Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಕೃತಕ ನೀರಿನ ಅಭಾವ...

ಮಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿ: ಜೆ.ಆರ್.ಲೋಬೊ ಆರೋಪ

ವಾರ್ತಾಭಾರತಿವಾರ್ತಾಭಾರತಿ22 April 2019 2:12 PM IST
share
ಮಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿ: ಜೆ.ಆರ್.ಲೋಬೊ ಆರೋಪ

ಮಂಗಳೂರು, ಎ.22: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯ ಕೃತಕ ಅಭಾವ ಸೃಷ್ಟಿಯಾಗಿದೆ. ನಿರಂತರ ನೀರು ಪೂರೈಕೆ ಮಾಡಲು ಸಾಕಾಗುವಷ್ಟು ನೀರು ತುಂಬೆ ಕಿಂಡಿ ಅಣೆಕಟ್ಟಿನಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನಗರದಲ್ಲಿ ನೀರು ಪೂರೈಕೆಯನ್ನು ವಾರದ ಕೆಲವು ದಿನಗಳಲ್ಲಿ ಸಂಪೂರ್ಣ ಸ್ಥಗಿತಗೊಳಿಸುವುದರಿಂದ ( ಏರ್ ಲಾಕ್) ನಿರ್ವಾತ ಪ್ರದೇಶದಲ್ಲಿ ಗಾಳಿ ತುಂಬಿ ನೀರು ಪೂರೈಕೆಗೆ ಸಮಸ್ಯೆಯಾಗುತ್ತದೆ ಆಗಿ ನೀರು ಪೂರೈಕೆಯಲ್ಲಿ ಮತ್ತಷ್ಟು ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆ ಕಾರಣದಿಂದ ನಿರಂತರ ನೀರು ಪೂರೈಕೆ ಮಾಡುವುದು ಸರಿಯಾದ ಕ್ರಮ. ತುಂಬೆಯಲ್ಲಿ ಈ ಹಿಂದೆ ಕೇವಲ 4 ಮೀಟರ್ ನೀರು ಸಂಗ್ರಹದ ಸಾಮರ್ಥ್ಯ ಇತ್ತು. ಈಗ 7 ಮೀಟರ್ ಎತ್ತರದ ಕಿಂಡಿ ಅಣೆಕಟ್ಟು ನಿರ್ಮಾಣವಾಗಿದೆ. 6 ಮೀಟರ್ ಎತ್ತರದವರೆಗೆ ನೀರು ಸಂಗ್ರಹಿಸಲು ಸಾಧ್ಯವಾಗುತ್ತದೆ. ಸದ್ಯ ಅಲ್ಲಿ 5.2 ಮೀಟರ್ ನೀರು ಸಂಗ್ರಹವಿದೆ. ಈ ಸಂದರ್ಭ ಮನಪಾ ವ್ಯಾಪ್ತಿಯ ಕೆಲವು ಎತ್ತರ ಪ್ರದೇಶಗಳನ್ನು ಹೊರತುಪಡಿಸಿ ಪ್ರತಿದಿನ ನೀರು ಪೂರೈಸಬಹುದಾಗಿದೆ. ಎತ್ತರ ಪ್ರದೇಶಕ್ಕೆ ತಾಂತ್ರಿಕ ಕಾರಣದಿಂದ ಪ್ರತೂ ಎರಡು ದಿನಗಳಿಗೆ ಒಂದು ಬಾರಿ ನೀರು ನೀಡಲು ಸಾಧ್ಯ. ಈ ಹಿಂದೆ ಇದಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದ ನೀರು ಸಂಗ್ರಹವಿದ್ದಾಗಲೂ ಜನರಿಗೆ ಕುಡಿಯುವ ನೀರನ್ನು ನೀಡಲಾಗುತ್ತಿತ್ತು ಎಂದು ಲೋಬೊ ವಿವರಿಸಿದರು.

ಮಂಗಳೂರು ಮನಪಾ ವ್ಯಾಪ್ತಿಯ ತೆರೆದ ಬಾವಿ, ಕೊಳವೆಬಾವಿಗಳ ದುರಸ್ತಿಯ ಬಗ್ಗೆಯೂ ಈ ಸಂದರ್ಭದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಎಂದು ಜೆ.ಆರ್.ಲೋಬೊ ಒತ್ತಾಯಿಸಿರದು.

