Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಮಹಾಪುರುಷರನ್ನು ಮೀರಿ...

ಅಂಬೇಡ್ಕರ್ ಮಹಾಪುರುಷರನ್ನು ಮೀರಿ ಬೆಳೆದವರು: ನ್ಯಾ.ಎಸ್.ಎನ್.ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ24 April 2019 11:59 PM IST
share

ಬೆಂಗಳೂರು, ಎ.24: ಬಡತನ ಹಾಗೂ ದಲಿತ ಜನಾಂಗದಲ್ಲಿ ಜನಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಸೇರಿ ಇನ್ನಿತರ ಮಹಾ ಪುರುಷರನ್ನು ಮೀರಿ ಬೆಳೆದವರು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಸತ್ಯನಾರಾಯಣ ಅಭಿಪ್ರಾಯಪಟ್ಟಿದ್ದಾರೆ. 

ಬುಧವಾರ ಹೈಕೋರ್ಟ್ ಸಭಾಂಗಣ-1ರಲ್ಲಿ ಬೆಂಗಳೂರು ವಕೀಲರ ಸಂಘ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೆ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧಿ ಸೇರಿ ಇನ್ನಿತರ ಮಹಾಪುರುಷರು ಮೇಲ್ಜಾತಿಗಳಲ್ಲಿ ಹಾಗೂ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳಲ್ಲಿ ಜನಿಸಿ ಈ ದೇಶಕ್ಕೆ ಬಹುದೊಡ್ಡ ಕೊಡುಗೆಗಳನ್ನು ನೀಡಿದ್ದಾರೆ. ಆದರೆ, ಅಂಬೇಡ್ಕರ್ ಅವರು ಕಡು ಬಡತನ, ದಲಿತ ಜನಾಂಗದಲ್ಲಿ ಜನಿಸಿ, ಆತ್ಮಸ್ಥೈರ್ಯವನ್ನೆ ತಮ್ಮ ಬಲವನ್ನಾಗಿ ಪರಿವರ್ತಿಸಿಕೊಂಡು ಈ ದೇಶಕ್ಕೆ ಸಂವಿಧಾನವನ್ನು ರಚಿಸಿ ಕೊಟ್ಟರು. ಹೀಗಾಗಿಯೆ ಇವರನ್ನು ಮಹಾ ಪುರುಷರನ್ನು ಮೀರಿ ಬೆಳೆದವರು ಎಂದರೆ ತಪ್ಪಾಗಲಾರದು ಎಂದು ಅಭಿಪ್ರಾಯಪಟ್ಟರು.

1891ರಲ್ಲಿ ಜನಿಸಿದ ಅಂಬೇಡ್ಕರ್ ಅವರು ಚುರುಕು ಬುದ್ಧಿವುಳ್ಳವರಾಗಿದ್ದರು. ಆದರೆ, ಆ ಕಾಲದಲ್ಲಿ ದಲಿತ ವರ್ಗ ಸೇರಿ ಇನ್ನಿತರ ಕೆಳ ಜಾತಿಯವರಿಗೆ ಓದಲು ಅವಕಾಶವಿರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಎಲ್ಲ ಸಮಸ್ಯೆಗಳನ್ನೂ ಮೆಟ್ಟಿ ನಿಂತು ಮಹಿಳೆಯರು, ದಲಿತರು ಸೇರಿ ಇನ್ನಿತರ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಇಡೀ ವಿಶ್ವಕ್ಕೆ ಬೆಳಕಾದರು. ಹೀಗಾಗಿ, ಇವರ ಜನ್ಮ ದಿನಾಚರಣೆಯನ್ನು ವಿಜೃಂಭಣೆಯಿಂದ ನಾವೆಲ್ಲರೂ ಆಚರಿಸೋಣ ಎಂದು ಕರೆ ನೀಡಿದರು.

ಹೆಣ್ಣು ಮಕ್ಕಳ ರಕ್ಷಣೆಗಾಗಿ ಹಿಂದು ಕೋಡ್ ಬಿಲ್ ಅನ್ನು ಜಾರಿಗೆ ತರಬೇಕೆಂದು ಅಂಬೇಡ್ಕರ್ ಅವರು ಹೋರಾಟವನ್ನು ನಡೆಸಿದಾಗ ಇವರ ಸಂಪುಟದ ಸಹೋದ್ಯೋಗಿಗಳು ಯಾರೂ ಇವರ ಪರವಾಗಿ ಧ್ವನಿ ಎತ್ತಲಿಲ್ಲ. ಹೀಗಾಗಿ, ಹಿಂದು ಕೋಡ್ ಬಿಲ್ ಲೋಕಸಭೆಯಲ್ಲಿ ಪಾಸಾಗಲಿಲ್ಲ. ಆದರೆ, ಅವರು ಮರಣ ಹೊಂದಿದ ಬಳಿಕ ಹಿಂದು ಕೋಡ್ ಬಿಲ್ ಅನ್ನು ಜಾರಿಗೆ ತರಲಾಯಿತು. ಈ ಎಲ್ಲ ಸಂಗತಿಗಳನ್ನು ನೋಡುತ್ತಿದ್ದರೆ ಅಂಬೇಡ್ಕರ್ ವಿರುದ್ಧ ಅದೆಷ್ಟು ಶಕ್ತಿಗಳು ಕೆಲಸ ಮಾಡುತ್ತಿದ್ದವು ಎನ್ನುವುದು ಈಗ ನಮ್ಮ ಅರಿವಿಗೆ ಬರುತ್ತಿದೆ ಎಂದು ಹೇಳಿದರು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮಾತನಾಡಿ, ದೇಶದಲ್ಲಿ ನೂರಾರು ಜಾತಿ ಹಾಗೂ ಧರ್ಮಗಳಿವೆ. ಆದರೆ, ಅಂಬೇಡ್ಕರ್ ಅವರು ಇವುಗಳೆಲ್ಲವನ್ನೂ ಸಂವಿಧಾನದಲ್ಲಿ ಅಳವಡಿಸಿ ಭಾರತವನ್ನು ಒಂದು ಸುಭದ್ರ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಿದರು ಎಂದು ಹೇಳಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ಅಂಬೇಡ್ಕರ್ ಅವರು ಎಲ್ಲರನ್ನೂ ಒಳಗೊಂಡ ಸಂವಿಧಾನವನ್ನು ಜಾರಿಗೆ ತಂದಿದ್ದಾರೆ. ಸದ್ಯ ನ್ಯಾಯಾಂಗದಲ್ಲಿ ಆರೋಪಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಸೂಕ್ತ ತನಿಖೆಯಾಗಲಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ, ಡಿ.ಸಿ.ಪರಮೇಶ್ವರಯ್ಯ, ಎಚ್.ಆರ್.ಅನಿತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X