Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಲೋಕಸಭಾ ಚುನಾವಣೆ: ಅಭ್ಯರ್ಥಿಗಳ...

ದ.ಕ. ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ವೇದಿಕೆ ಸಿದ್ಧ

ಮತದಾರರಲ್ಲಿ ಸಂಭ್ರಮ- ಅಭ್ಯರ್ಥಿಗಳಲ್ಲಿ ತಳಮಳ

ವಾರ್ತಾಭಾರತಿವಾರ್ತಾಭಾರತಿ17 April 2019 6:12 PM IST
share
ದ.ಕ. ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ವೇದಿಕೆ ಸಿದ್ಧ

ಮಂಗಳೂರು, ಎ.17: ಲೋಕಸಭಾ ಚುನಾವಣೆ ಎಂಬುದು ಮತದಾರರ ಪಾಲಿಗೆ ಸಂಭ್ರಮದ ಪ್ರಜಾಪ್ರಭುತ್ವದ ಹಬ್ಬ. ದಕ್ಷಿಣ ಕನ್ನಡ ಜಿಲ್ಲೆಯ ಮತದಾರ ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಮತ ಚಲಾಯಿಸಲು ಸಿದ್ಧರಾಗಿದ್ದು, ಇದೇ ವೇಳೆ ಅಭ್ಯರ್ಥಿಗಳ ಮನದಲ್ಲಿ ತಳಮಳ ಆರಂಭವಾಗಿದೆ. ದ.ಕ. ಜಿಲ್ಲೆಯಲ್ಲಿ 13 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯವನ್ನು ಮತದಾರರು ಎ. 18ರಂದು ನಿರ್ಧರಿಸಲಿದ್ದಾರೆ.

ಎ. 16ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ಬಳಿಕ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು, ಸ್ಥಳೀಯ ನಾಯಕರು ಕೊನೆ ಕ್ಷಣದ ಪ್ರಯತ್ನ ವಾಗಿ ಮತದಾರರ ಮನೆಬಾಗಿಲಿಗೆ ತೆರಳಿ ಮತ ಯಾಚಿಸುವುದನ್ನು ಮುಂದುವರಿಸಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳ ನಡುವೆ ಈ ನೇರ ಸ್ಪರ್ಧೆ ಕಾಣುತ್ತಿದ್ದು, ಅಭ್ಯರ್ಥಿಗಳ ಪರ ಮನೆ ಮನೆ ಭೇಟಿಯ ಮತಯಾಚನೆ ಬಿರುಸಿನಿಂದ ನಡೆಯಿತು.

ದ.ಕ. ಜಿಲ್ಲೆಯಲ್ಲಿ ಒಟ್ಟು 17,24,460 ಮತದಾರರಿದ್ದು, ಈ ಪೈಕಿ 8,45,308 ಪುರುಷ ಮತದಾರರು ಮತ್ತು 8,79,050 ಮಹಿಳಾ ಮತದಾರರಾಗಿದ್ದಾರೆ. ಇತರೆ ಮತದಾರರು 102 ಮಂದಿ ಇದ್ದಾರೆ. ಎಂಟು ವಿಧಾನಸಭಾ ಕ್ಷೇತ್ರಗಳ 1861 ಮತಗಟ್ಟೆಗಳಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ.

ಮತದಾನ ಆರಂಭಕ್ಕೆ ಮೊದಲು 6 ಗಂಟೆಯಿಂದ 7 ಗಂಟೆಯವರೆಗೆ ಪ್ರತಿ ಮತಗಟ್ಟೆಗಳಲ್ಲಿ ಅಭ್ಯರ್ಥಿಗಳ ಏಜೆಂಟರ ಸಮ್ಮುಖ ಅಣಕು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಮೂಲಕ ಇವಿಎಂ, ವಿವಿಪ್ಯಾಟ್‌ಗಳು ಸಮರ್ಪಕವಾಗಿರುವುದನ್ನು ಖಾತರಿಪಡಿಸಲಾಗುತ್ತದೆ.

ಚುನಾವಣಾ ಪ್ರಕ್ರಿಯೆಗಾಗಿ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1800 ಭದ್ರತಾ ಸಿಬ್ಬಂದಿ ಹಾಗೂ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಕಾಂಗ್ರೆಸ್- ಬಿಜೆಪಿ ನಡುವಿನ ಹೋರಾಟ ಕಂಡು ಬರುತ್ತಿದೆ. ಕಾಂಗ್ರೆಸ್ ಬಿಜೆಪಿ ಸೇರಿ ಪ್ರಸ್ತುತ ಕ್ಷೇತ್ರದಲ್ಲಿ 13 ಮಂದಿ ಕಣದಲ್ಲಿದ್ದಾರೆ.

