Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಡೆ ಬರಹದ ಮೂಲಕ ಮತದಾನ ಜಾಗೃತಿ...

ಗೋಡೆ ಬರಹದ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಭದ್ರಾವತಿಯ ಕಲಾವಿದ

ವಾರ್ತಾಭಾರತಿವಾರ್ತಾಭಾರತಿ16 April 2019 12:13 AM IST
share
ಗೋಡೆ ಬರಹದ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಭದ್ರಾವತಿಯ ಕಲಾವಿದ

ಶಿವಮೊಗ್ಗ, ಏ. 15: ಪ್ರಸ್ತುತ ಕಡ್ಡಾಯ ಮತದಾನದ ಕುರಿತಂತೆ ಜಿಲ್ಲಾಡಳಿತ ವ್ಯಾಪಕ ಜನಜಾಗೃತಿ ನಡೆಸುತ್ತಿದೆ. ಸ್ವತಃ ಜಿಲ್ಲಾಧಿಕಾರಿಗಳೇ ಮನೆ ಮನೆಗೆ ತೆರಳಿ ಮತದಾನ ಕಾರ್ಯದಲ್ಲಿ ಭಾಗಿಯಾಗುವಂತೆ ಮನವಿ ಮಾಡುತ್ತಿದ್ದಾರೆ. ಡಿ.ಸಿ.ಯವರ ಈ ಕ್ರಮದಿಂದ ಪ್ರೇರೇಪಿತರಾದ ಭದ್ರಾವತಿಯ ಚಿತ್ರ ಕಲಾವಿದರೋರ್ವರು, ಗೋಡೆ ಬರಹದ ಮೂಲಕ ಮತದಾನದ ಜಾಗೃತಿ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. 

ಭದ್ರಾವತಿ ಪಟ್ಟಣದ ಪೇಪರ್ ಟೌನ್ ಬಡಾವಣೆಯ ಗುರು ಭದ್ರಾವತಿಯವರೇ, ಗೋಡೆ ಬರಹದ ಮೂಲಕ ಮತ ಜಾಗೃತಿ ಮೂಡಿಸುತ್ತಿರುವ ಚಿತ್ರ ಕಲಾವಿದರಾಗಿದ್ದಾರೆ. ಕಳೆದ ಸುಮಾರು ನಾಲ್ಕೈದು ದಿನಗಳಿಂದ ಇವರು ಭದ್ರಾವತಿ ತಾಲೂಕಿನ 40 ಕ್ಕೂ ಅಧಿಕ ಗ್ರಾಮಗಳಲ್ಲಿ ಗೋಡೆ ಬರಹದ ಮೂಲಕ ಮತ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. 

'ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‍ರವರು ಮತದಾನ ಜಾಗೃತಿಗೆ ಸಂಬಂಧಿಸಿದಂತೆ, ನಾಗರಿಕರ ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯ ನಡೆಸುತ್ತಿದ್ದಾರೆ. ಮತದಾನದಲ್ಲಿ ಜಿಲ್ಲೆಯು ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಬೇಕೆಂಬ ಸದುದ್ದೇಶ ಅವರದ್ದಾಗಿದೆ. ಡಿ.ಸಿ.ಯವರ ಈ ಕ್ರಮವು ತಮ್ಮ ಗಮನ ಸೆಳೆಯಿತು. ಅವರ ಈ ಕಾರ್ಯಕ್ಕೆ ಬೆಂಬಲವಾಗಿ ತಾವು ಕೂಡ ಏನಾದರೂ ಜಾಗೃತಿ ಅಭಿಯಾನ ನಡೆಸಬೇಕೆಂಬ ಮಹಾದಾಸೆ ಉಂಟಾಯಿತು. ಅದರಂತೆ ತಮ್ಮ ಸ್ನೇಹಿತ ಕರೀಗೌಡರವರ ಜೊತೆಗೂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತದಾನದ ಮಹತ್ವದ ಕುರಿತಾದ ಘೋಷಣೆಗಳನ್ನು ಗೋಡೆಗಳ ಮೇಲೆ ಬರೆಯುತ್ತಿದ್ದೆನೆ. ಸುಮಾರು 100 ಕ್ಕೂ ಅಧಿಕ ಗೋಡೆ ಬರಹಗಳನ್ನು ಬರೆದಿದ್ದು, ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಗುರು ಭದ್ರಾವತಿಯವರು ಮಾಹಿತಿ ನೀಡಿದ್ದಾರೆ. 

