Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತ್ರಾಸಿಯಲ್ಲಿ ಸ್ವೀಪ್ ಮತದಾನ ಜಾಗೃತಿ...

ತ್ರಾಸಿಯಲ್ಲಿ ಸ್ವೀಪ್ ಮತದಾನ ಜಾಗೃತಿ ಅಭಿಯಾನ ಸಮಾಪನ

ವಾರ್ತಾಭಾರತಿವಾರ್ತಾಭಾರತಿ21 April 2019 9:52 PM IST
share
ತ್ರಾಸಿಯಲ್ಲಿ ಸ್ವೀಪ್ ಮತದಾನ ಜಾಗೃತಿ ಅಭಿಯಾನ ಸಮಾಪನ

ಗಂಗೊಳ್ಳಿ, ಎ.21: ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಆಶ್ರಯದಲ್ಲಿ ತಿಂಗಳುಗಳ ಕಾಲ ಜಿಲ್ಲೆಯ ಗ್ರಾಪಂ ಮಟ್ಟದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಶನಿವಾರ ತ್ರಾಸಿ ಕಡಲ ತೀರಲ್ಲಿ ವಿಶಿಷ್ಟವಾಗಿ ಸಮಾಪನಗೊಂಡಿತು.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧು ಬಿ.ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಪ್ರವಾಸೋದ್ಯಮ ಇಲಾಖೆಯ ಅನಿತಾ ಮತ್ತು ಜಿಲ್ಲಾ, ತಾಲೂಕು, ಗ್ರಾಪಂ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಇಲ್ಲಿ ಯಾವುದೇ ಸಭಾ ಕಾರ್ಯಕ್ರಮವಾಗಲಿ, ಭಾಷಣಗಳಾಗಲಿ ಇರಲಿಲ್ಲ. ಭಾಗವಹಿಸಿದ್ದ ಎಲ್ಲರೂ ಮತದಾನದ ಪಾವಿತ್ರ್ಯ ರಕ್ಷಿಸುವ ಪ್ರತಿಜ್ಞೆ ಸ್ವೀಕರಿಸಿದರು. ಪ್ರಮುಖರು ಬಲೂನ್‌ಗಳನ್ನು ಹಾರಿ ಬಿಡುವುದರ ಮೂಲಕ ಅಭಿಯಾನದ ಸಮಾಪನ ಘೋಷಿಸಿದರು. ಇದಕ್ಕೂ ಮೊದಲು ಗಾಯಕ ಗಣೇಶ ಗಂಗೊಳ್ಳಿ ಭಾವಗೀತೆ ಹಾಗೂ ಮತದಾನದ ಮಹತ್ವ ಸಾರುವ ಹಾಡುಗಳನ್ನು ಹಾಡಿದರು.

ಮರವಂತೆಯ ಕೊರಗ ತನಿಯ ಕಲಾತಂಡದ ಸದಸ್ಯರು ಡೋಲು ವಾದನ ಪ್ರಸ್ತುತ ಪಡಿಸಿದರು. ಕೋಟದ ಯಕ್ಷಪೀಠ ಯಕ್ಷಗಾನ ತಂಡ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಶ್ಯಾನುಭಾಗ್ ಅವರ ಪರಿಕಲ್ಪನೆಯಲ್ಲಿ ರೂಪುಗೊಂಡ ಮತದಾನ ವಿಜಯ ಕಿರು ಯಕ್ಷಗಾನ ಪ್ರದರ್ಶಿಸಿದರು. ಮಹಿಳೆಯರು ಮರಳ ದಂಡೆಯ ಮೇಲೆ ಎಪ್ರಿಲ್ 23 ಆಕೃತಿಯನ್ನು ರಚಿಸುವುದರ ಮೂಲಕ ಮತದಾನದ ದಿನವನ್ನು ನೆನಪಿಸಿದರು.

ಗಾಳಿಪಟ ಹಾರಾಟ, ಹಗ್ಗಜಗ್ಗಾಟ, ಚಮಚೆ-ನಿಂಬೆ ಓಟ ನಡೆದವು. ಮರಳ ದಂಡೆಯ ಮೇಲೆ ಮತದಾನದ ಮಹತ್ವ ಮತ್ತು ಎಲ್ಲ ಅರ್ಹ ಮತದಾರರು ತಪ್ಪದೆ ಮುಕ್ತ, ನಿರ್ಭೀತ ಮತ ಚಲಾಯಿಸುವ ಅಗತ್ಯವನ್ನು ಬಿಂಬಿಸುವ ಫಲಕಗಳನ್ನು ನೆಡಲಾಗಿತ್ತು. ಯಕ್ಷಗಾನ ಕಲಾವಿದರನ್ನು ಮತ್ತು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದವರನ್ನು ಗೌರವಿಸಲಾಯಿತು.

ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಶೇಷಶಯನ ಕಾರಿಂಜ, ತಾಪಂ ಕಾರ್ಯನಿರ್ವಹಣಾಧಿ ಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇತರ ಅಧಿಕಾರ ವರ್ಗದವರು ಉಪಸ್ಥಿತರಿದ್ದರು. ಪ್ರಶಾಂತ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X