ನೇರ ಹಣಾಹಣಿಯಲ್ಲಿರುವ ಕಾಂಗ್ರೆಸ್, ಬಿಜೆಪಿಯ ಜತೆಗೆ ಎಸ್‌ಡಿಪಿಐ, ಬಿಎಸ್‌ಪಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ, ಹಿಂದೂಸ್ಥಾನ ಜನತಾ ಪಾರ್ಟಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, 7 ಮಂದಿ ಪಕ್ಷೇತರರಾಗಿ ರಾಜಕೀಯ ಭವಿಷ್ಯ ಬರೆಸಿಕೊಳ್ಳಲು ಚುನಾವಣಾ ಕಣದಲ್ಲಿದ್ದಾರೆ.

ಮತದಾರರ ನಡೆ: ಇವಿಎಂನಲ್ಲಿ ಭದ್ರ

ಕಳೆದ ಒಂದು ತಿಂಗಳಿನಿಂದ ಮತದಾರನ ಓಲೈಕೆಗಾಗಿ ವಿವಿಧ ರಾಜಕೀಯ ಪಕ್ಷಗಳು ಓಲೈಕೆಯಲ್ಲಿ ತೊಡಗಿದ್ದವು. ಇಂದು ಆ ಓಲೈಕೆಯ ಆಧಾರದ ಮೇಲೆ, ತಮ್ಮ ಬೇಡಿಕೆ, ನಿರೀಕ್ಷೆಗೆ ಅನುಗುಣವಾಗಿ ದ.ಕ. ಜಿಲ್ಲೆಯ ಪ್ರಜ್ಞಾವಂತ ಮತದಾರರ ಇವಿಎಂನಲ್ಲಿ ತಮ್ಮ ನಿರ್ಧಾರವನ್ನು ಬಟನ್ ಒತ್ತುವ ಮೂಲಕ ಸ್ಪಷ್ಟಪಡಿಸಲಿದ್ದಾರೆ. ಆಗಿರುವ ಅಭಿವೃದ್ಧಿ ಕಾರ್ಯಗಳು, ಆಗಬೇಕಾದ ಯೋಜನೆಗಳು, ನಾನು ಗೆದ್ದರೆ ಏನು ಮಾಡುವೆನೆಂಬ ಭರಪೂರ ಭರವಸೆಗಳನ್ನು ಈಗಾಗಲೇ ಅಭ್ಯರ್ಥಿಗಳು ನೀಡಿದ್ದಾರೆ. ಇವೆಲ್ಲವನ್ನು ಅರಿತುಕೊಂಡಿರುವ ಮತದಾರ ಸಮಗ್ರ ಅಭಿವೃದ್ಧಿಯ ನೆಲೆಯಲ್ಲಿ ಯಾರು ಯೋಗ್ಯರು ಎಂದರಿತು ತನ್ನ ಹಕ್ಕು ಚಲಾಯಿಸಲಿದ್ದಾನೆ. ಮತದಾರನ ಒಂದೊಂದು ಮತವೂ ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂಬುದು ಪ್ರಮುಖವಾದ ಅಂಶ.

ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು

ಗಡಿ ಭಾಗಗಳಿಂದ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ಸಂಭವಿಸುವುದನ್ನು ತಡೆಯಲು ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ನಡೆಸಿದೆ. ಪ್ರತಿ ಚೆಕ್ ಪೋಸ್ಟ್‌ನಲ್ಲಿ ಸಿಸಿಟಿವಿ ಕ್ಯಾಮರಾ ಇರುವುದರಿಂದ ಸಂಚಾರದ ಮೇಲೆ ನಿಗಾ ಇರಿಸಲಾಗಿದೆ. ಕೆಎಸ್‌ಆರ್‌ಪಿಯ 5 ತುಕಡಿ, ಮೂರು ಇಂಡೋ ಟಿಬೆಟ್  ಪೊಲೀಸ್ ತುಕಡಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಭದ್ರತೆಗಾಗಿ ಈಗಾಗಲೇ ನಿಯೋಜನೆಗೊಳಿಸಲಾಗಿದೆ.