ಬಸ್ ನಿಲ್ದಾಣ ಮತ್ತಿತರ ಸಾರ್ವಜನಿಕ ಕಟ್ಟಡಗಳ ಮೇಲೆ ಈ ಘೋಷಣೆಗಳನ್ನು ಬರೆಯುತ್ತಿದ್ದೇನೆ. ಈ ವೇಳೆ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಎಚ್ಚರವಹಿಸುತ್ತಿದ್ದೇನೆ. ಜೊತೆಗೆ ಖಾಸಗಿ ವ್ಯಕ್ತಿಗಳಿಗೆ ಸೇರಿದ ಕಟ್ಟಡಗಳ ಮೇಲೆ ಘೋಷಣೆಗಳನ್ನು ಬರೆಯುವುದಿಲ್ಲ. ಸದರಿ ಕಟ್ಟಡದವರು ಅನುಮತಿ ನೀಡಿದರೆ ಮಾತ್ರ, ಘೋಷಣೆಗಳನ್ನು ಬರೆಯುತ್ತೇನೆ ಎಂದು ತಿಳಿಸಿದ್ದಾರೆ. 

'ಮತದಾನ ಪವಿತ್ರ ಕಾರ್ಯ', 'ಮತದಾನ ಮಾಡುವವರೇ ಮಹಾಶೂರ', 'ಮತದಾನ ನಮ್ಮ ಹಕ್ಕು', 'ಕಡ್ಡಾಯವಾಗಿ ಮತ ಹಾಕಿ..' ಎಂಬಿತ್ಯಾದಿ ಘೋಷಣೆಗಳನ್ನು ಬರೆಯುತ್ತಿದ್ದೇನೆ. ತಮ್ಮ ಸ್ವಂತ ವೆಚ್ಚದಲ್ಲಿಯೇ ಇದಕ್ಕೆ ಅಗತ್ಯವಾದ ಫೈಂಟ್ ಮತ್ತೀತರ ಸಾಮಗ್ರಿಗಳನ್ನು ಖರೀದಿಸಿದ್ದೇನೆ' ಎಂದು ಇದೇ ಸಂದರ್ಭದಲ್ಲಿ ಗುರು ಭದ್ರಾವತಿರವರು ಮಾಹಿತಿ ನೀಡುತ್ತಾರೆ. 

ಲಿಮ್ಕಾ ದಾಖಲೆಗೆ ಸೇರಿದ್ದ ಬ್ಯಾನರ್
2006 ರಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ಎನ್‍ಇಎಸ್ ಮೈದಾನ ಆವರಣದಲ್ಲಿ ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಬರಹ-ಚಿತ್ರವಿದ್ದ 400 ಅಡಿ ಉದ್ದದ ಬ್ಯಾನರ್ ಅನ್ನು ತಾನು ಹಾಕಿದ್ದೆ. 2008 ರಲ್ಲಿ ಈ ಬ್ಯಾನರ್ ಲಿಮ್ಕಾ ದಾಖಲೆಗೆ ಸೇರ್ಪಡೆಯಾಗಿತ್ತು. ಅತೀ ಉದ್ದವಾದ ಬ್ಯಾನರ್ ಎಂಬ ಖ್ಯಾತಿಗೆ ಪಾತ್ರವಾಗಿತ್ತು' ಎಂದು ಗುರು ಭದ್ರಾವತಿಯವರು ಮಾಹಿತಿ ನೀಡುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X