ಚುನಾವಣಾ ಅಕ್ರಮಗಳ ಮೇಲೆ ಆಯೋಗದ ಹದ್ದಿನಕಣ್ಣು: 81.90 ಕೋಟಿ ರೂ.ನಗದು, ಮದ್ಯ ವಶ
ಬೆಂಗಳೂರು, ಎ. 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಫ್ಲೆಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ಸ್ಕ್ವಾಡ್ಗಳು ಸೇರಿದಂತೆ ವಿವಿಧ ತಂಡಗಳು 16.36 ಕೋಟಿ ರೂ.ನಗದು, 63 ಕೋಟಿ ರೂ.ಮೊತ್ತದ ಮದ್ಯ ಸೇರಿದಂತೆ ಒಟ್ಟು 81.90 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ 95,423 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರ ಪರವಾನಿಗೆ ರದ್ದು ಮಾಡಲಾಗಿದೆ. 40,387 ಮಂದಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.
Next Story