Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫರಂಗಿಪೇಟೆ: ಲೆವೆಲ್ ಕ್ರಾಸಿಂಗ್ ಬಳಿ...

ಫರಂಗಿಪೇಟೆ: ಲೆವೆಲ್ ಕ್ರಾಸಿಂಗ್ ಬಳಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 April 2019 11:14 PM IST
share
ಫರಂಗಿಪೇಟೆ: ಲೆವೆಲ್ ಕ್ರಾಸಿಂಗ್ ಬಳಿ ಪ್ರತಿಭಟನೆ

ಫರಂಗಿಪೇಟೆ, ಎ. 24: ಇಲ್ಲಿನ ಫರಂಗಿಪೇಟೆಯ ಲೆವೆಲ್‍ಕ್ರಾಂಸಿಂಗ್ ಸಂಪರ್ಕ ರಸ್ತೆಯ ಬಳಿ ರೈಲ್ವೇ ಹಳಿಯ ದುರಸ್ತಿಯ ಹಿನ್ನಲೆಯಲ್ಲಿ ತಾತ್ಕಲಿಕವಾಗಿ ರಸ್ತೆ ಮುಚ್ಚಲಾಗಿದೆ ಎಂದು ಸೂಚನಾ ಫಲಕ ಹಾಕಿ ಒಂದು ವಾರ ಕಳೆದರೂ ಇನ್ನೂ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ರಸ್ತೆ ಮುಕ್ತಗೊಳಿಸದ ಹಿನ್ನಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಲೆವೆಲ್ ಕ್ರಾಸಿಂಗ್ ಬಳಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ.

ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿ ರೈಲ್ವೇ ಇಲಾಖೆಯ ನಿರ್ಲಕ್ಷ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಫರಂಗಿಪೇಟೆಯಿಂದ ಕುಂಪಣಮಜಲು ಸಂಪರ್ಕಿಸುವ ರಸ್ತೆ ಮಧ್ಯೆ ರೈಲ್ವೇ ಲೆವೆಲ್‍ಕ್ರಾಸಿಂಗ್ ಇದ್ದು, ಇದನ್ನು ದಾಟಿಕೊಂಡು ಪ್ರತಿನಿತ್ಯ ನೂರಾರು ವಾಹನ ಗಳು, ಸಾವಿರಾರು ಸಂಖ್ಯೆಯಲ್ಲಿ ಆ ಭಾಗದ ಗ್ರಾಮಸ್ಥರು ಹೋಗುತ್ತಾರೆ. ರೈಲ್ವೇ ಹಳಿಯ ದುರಸ್ತಿಯ ಕಾರಣ ಮೂರು ದಿನಗಳ ಕಾಲ ತಾತ್ಕಲಿಕವಾಗಿ ರಸ್ತೆ ಸಂಚಾರವನ್ನು ಮುಚ್ಚುವುದಾಗಿ ಹೇಳಿದ ರೈಲ್ವೇ ಇಲಾಖೆ ವಾರ ಕಳೆದರೂ ವಾಹನ ಸಂಚಾರಕ್ಕೆ ತಡೆ ತೆರವುಗೊಳಿಸದಿರುವುದರಿಂದ ರಸ್ತೆ ಶಾಶ್ವತವಾಗಿ ಮುಚ್ಚುವ ಹುನ್ನಾರ ನಡೆಯುತ್ತಿದೆ ಎನ್ನುವ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಈ ರಸ್ತೆ ಕುಂಪಣಮಜಲು, ಮೇರೆಮಜಲು, ತುಪ್ಪೆಕಲ್ಲು, ಕೋಡಿಮಜಲು, ತೇವು ಮೊದಲಾದ ಸ್ಥಳಗಳಿಗೆ ಸಂಪರ್ಕ ಕೊಂಡಿಯಾಗಿದ್ದು, ಸುಮಾರು 2 ಸಾವಿರ ಕುಟುಂಬಗಳು ಇಲ್ಲಿ ವಾಸವಾಗಿವೆ. ರೈಲ್ವೇ ಇಲಾಖೆ ವಾಹನ ಸಂಚಾರವನ್ನು ನಿರ್ಬಂದಿಸಿರುವುದರಿಂದ ಈ ಭಾಗದ ಎಲ್ಲ ಜನರು ತೊಂದರೆ ಪಡು ವಂತಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಅಸುರಕ್ಷಿತ ಅಂಡರ್‍ಪಾಸ್ 

