ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ.19ರಂದು ಉಪ ಚುನಾವಣೆ
ಡಾ.ಉಮೇಶ್ ಜಾಧವ್
ಬೆಂಗಳೂರು, ಎ.16: ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ (ಎಸ್ಸಿ ಮೀಸಲು) ಕ್ಷೇತ್ರದ ಉಪ ಚುನಾವಣೆ ಮೇ.19ಕ್ಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಎಪ್ರಿಲ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎ.29 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಎ.30ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 2ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.
ಮೇ 19ಕ್ಕೆ ಮತದಾನ ನಡೆಯಲಿದ್ದು, ಮೇ 23ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
Next Story