Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ಪಿಒಎಸ್ ಯಂತ್ರಗಳ ಮೂಲಕ...

ರಾಜ್ಯಾದ್ಯಂತ ಪಿಒಎಸ್ ಯಂತ್ರಗಳ ಮೂಲಕ ಪಡಿತರ ವಿತರಣೆಗೆ ಆದೇಶ

ಚಿಕ್ಕಮಗಳೂರಿನ 84 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿಲ್ಲ..!

ವಾರ್ತಾಭಾರತಿವಾರ್ತಾಭಾರತಿ26 April 2019 10:55 PM IST
share
ರಾಜ್ಯಾದ್ಯಂತ ಪಿಒಎಸ್ ಯಂತ್ರಗಳ ಮೂಲಕ ಪಡಿತರ ವಿತರಣೆಗೆ ಆದೇಶ

ಚಿಕ್ಕಮಗಳೂರು, ಎ.26: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಪಡಿತರ ವಿತರಣಾ ಮಾಹಿತಿಯನ್ನು ತಂತ್ರಾಂಶದ ಮೂಲಕ ನಿರ್ವಹಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಮೇ ತಿಂಗಳೊಳಗೆ ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿಗಳು ಪಿಒಎಸ್ ಯಂತ್ರಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಮೇ ತಿಂಗಳಿನಿಂದ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳ ದಾಖಲಾತಿ ಮೂಲಕ ಪಡಿತರಗಳನ್ನು ವಿತರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.

ರಾಜ್ಯದಲ್ಲಿ ಒಟ್ಟು 19,979 ನ್ಯಾಯಬೆಲೆ ಅಂಗಡಿಗಳಿವೆ. ಈ ಪೈಕಿ ಎಪ್ರಿಲ್ ತಿಂಗಳವರೆಗೆ 19,157 ನ್ಯಾಯಬೆಲೆ ಅಂಗಡಿಗಳನ್ನು ಪಿಒಎಸ್ ನ್ಯಾಯಬೆಲೆ ಅಂಗಡಿಗಳನ್ನಾಗಿ ಪರಿವರ್ತಿಸಲಾಗಿದೆ. ರಾಜ್ಯದಲ್ಲಿ ಬಾಕಿ 822 ನ್ಯಾಯಬೆಲೆ ಅಂಗಡಿಗಳು ಪಿಒಎಸ್ ಯಂತ್ರಗಳನ್ನು ಹೊಂದಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 528 ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ 444 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳನ್ನು ಈಗಾಗಲೇ ಅಳವಡಿಸಲಾಗಿದೆ. 84 ನ್ಯಾಯಬೆಲೆ ಅಂಗಡಿಗಳಿಗೆ ಪಿಒಎಸ್ ಯಂತ್ರಗಳನ್ನು ಅಳವಡಿಸಬೇಕಿದೆ.

ಜಿಲ್ಲೆಯಲ್ಲಿ ಪಿಒಎಸ್ ಯಂತ್ರಗಳನ್ನು ಹೊಂದಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ ತಿಂಗಳಿನಿಂದ ಪಡಿತರಗಳನ್ನು ವಿತರಿಸಲಾಗುತ್ತದೆ. ಅಂತರ್ಜಾಲದ ಮೂಲಕ ಕಾರ್ಯನಿರ್ವಹಿಸುವ ಈ ಪಿಒಎಸ್ ಯಂತ್ರಗಳಲ್ಲಿ ಪಡಿತರ ಚೀಟಿದಾರರ ಕುಟುಂಬದ ಸದಸ್ಯರ ಪೈಕಿ ಯಾರಾದರೂ ಓರ್ವ ಸದಸ್ಯರು ತಮ್ಮ ಬೆರಳಿನ ಗುರುತು ನೀಡಿ ಪಡಿತರಗಳನ್ನು ಪಡೆಯುವ ವ್ಯವಸ್ಥೆ ಇದಾಗಿದ್ದು, ಅಂತರ್ಜಾಲದ ಮೂಲಕ ಪಿಒಎಸ್ ಯಂತ್ರಗಳು ಕಾರ್ಯನಿರ್ವಹಿಸುವುದರಿಂದ ಯಾವ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವ ಪಡಿತರ ಚೀಟಿದಾರ ಯಾವ ಪಡಿತರಗಳನ್ನು ಎಷ್ಟು ಪ್ರಮಾಣದಲ್ಲಿ ಪಡೆದಿದ್ದಾನೆಂಬುದು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಇಲಾಖಾಧಿಕಾರಿಗಳು ತಿಳಿದುಕೊಳ್ಳಲು ಸಾಧ್ಯವಾಗಲಿದೆ. ಇದರಿಂದಾಗಿ ಪಡಿತರ ಸಾಮಗ್ರಿಗಳ ಅಕ್ರಮ ಮಾರಾಟದಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂಬುದು ಈ ಯೋಜನೆಯ ಉದ್ದೇಶವಾಗಿದೆ.