ಕಾಮಗಾರಿ ಮುಗಿಯುವವರೆಗೆ ಅಂಡರ್‍ಪಾಸ್ ಇರುವ ಬದಲಿ ರಸ್ತೆಯನ್ನು ಬಳಸುವಂತೆ ರೈಲ್ವೇ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ, ಈ ಅಂಡರ್‍ಪಾಸ್ ರಸ್ತೆಯನ್ನೇ ಶಾಶ್ವತಗೊಳಿಸುವ ಹುನ್ನಾರವನ್ನು ರೈಲ್ವೇ ಇಲಾಖೆ ಮಾಡಿದೆ ಎನ್ನುವ ಸಂಶಯ ಗ್ರಾಮಸ್ಥರಲ್ಲಿ ವ್ಯಕ್ತವಾಗಿದೆ. ಈ ಅಂಡರ್‍ಪಾಸ್ ಅಸುರಕ್ಷಿತವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಹಗಲು ಹೊತ್ತಿನಲ್ಲಿಯೇ ಈ ಅಂಡರ್‍ಪಾಸ್ ಮೂಲಕ ಹೋಗಲು ಭಯಪಡಬೇಕಾದ ಸ್ಥಿತಿ ಇದೆ. ಸಂಜೆಯ ಬಳಿಕವಂತೂ ಈ ರಸ್ತೆ ತೀವ್ರ ಅಸುರಕ್ಷಿತವಾಗಿದೆ. ಮಹಿಳೆಯರು ಮಕ್ಕಳು ಈ ಅಂಡರ್ ಪಾಸ್ ಮೂಲಕ ಹೋಗುವುದು ಅಸಾಧ್ಯ, ಮಳೆಗಾಲದಲ್ಲಿ ನೀರು ತುಂಬಿಕೊಂಡು ಜನರು ಹಾಗೂ ವಾಹನ  ಸಂಚರಿಸುವುದು ಸಾಧ್ಯವಿಲ್ಲ. ಅಲ್ಲದೆ ಈ ರಸ್ತೆಯೂ ವಾಹನ ಸಂಚಾರಕ್ಕೆ ಅಯೋಗ್ಯ ವಾಗಿದ್ದು  ರೈಲ್ವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ದುರಸ್ತಿ ಕಾರ್ಯವನ್ನು ಶೀಘ್ರ ಮುಗಿಸಿ ಲೆವೆಲ್‍ಕ್ರಾಸಿಂಗ್ ಮೂಲಕ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಮುಂದಿನ ಮೂರು ದಿನದೊಳಗಾಗಿ ಹಳಿ ದುರಸ್ತಿಕಾರ್ಯ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿಕೊಡುವುದಾಗಿ ರೈಲ್ವೇ ಇಲಾಖೆಯ ಇಂಜಿನಿಯರ್ ದೂರವಾಣಿಯ ಮೂಲಕ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲೀಡಿಯಾ ಪಿಂಟೋ ಪ್ರಮುಖರಾದ ಉಮರ್ ಫಾರೂಕ್, ಆಸೀಫ್ ಇಕ್ಬಾಲ್, ಹಾಶೀರ್ ಪೇರಿಮಾರ್, ರಿಯಾಝ್ ಕುಂಪಣಮಜಲು, ಝಾಹೀರ್ ಅಬ್ಬಾಸ್, ಇಕ್ಬಾಲ್ ಸುಜೀರ್, ಸುಕೇಶ್ ಶೆಟ್ಟಿ ತೇವು, ಇಬ್ರಾಹಿಂ ಕುಂಪಣಮಜಲು, ಪ್ರಕಾಶ್ಚಂದ್ರ ರೈ ದೇವಸ್ಯ, ಜಗ್ಗ ಕೋಡಿಮಜಲು, ಶರೀಫ್, ಸುಂದರಶೆಟ್ಟಿ ಕುಂಪಣಮಜಲು ಮೊದಲಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X