ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತದಾನ
ಮೈಸೂರು,ಎ.18: ಮೈಸೂರು ತಾಲೂಕಿನ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತದಾನ ಮಾಡಿದರು. ತಮ್ಮ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ನವರ ಜೊತೆ ಗುರುವಾರ ಮತಗಟ್ಟೆಗೆ ಆಗಮಿಸಿದ ಅವರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.
ಸಿದ್ದರಾಮನಹುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 86 ರಲ್ಲಿ ಮತಚಲಾಯಿಸಿದರು. ಸಿದ್ದರಾಮಯ್ಯರನ್ನು ಕಂಡ ಗ್ರಾಮಸ್ಥರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು. ನಂತರ ಅವರ ಮನೆದೇವರು ಸಿದ್ದರಾಮೇಶ್ವರ ಸ್ವಾಮಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 14 ಕ್ಷೇತ್ರದಲ್ಲಿ ಮತದಾನ ನಡೆದಿದ್ದು, 10 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Next Story