ಮತದಾನಕ್ಕೆ ಸಂಬಂಧಿಸಿದ ದಾಖಲೆ ಇರಲಿ

ಮತದಾನಕ್ಕೆ ಹೊರಡುವ ಮೊದಲು ಸಂಬಂಧಪಟ್ಟ ಮತಗಟ್ಟೆಗಳನ್ನು ಮತದಾರರು ತಿಳಿದುಕೊಳ್ಳುವುದು ಒಳಿತು. ಮತದಾನಕ್ಕೆ ವೋಟರ್ ಸ್ಲಿಪ್ ದಾಖಲೆಯಾಗಿರುವುದಿಲ್ಲ. ಈಗಾಗಲೇ ಬಿಎಲ್‌ಒಗಳು ಮನೆಗಳಿಗೆ ಈ ವೆಟರ್ ಸ್ಲಿಪ್‌ಗಳನ್ನು ನೀಡಿರುತ್ತಾರೆ. ಮತದಾರರು ಮತದಾನದ ಸಂದರ್ಭ ತಮ್ಮ ಅಧಿಕೃತ ವೋಟರ್ ಐಡಿ (ಮತದಾರರ ಗುರುತಿನ ಚೀಟಿ), ಆಧಾರ್ ಕಾರ್ಡ್ ಸೇರಿದಂತೆ ಚುನಾವಣಾ ಆಯೋಗ ತಿಳಿಸಿರುವ ಇತರ ದಾಖಲೆಗಳಲ್ಲಿ ಒಂದನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಮಾತ್ರವಲ್ಲದೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನೂ ಮತ್ತೊಮ್ಮೆ ಮತಗಟ್ಟೆಗೆ ತೆರಳುವ ಮುನ್ನ ಖಾತರಿಪಡಿಸಿಕೊಳ್ಳಿ.

ಮತಗಟ್ಟೆಗೆ ಮೊಬೈಲ್ ಫೋನ್ ಒಯ್ಯುವಂತಿಲ್ಲ

ಮತದಾರರು ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಮತದಾರರು ಈ ಬಗ್ಗೆ ಗಮನ ಹರಿಸುವುದು ಸೂಕ್ತ. ಇಲ್ಲವಾದಲ್ಲಿ ವಿನಾ ಕಾರಣ ಭದ್ರತಾ ಸಿಬ್ಬಂದಿಗಳ ಜತೆ ವಾಗ್ವಾದಕ್ಕೆ ಕಾರಣವಾಗಬಹುದು. ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಚುನಾವಣಾ ಆಯೋಗದ ನಿಯಮಗಳನ್ನು ಪಾಲಿಸಿದರೆ ಶಾಂತಿಯುತ ಮತದಾನದಲ್ಲಿ ಮತದಾರರು ತಮ್ಮ ಜವಾಬ್ಧಾರಿಯನ್ನು ಪಾಲಿಸಿದಂತಾಗುತ್ತದೆ.

ಕಳೆದ ಬಾರಿಯ ದಾಖಲೆ ಮತದಾನವನ್ನು ಮೀರಿಸುವ ನಿರೀಕ್ಷೆ !

ಈ ಬಾರಿ ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ. ಏಕೆಂದರೆ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಜಾಗೃತಿಗೊಳಿಸುವ ಕಾರ್ಯವನ್ನು ಕಳೆದ ಬಾರಿಯಂತೆ ಈ ಬಾರಿಯೂ ನಡೆಸಲಾಗಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿಸುವ ಕಾರ್ಯ ನಡೆದಿದೆ. ಯುವ ಜನತೆ ಈ ಬಾರಿ ಹೆಚ್ಚು ಹುರುಪಿನಿಂದಿದ್ದು, ಮತ ಚಲಾವಣೆ ಸಹಜವಾಗಿಯೇ ಹೆಚ್ಚಾಗುವ ನಿರೀಕ್ಷೆ ಇದೆ. ಕಳೆದ ಬಾರಿ ಅಂದರೆ 2014ರ ಎಪ್ರಿಲ್ 17ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 76.67 ಮತದಾನದ ಮೂಲಕ ಜಿಲ್ಲೆಯಲ್ಲಿ ಮತದಾನದಲ್ಲಿ ಸಾರ್ವಕಾಲಿಕ ದಾಖಲೆಯಾಗಿ ಪರಿಗಣಿಸಲ್ಪಟ್ಟಿತ್ತು. ಇದೀಗ ಈ ಬಾರಿ ಈ ದಾಖಲೆಯನ್ನು ಮೀರಿ ಮತದಾನವಾಗುವ ನಿರೀಕ್ಷೆಯನ್ನು ಹೊಂದಲಾಗಿದೆ. ಕಳೆದ ಲೋಕಸಭಾ ಚುನಾವಣೆ ಯಲ್ಲಿ 15,64,114 ಮತದಾರರಲ್ಲಿ 11,96,600 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X