Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 60ನೇ ದಿನಕ್ಕೆ ಮುಂದುವರೆದ ನ್ಯೂ ಮಿನರ್ವ...

60ನೇ ದಿನಕ್ಕೆ ಮುಂದುವರೆದ ನ್ಯೂ ಮಿನರ್ವ ಮಿಲ್ ಕಾರ್ಮಿಕರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ26 April 2019 9:50 PM IST
share
60ನೇ ದಿನಕ್ಕೆ ಮುಂದುವರೆದ ನ್ಯೂ ಮಿನರ್ವ ಮಿಲ್ ಕಾರ್ಮಿಕರ ಮುಷ್ಕರ

ಹಾಸನ,ಎ.26: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಹೊರವಲಯದ ಕೈಗಾರಿಕ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ವರ್ಕರ್ಸ್ ಯೂನಿಯನ್ ಕಾರ್ಮಿಕರು ಕಂಪನಿಯ ಮುಂದೆ ಹಮ್ಮಿಕೊಂಡಿರುವ ಅನಿರ್ಧಿಷ್ಟವಧಿ ಮುಷ್ಕರ 60ನೇ ದಿನಕ್ಕೆ ಮುಂದುವರೆದಿದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು, ರಾಜಕೀಯ ಮುಖಂಡರು ಬೆಂಬಲ ನೀಡಿ ಕಂಪನಿಯವರೊಂದಿಗೆ ಚರ್ಚಿಸಿದರೂ ಕಂಪನಿಯವರು ಇವರ ಬೇಡಿಕೆಗೆ ಸ್ಪಂದನೆ  ನೀಡದಿರುವುದಕ್ಕೆ ಕಾರ್ಮಿಕರು  ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ 60 ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಕುಳಿತಿದ್ದರೂ ಕಂಪನಿಯ ಯಾವುದೇ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ. ಈಗ ಕಂಪನಿಯವರು ನೀಡುತ್ತಿರುವ ಸಂಬಳದಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸಮಸ್ಯೆಗಳು ಹೆಚ್ಚಾಗುತ್ತಿವೆ. ನಮಗೆ ನ್ಯಾಯಯುತ ಸಂಬಳ ನೀಡಬೇಕು. ನಮ್ಮ ಬೇಡಿಕೆ ಈಡೇರಿವರೆಗೂ ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿದರು.

ಪ್ರತಿಭಟನೆ ಮಾಡುತ್ತಿರುವರ ಮೇಲೆ ಕ್ರಮ ಕೈಗೊಂಡು ವೇತನ ಕಡಿತಗೊಳಿಸಲಾಗುವುದು ಎಂದು ಕಂಪನಿಯ ಮುಂದೆ ನೋಟಿಸ್ ಅಂಟಿಸಿದ್ದಾರೆ. ಆದರೆ ಕಾರ್ಮಿಕರು ಒಗ್ಗಟ್ಟಿನಿಂದ ಇದ್ದು, ಯಾವುದಕ್ಕೂ ಹೆದರುವುದಿಲ್ಲ. ನಮಗೆ ಕೇರಳ ಮಾದರಿಯಲ್ಲಿ ಎನ್‍ಟಿಸಿ ವೇತನ ಪಾವತಿ ಮಾಡಬೇಕು. ಕೆಲಸಗಾರರನ್ನು ಖಾಯಂಗೊಳಿಸಬೇಕು. ವೇತನದ ಒಪ್ಪಂದ ಮತ್ತು ಕಾರ್ಮಿಕರ ಹಲವಾರು ಬೇಡಿಕೆಗಳಾದ 5 ವರ್ಷದ ವೇತನದ ಒಪ್ಪಂದದ ಬಗ್ಗೆ ಇದುವರೆಗೂ ಗಮನ ನೀಡಿರುವುದಿಲ್ಲ. 500 ಜನ ಕಾರ್ಮಿಕರಲ್ಲಿ ಇದುವರೆಗೂ 190 ಜನ ಕಾರ್ಮಿಕರನ್ನು ಮಾತ್ರ ಖಾಯಂ ಮಾಡಲಾಗಿದ್ದು, ಉಳಿದವರನ್ನು ಖಾಯಂ ಮಾಡಲು ಮುಂದಾಗಬೇಕು ಆಗ್ರಹಿಸಿದರು.

ಇಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಎಐಟಿಯುಸಿ ರಾಜ್ಯ ಮುಖಂಡ ವಿಜಯಭಾಸ್ಕರ್ ಮಾತನಾಡಿ, ಈಗಾಗಲೇ ಕಾರ್ಮಿಕರ ಬೇಡಿಕೆಗಳ ಬಗ್ಗೆ ಹಲವು ಬಾರಿ ಕಂಪನಿಯೊಂದಿಗೆ ಮಾತನಾಡಿ ವಿವರ ನೀಡಿದ್ದೇವೆ. ಅವರು ಯಾವುದೇ ಒಪ್ಪಂದಕ್ಕೆ ಬಾರದೆ ದಿನದೂಡುತ್ತಿದ್ದಾರೆ. ಇಂದು ಕೂಡ ಕಂಪನಿಯ ಮುಖ್ಯಸ್ಥರೊಂದಿಗೆ ಚರ್ಚಿಸಿದ್ದೇವೆ. ಬೇಡಿಕೆ ಈಡೇರಿಕೆ ಭರವಸೆ ಅಷ್ಟು ಸ್ಪಷ್ಟವಾಗಿ ನೀಡಿಲ್ಲ. ಕಂಪನಿಯವರು ನಮ್ಮ  ಹೋರಾಟಕ್ಕೆ ಸ್ಪಂದಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದರೆ ನಮಗೆ ನ್ಯಾಯ ಸಿಗುವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.

ಮುಷ್ಕರದಲ್ಲಿ ನ್ಯೂ ಮಿನರ್ವ ಮಿಲ್ ವರ್ಕರ್ಸ್ ಯೂನಿಯನ್‍ನ ಡೊಂಗ್ರೆ, ಪ್ರಧಾನ ಕಾರ್ಯದರ್ಶಿ ಮಧು, ಉಪಾಧ್ಯಕ್ಷ ಸಂತೋಷ್ , ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಲೋಕೇಶ್ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X