* ಶಾಸಕರೇ ನೀರು ಪೂರೈಕೆ ನಿಮ್ಮ ಹೊಣೆಗಾರಿಕೆ:
ಮಂಗಳೂರು ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರು ಅಧಿಕಾರದಲ್ಲಿಲ್ಲ. ಕೇವಲ ಅಧಿಕಾರಿಗಳು ಬಿಟ್ಟರೆ ಶಾಸಕರು ಪ್ರದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಹಿಂದಿನ ಮನಪಾ ಸದಸ್ಯರನ್ನು ದೂರುವ ಬದಲು ಜನರಿಗೆ ನಿರಂತರ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಿ. ಅದು ಅವರ ಹೊಣೆಗಾರಿಕೆಯಾಗಿದೆ ಎಂದು ಜೆ.ಆರ್.ಲೋಬೊ ಒತ್ತಾಯಿಸಿದರು.

*2016ರಲ್ಲಿ ಪ್ರತಿದಿನ ಕೇವಲ ಒಂದು ಮೀಟರ್ ಎತ್ತರದಲ್ಲಿ ಮಾತ್ರ ನೀರು ಸಂಗ್ರಹವಾಗಿದ್ದಾಗ ಪ್ರತಿದಿನ ನೀರು ಪೂರೈಕೆ ಮಾಡಿದ್ದೇವೆ. ಈಗಿನ ಪರಿಸ್ಥಿತಿಯಲ್ಲಿ ಪ್ರತಿದಿನ ಜನರಿಗೆ ಕುಡಿಯುವ ನೀರು ನೀಡಬಹುದಾಗಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಇರುವ ಕಾರಣ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳದೆ ಹೋದರೆ ಮನಪಾ ವ್ಯಾಪ್ತಿಯ ಜನರೊಂದಿಗೆ ಮನಪಾ ಕಚೇರಿಗೆ ಮುತ್ತಿಗೆ ಹಾಕಬೇಕಾದೀತು ಎಂದು ಮಾಜಿ ಮೇಯರ್ ಹರಿನಾಥ್ ಎಚ್ಚರಿಕೆ ನೀಡಿದ್ದಾರೆ.

* ನೀರಿಗಾಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ:
ಮನಪಾ ವ್ಯಾಪ್ತಿಯಲ್ಲಿ ನಿರಂತರ ನೀರು ಪೂರೈಕೆ ಮಾಡಬಹುದಾಗಿದೆ. ಸದ್ಯ ನೀರನ್ನು ರೇಶನಿಂಗ್ ಮಾಡಬೇಕಾಗಿಲ್ಲ. ನಿರಂತರ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮೇಯರ್ ಶಶಿಧರ್ ಹೆಗ್ಡೆ ತಿಳಿಸಿದ್ದಾರೆ.

* ಎಎಂಆರ್ ಡ್ಯಾಂನಲ್ಲಿದ್ದ ನೀರು ಏನಾಯಿತು
ಎಎಂಆರ್ ಡ್ಯಾಂನಲ್ಲಿ ಪೂರ್ಣ ಪ್ರಮಾಣದ ನೀರಿದೆ ಎಂದು ತಿಳಿಸಿದ ಅಧಿಕಾರಿಗಳು ಒಂದು ದಿನದ ಹಿಂದೆ ಕೇವಲ 1.5 ಮೀಟರ್ ಮಾತ್ರ ನೀರಿದೆ ಎಂದು ಉತ್ತರ ನೀಡುತ್ತಾರೆ ..? ಹಾಗಾದರೆ ಅಲ್ಲಿದ್ದ ನೀರು ಎಲ್ಲಿ ಹೋಯಿತು. ಇದಕ್ಕೆ ಕಾರಣವಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಮದು ಮನಪಾ ಮಾಜಿ ಮೇಯರ್ ಮಾಹಾಬಲ ಮಾರ್ಲ ಒತ್ತಾಯಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ದಯಾನಂದ ಶೆಟ್ಟಿ, ನವೀನ್ ಡಿ ಸೋಜ, ಲ್ಯಾನ್ಸಿಲಾಟ್ ಪಿಂಟೋ, ಜೆಸಿಂತಾ, ಮುಹಮ್ಮದ್ ಕುಂಜತ್ತ ಬೈಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X