Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಂಪತಿಯನ್ನು ಮೇ 5ರೊಳಗೆ ಪಾಕಿಸ್ತಾನಕ್ಕೆ...

ದಂಪತಿಯನ್ನು ಮೇ 5ರೊಳಗೆ ಪಾಕಿಸ್ತಾನಕ್ಕೆ ಹಸ್ತಾಂತರಿಸಲು ಹೈಕೋರ್ಟ್ ಆದೇಶ

ವೀಸಾ ಅವಧಿ ಮುಗಿದರೂ ದೇಶದಲ್ಲಿ ನೆಲೆಸಿರುವ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ26 April 2019 9:53 PM IST
share
ದಂಪತಿಯನ್ನು ಮೇ 5ರೊಳಗೆ ಪಾಕಿಸ್ತಾನಕ್ಕೆ ಹಸ್ತಾಂತರಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಎ.26: ವೀಸಾ ಅವಧಿ ಮುಗಿದಿದ್ದರೂ ಇಲ್ಲಿಯೆ ನೆಲೆಸಿದ್ದ ಇಬ್ಬರು ಪಾಕಿಸ್ತಾನದ ಆರೋಪಿಗಳನ್ನು ಮೇ 5ರೊಳಗೆ ಅವರ ದೇಶಕ್ಕೆ ಹಸ್ತಾಂತರಿಸಲು ವಿದೇಶಾಂಗ ಇಲಾಖೆ, ಪಾಕಿಸ್ತಾನ ರಾಯಭಾರಿ ಕಚೇರಿ ಹಾಗೂ ಪರಪ್ಪನ ಅಗ್ರಹಾರ ಕಾರಾಗೃಹ ಅಧಿಕಾರಿಗೆ ಹೈಕೋರ್ಟ್ ಆದೇಶಿಸಿದೆ.

ಅಧೀನ ನ್ಯಾಯಾಲಯ ನೀಡಿರುವ ಶಿಕ್ಷೆಯ ಅವಧಿ ಕಡಿತ ಕೋರಿ ಪಾಕಿಸ್ತಾನದ ಕರಾಚಿ ಜಿಲ್ಲೆಯ ಚಕ್ರಫೋಟ್ ಪ್ರದೇಶದ ಪತಿ ಕಾಸೀಫ್ ಶಂಶುದ್ದೀನ್ ಮತ್ತು ಆತನ ಪತ್ನಿ ಕಿರಾಣ್ ಗುಲಾಮ್ ಅಲಿ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು.

ನ್ಯಾಯಪೀಠವು, ವೀಸಾ ಅವಧಿ ಮುಗಿದರೂ ಆರೋಪಿ ದಂಪತಿಗಳು ಅಕ್ರಮವಾಗಿ ಇಲ್ಲಿಯೆ ನೆಲೆಸಿದ್ದು, ಅವರಿಗೆ ಕಾರಾಗೃಹದಲ್ಲಿ ಜನರ ತೆರಿಗೆ ಹಣವನ್ನು ಖರ್ಚು ಮಾಡಿ ಸಾಕಲಾಗುತ್ತಿದೆ. ಅದೇ ಹಣವನ್ನು ಫುಟ್‌ಪಾತ್ ಮೇಲೆ ಬಿದ್ದು ಅನ್ನ ಇಲ್ಲದೆ ಸಾಯಿತ್ತಿರುವವರಿಗೆ ಹಾಕಿ ಅವರನ್ನು ಬದುಕಿಸಿದರೆ ಈ ಸಮಾಜವಾದರೂ ಆರೋಗ್ಯಯುತವಾಗಿ ಇರುತ್ತದೆ. ಹೀಗಾಗಿ, ಈ ಆರೋಪಿಗಳನ್ನು ನಾಳೆಯೆ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಹಸ್ತಾಂತರಿಸಿ ಎಂದು ಆದೇಶಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಅವರು, ಪಾಕಿಸ್ತಾನದ ಇಬ್ಬರೂ ಆರೋಪಿಗಳನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸುವ ಮೊದಲು ಹಲವು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದರ ಬಳಿಕವೇ ಇಬ್ಬರನ್ನೂ ಹಸ್ತಾಂತರಿಸಲು ಸಾಧ್ಯವಾಗುತ್ತದೆ ಎಂದು ಪೀಠಕ್ಕೆ ತಿಳಿಸಿದರು. ಸರಕಾರಿ ವಕೀಲ(ಪ್ಲೀಡರ್) ರಾಜಯ್ಯ ಹಾಜರಿದ್ದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು, ಮೇ 5ರೊಳಗೆ ಪಾಕಿಸ್ತಾನಕ್ಕೆ ಹಸ್ತಾಂತರಿಸಲು ವಿದೇಶಾಂಗ ಇಲಾಖೆ, ಪಾಕಿಸ್ತಾನದ ರಾಯಭಾರಿ ಕಚೇರಿ ಹಾಗೂ ಪರಪ್ಪನ ಅಗ್ರಹಾರ ಕಾರಾಗಹ ಅಧಿಕಾರಿಗೆ ಆದೇಶಿಸಿತು.

