Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀಲಂಕಾದಲ್ಲಿ ಸರಣಿ ಸ್ಫೋಟ ಹಿನ್ನೆಲೆ:...

ಶ್ರೀಲಂಕಾದಲ್ಲಿ ಸರಣಿ ಸ್ಫೋಟ ಹಿನ್ನೆಲೆ: ಸಾರ್ವಜನಿಕ ಸುರಕ್ಷತಾ ಕ್ರಮಕ್ಕೆ ದಾವಣಗೆರೆ ಎಸ್‍ಪಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 April 2019 6:44 PM IST
share
ಶ್ರೀಲಂಕಾದಲ್ಲಿ ಸರಣಿ ಸ್ಫೋಟ ಹಿನ್ನೆಲೆ: ಸಾರ್ವಜನಿಕ ಸುರಕ್ಷತಾ ಕ್ರಮಕ್ಕೆ ದಾವಣಗೆರೆ ಎಸ್‍ಪಿ ಸೂಚನೆ

ದಾವಣಗೆರೆ,ಎ.26: ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ದೇವಸ್ಥಾನಗಳು, ಮಸೀದಿಗಳು, ಚರ್ಚ್‍ಗಳು ಸೇರಿದಂತೆ ಹೆಚ್ಚು ಜನ ಸೇರುವಂತಹ ಸ್ಥಳಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆ ಸೇರಿದಂತೆ ಸೂಕ್ತ ಸಾರ್ವಜನಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಚೇತನ್ ಸೂಚನೆ ನೀಡಿದರು.

ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ ಕುರಿತು ಇಂದು ವಿವಿಧ ಸಮುದಾಯದ ಬಾಂಧವರೊಂದಿಗೆ ಚರ್ಚಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಭದ್ರತಾ ಕ್ರಮವಾಗಿ ದೇವಸ್ಥಾನ, ಚರ್ಚ್, ಮಸೀದಿ, ಪ್ರಾರ್ಥನಾ ಮಂದಿರಗಳು, ಬಸ್‍ನಿಲ್ದಾಣಗಳು, ಛತ್ರಗಳು, ಲಾಡ್ಜ್ ಗಳು ಸೇರಿದಂತೆ ಹೆಚ್ಚು ಜನ ಭೇಟಿ ನೀಡುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿಗಳನ್ನು ಅಳವಡಿಸಬೇಕು ಎಂದರು.

ಈ ರೀತಿ ವಿಧ್ವಂಸಕ ಕೃತ್ಯ ನಡೆಸುವವರು ಸಾಮಾನ್ಯವಾಗಿ ಬೇರೆಡೆಯಿಂದ ಬಂದು ಲಾಡ್ಜ್ ಗಳು ಅಥವಾ ಯಾವುದಾದರೂ ಧಾರ್ಮಿಕ ಛತ್ರಗಳಲ್ಲಿ ಉಳಿದುಕೊಳ್ಳಬಹುದಾದ್ದರಿಂದ ಯಾವುದೇ ಲಾಡ್ಜ್, ಹೋಟೆಲ್ ಮಾಲಕರು, ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರು ಹೀಗೆ ಉಳಿಯಲು ಬರುವವರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕು. ಹಾಗೂ ಅನುಮಾನ ಕಂಡು ಬಂದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಕರ್ನಾಟಕ ಸುರಕ್ಷತಾ ಕಾಯ್ದೆ ಪ್ರಕಾರ 100 ಜನಕ್ಕಿಂತ ಹೆಚ್ಚು ಜನರು ಸೇರುವಂತಹ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಿ ವೀಕ್ಷಿಸಬೇಕು. ಈ ಬಗ್ಗೆ ಈಗಾಗಲೇ ಕಲ್ಯಾಣಮಂಟಪಗಳು, ಕೆಎಸ್‍ಆರ್‍ಟಿಸಿ, ಹಾಸ್ಟೆಲ್‍ಗಳು ಮತ್ತು ಲಾಡ್ಜ್ ಗಳ ಮಾಲಕರಿಗೆ ತಿಳುವಳಿಕೆ ನೀಡಲಾಗಿದೆ ಎಂದರು.

ಇದೇ ರೀತಿಯಲ್ಲಿ ಧಾರ್ಮಿಕ ಸಂಸ್ಥೆಗಳು, ಮುಜರಾಯಿ ಇಲಾಖೆ, ವಕ್ಫ್, ದೇವಸ್ಥಾನ ಸಮಿತಿಗಳ ಮುಖಂಡರಿಗೆ ಇಂದು ಈ ಸಭೆ ಕರೆಯಲಾಗಿದ್ದು 100 ಮತ್ತು 500 ಜನಕ್ಕಿಂತ ಹೆಚ್ಚು ಜನರು ಭೇಟಿ ನೀಡಬಹುದಾದ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಲಾಡ್ಜ್ ಗಳಿಗೆ ತಂಗಲು ಬರುವ ವ್ಯಕ್ತಿಗಳ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆಯಬೇಕು. ಹಾಗೂ ಹೊರದೇಶದಿಂದ ಬರುವ ನಾಗರಿಕರ ಬಗ್ಗೆ ನಿಗದಿತ ಸಾಫ್ಟ್ ವೇರ್ ಪೋರ್ಟಲ್‍ನಲ್ಲಿ ವಿವರ ಭರ್ತಿ ಮಾಡಬೇಕು ಹಾಗೂ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. 

ಸಾಮಾನ್ಯವಾಗಿ ಧಾರ್ಮಿಕ ಕೇಂದ್ರಗಳಲ್ಲಿ ನಂಬಿಕೆ ಆಧಾರದಲ್ಲಿ ಎಲ್ಲ ಭಕ್ತರು, ಪ್ರವಾಸಿಗರಿಗೆ ಊಟ, ವಸತಿಗೆ ಅವಕಾಶ ನೀಡಲಾಗುತ್ತಿದೆ. ಇಂತಹ ಕಡೆಗಳಲ್ಲಿ ಉಳಿಯುವ ಸ್ಥಳದಲ್ಲಿಯೂ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಹಾಗೂ ಸಾರ್ವಜನಿಕ ಸುರಕ್ಷತೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಂಡು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಟಿ.ಜೆ.ಉದೇಶ್, ಗ್ರಾಮಾಂತರ ಡಿವೈಎಸ್‍ಪಿ ದೇವರಾಜ್, ಇತರೆ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X