮತಯಾಚನೆ ಮಾಡುವುದು ಸರಿಯಾದ ನಡೆಯಲ್ಲ ಎಂದು ಹೇಳಿದರು.

ನೀರು ಮತ್ತು ಪರಿಸರ ಎಲ್ಲರ ಮೂಲಭೂತ ಅವಶ್ಯಕತೆ ಆಗಿರುವುದರಿಂದ ರಾಜಕೀಯ ಪಕ್ಷಗಳು ಮೊದಲು ಅದರ ಬಗ್ಗೆ ಗಮನ ಹರಿಸಿ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಕೊಳ್ಳುವಂತೆ ನಾವು ‘ಜೈ ಜನ್ ಜೋಡೋ ಆಂದೋಲನ’ವನ್ನು ಪ್ರಾರಂಭಿಸಿದ್ದೇವೆ ಎಂದರು.

ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ನೀರಿಗಾಗಿ ಬಡೆದಾಡುತ್ತಿದ್ದಾರೆ. ಆದ್ದರಿಂದ ನಾವು ನೀರಿನ ಹಂಚಿಕೆಯನ್ನು ಹೇಗೆ ನಿರ್ವಹಿಸಬೇಕು ಎಂದು ಯೋಚಿಸದೇ ರಾಜಕೀಯ ಪಕ್ಷಗಳು ಜಗಳ ತಂದಿಡುತ್ತಿದ್ದಾರೆ. ಚುನಾವಣೆಗಳನ್ನು ಗೆಲ್ಲುವುದಕೋಸ್ಕರ ಪ್ರಣಾಳಿಕೆ ಬಿಡುಗಡೆ ಮಾಡುತ್ತಾರೆಯೇ ಹೊರತು ಪ್ರಜೆಗಳ ಹಿತಾಸಕ್ತಿಯನ್ನು ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜನರು ನೀರಿನ ಬಗ್ಗೆ ಪ್ರಶ್ನೆ ಮಾಡಿ ಅಂತಹ ಅಂಶಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿ ಎಂದು ಕೇಳಬೇಕು. ಈ ನಿಟ್ಟಿನಲ್ಲಿ ನಾವು ಜನತಾ ಪ್ರಣಾಳಿಕೆಯನ್ನು ಜಾರಿಗೊಳಿಸಿದ್ದು ಈ ಚುನಾವಣೆಯಲ್ಲಿ ಮಾತ್ರವಲ್ಲದೇ ಮುಂದಿನ ಚುನಾವಣೆಯಲ್ಲೂ ಈ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ನುಡಿದರು.

ಜನತಾ ಪ್ರಣಾಳಿಕೆ ಅಂಶಗಳು

* ಪರಿಸರ ಸಂಕ್ಷರಣೆ ಹಾಗೂ ಹವಾಮಾನ ಬದಲಾವಣೆ ತಡೆಯುವುದು.

* ಜಲ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ತಗ್ಗಿಸುವುದು.

* ಪರಿಸರ ಮಾಲಿನ್ಯದ ವಿರುದ್ಧ ಕಠಿಣ ಕ್ರಮ.

* ನದಿಗಳನ್ನು ಪುನಶ್ಚೇತನಗೊಳಿಸುವಂತೆ ಉತ್ತೇಜನ.

* ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು.

* ಅರಣ್ಯ ರಕ್ಷಣೆಯ ಹೊಣೆಯನ್ನು ಸ್ಥಳೀಯರಿಗೆ ನೀಡುವುದು.

* ನದಿಗಳಿಗೆ ತ್ಯಾಜ್ಯವನ್ನು ಹಾಕದಂತೆ ತಡೆದು ದಡಗಳಲ್ಲಿ ಸಸ್ಯಗಳನ್ನು ವೃದ್ಧಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X