ಪ್ರಕರಣವೇನು: ಪಾಕಿಸ್ತಾನದ ಕರಾಚಿ ಜಿಲ್ಲೆಯ ಚಕ್ರಫೋಟ್ ನಿವಾಸಿ ಕಾಸೀಫ್ ಶಂಸುದ್ಧೀನ್ ಹಾಗೂ ಕರಾಚಿ ಜಿಲ್ಲೆಯವರೇ ಆದ ಕಿರಣ್ ಗುಲಾಮ್ ಅಲಿ ಬೆಂಗಳೂರಿಗೆ ಬಂದು ಮದುವೆಯಾಗಿದ್ದರು. ದಂಪತಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು. ಏತನ್ಮಧ್ಯೆ ವೀಸಾವಧಿ ಮುಗಿದ ನಂತರವೂ ದಂಪತಿ ಇಲ್ಲಿಯೆ ನೆಲೆಸಿದ್ದಾರೆ ಎಂಬ ಆರೋಪದ ಮೇಲೆ ಬನಶಂಕರಿ ಮತ್ತು ಕುಮಾರಸ್ವಾಮಿ ಲೇಔಟ್ ಠಾಣಾ ಪೊಲೀಸರು ದಂಪತಿಯನ್ನು ಬಂಧಿಸಿದ್ದರು. ಇಬ್ಬರ ವಿರುದ್ಧ ಐಪಿಸಿ ಹಾಗೂ ವಿದೇಶಿಯರ ನೋಂದಣಿ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಎರಡು ಪತ್ಯೇಕ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ನಗರದ 44ನೆ ಎಸಿಎಂಎಂ ನ್ಯಾಯಾಲಯ, ಎರಡೂ ಪ್ರಕರಣಗಳಲ್ಲಿ ಕ್ರಮವಾಗಿ 21 ಮತ್ತು 12 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ, ಎರಡೂ ಪ್ರಕರಣಗಳ ಶಿಕ್ಷೆಯನ್ನು ಪ್ರತ್ಯೇಕವಾಗಿಯೇ ಅನುಭವಿಸಬೇಕೆಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿರುವ ಅರ್ಜಿದಾರರು ನಾವು ಈಗಾಗಲೇ 21 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದೇವೆ. ಊರಿನಲ್ಲಿ ನಮಗೆ ವೃದ್ಧ ಪೋಷಕರು ಹಾಗೂ ತಂಗಿಯರು ಇದ್ದಾರೆ. ಅವರು ನಮ್ಮ ಬಿಡುಗಡೆಯನ್ನೇ ಕಾಯುತ್ತಿದ್ದಾರೆ. ಹೀಗಾಗಿ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಏಕಕಾಲದಲ್ಲಿ ಜಾರಿಗೆ ಬರುವಂತೆ ನಿರ್ದೇಶಿಸಬೇಕೆಂದು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X