Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಕೊಡಗು ಕ್ಷೇತ್ರ: ನನ್ನ ಗೆಲುವು...

ಮೈಸೂರು-ಕೊಡಗು ಕ್ಷೇತ್ರ: ನನ್ನ ಗೆಲುವು ನಿಶ್ಚಿತ- ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ20 April 2019 11:39 PM IST
share
ಮೈಸೂರು-ಕೊಡಗು ಕ್ಷೇತ್ರ: ನನ್ನ ಗೆಲುವು ನಿಶ್ಚಿತ- ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ವಿಶ್ವಾಸ

ಮೈಸೂರು,ಎ.20: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಮತದಾನವಾಗಿದ್ದು, ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಪ್ರದೇಶಗಳಿಗಿಂತ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಮತದಾನವಾಗಿದ್ದು, ಇದು ನನಗೆ ಅನುಕೂಲಕರವಾದ ವಾತಾವರಣವಿರುವುದಕ್ಕೆ ಸಾಕ್ಷಿ ಎಂದು ತಿಳಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಜತೆಗೆ, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಕೂಡ ಕೈಜೋಡಿಸಿದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಹುಣಸೂರು, ಪಿರಿಯಾಪಟ್ಟಣ್ಣ, ಚಾಮುಂಡೇಶ್ವರಿ, ಎನ್.ಆರ್.ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರಲಿದೆ. ಬಿಜೆಪಿಗೆ ಹೆಚ್ಚು ಅನುಕೂಲಕರ ಎನ್ನುವ ಕೆ.ಆರ್ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಮತದಾನ ಕುಂಠಿತವಾಗಿರುವುದು ಪಕ್ಷಕ್ಕೆ ಪೂರಕವಾಗಿದೆ ಎಂದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳಲ್ಲಿಯೂ ಹಲವಾರು ಆಕಾಂಕ್ಷಿಗಳಿದ್ದರು. ಅಭ್ಯರ್ಥಿ ಘೋಷಣೆ ನಂತರ ಎರಡು ಪಕ್ಷದ ಕಾರ್ಯಕರ್ತರು ಯಾವುದೇ ಬಂಡಾಯವಿಲ್ಲದೆ ಸಹಕರಿಸಿದ್ದು, ಅನಗತ್ಯ ಚರ್ಚೆ, ಸಂಘರ್ಷಕ್ಕೆ ಎಡೆಯಾಗದೆ ಮುಖಂಡರು ಎಚ್ಚರ ವಹಿಸಿದ್ದರು ಎಂದರು. ಇದು ನನ್ನ 6ನೇ ಲೋಕಸಭಾ ಚುನಾವಣೆಯಾಗಿದ್ದು, ಗ್ರಾಮೀಣ ಭಾಗದ ಮತದಾರರ ನಾಡಿ ಮಿಡಿತ ಬಲ್ಲೆ. ಮೇ 23 ರಂದು ನಿಶ್ಚಿತ ಶುಭ ಸುದ್ದಿಯೊಂದಿಗೆ ಭೇಟಿ ಮಾಡುವ ಆಶಾಭಾವವವನ್ನು ಅವರು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಆರ್.ಜಿ.ನರಸಿಂಹ ಅಯ್ಯಂಗಾರ್, ರಘು, ಎಂ.ರಮೇಶ್, ಈಶ್ವರ್ ಚಕ್ಕಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X