ಪಿಒಎಸ್ ಯಂತ್ರಗಳು ಅಂತರ್ಜಾಲದ ಮೂಲಕ ಕಾರ್ಯನಿರ್ವಹಿಸುವದರಿಂದ ಎಲ್ಲ ನ್ಯಾಯಬೆಲೆ ಅಂಗಡಿಗಳು ಇಂಟರ್‍ನೆಟ್ ಹಾಗೂ ವಿದ್ಯುತ್ ಸಂಪರ್ಕ ಹೊಂದಿರಬೇಕು. ವಿದ್ಯುತ್ ಹಾಗೂ ಇಂಟರ್‍ನೆಟ್ ಸೌಲಭ್ಯ ಹೊಂದಿಲ್ಲದ ನ್ಯಾಯಬೆಲೆ ಅಂಗಡಿಗಳಿಗೆ ಈ ಸೌಲಭ್ಯಗಳ ಸಂಪರ್ಕ ಪಡೆಯಲು ಈಗಾಗಲೇ ಜಿಲ್ಲಾ ಆಹಾದ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿರುವ 444 ಪಿಒಎಸ್ ನ್ಯಾಯಬೆಲೆ ಅಂಗಡಿಗಳ ಪೈಕಿ ಬಹುತೇಕೆ ನ್ಯಾಯಬೆಲೆ ಅಂಗಡಿಗಳು ಲಭ್ಯವಿರುವ ಅಂತರ್ಜಾಲ ಹಾಗೂ ವಿದ್ಯುತ್ ಸೌಲಭ್ಯಗಳನ್ನು ಹೊಂದಿವೆ ಎಂದು ಜಿಲ್ಲಾ ಆಹಾರ, ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಹೇಶ್ವರಪ್ಪ ಪತ್ರಿಕೆಗೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿರುವ 528 ನ್ಯಾಯಬೆಲೆ ಅಂಗಡಿಗಳ ಪೈಕಿ 84 ನ್ಯಾಯ ಬೆಲೆ ಅಂಗಡಿಗಳು ಪಿಒಎಸ್ ಯಂತ್ರಗಳನ್ನು ಹೊಂದಿಲ್ಲ. ಈ 84 ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನಷ್ಟೇ ಯಂತ್ರಗಳನ್ನು ಅಳವಡಿಸಿಬೇಕಿದ್ದು, ಈ ಪೈಕಿ ಬಹುತೇಕ ನ್ಯಾಯಬೆಲೆ ಅಂಗಡಿಗಳು ಮೊಬೈಲ್ ಟವರ್‍ಗಳಿಲ್ಲದಂತಹ ಗುಡ್ಡಗಾಡು ಪ್ರದೇಶಗಳಲ್ಲಿವೆ. ಇಲ್ಲಿ ಪಿಒಎಸ್ ಯಂತ್ರಗಳನ್ನು ಅಳವಡಿಸಿದರೂ ಇಂಟರ್ ನೆಟ್ ಸಮಸ್ಯೆ ಹಾಗೂ ಸದಾ ಕಾಲ ವಿದ್ಯುತ್ ಸಮಸ್ಯೆ ಇರುತ್ತದೆ. ಪಿಒಎಸ್‍ಯಂತ್ರಗಳ ಕಾರ್ಯನಿರ್ವಹಣೆಗೆ ವಿದ್ಯುತ್ ಹಾಗೂ ಇಂಟರ್ ನೆಟ್ ಅತ್ಯಗತ್ಯವಾಗಿದ್ದು, ಕುಗ್ರಾಮಗಳಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರ ಅಳವಡಿಸಿದರೂ ವಿದ್ಯುತ್ ಹಾಗೂ ಇಂಟರ್ ನೆಟ್ ಸಮಸ್ಯೆಯಿಂದಾಗಿ ಬಡ ಪಡಿತರ ಚೀಟಿದಾರರು ತಮ್ಮ ಪಡಿತರಗಳಿಂದ ವಂಚಿತರಾಗುವ ಸಾಧ್ಯತೆ. ಈ ಸಮಸ್ಯೆಗೆ ಪರ್ಯಾಯ ವ್ಯವಸ್ಥೆಯನ್ನೂ ಇಲಾಖೆ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಎಸ್ ಯಂತ್ರಗಳಿಲ್ಲದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವುದು ಹೇಗೆ?
ಜಿಲ್ಲೆಯಲ್ಲಿ 84 ನ್ಯಾಯಬೆಲೆ ಅಂಗಡಿಗಳು ಪಿಒಎಸ್ ಯಂತ್ರಗಳನ್ನು ಹೊಂದಿಲ್ಲ. ಇಂತಹ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಮಸ್ಯೆ ಎದುರಾಗಿದೆ. ಇಂತಹ ನ್ಯಾಯಬೆಲೆ ಅಂಗಡಿಗಳ ಪಡಿತರ ಕಾರ್ಡುದಾರರು ತಮ್ಮ ಆಧಾರ್ ಕಾರ್ಡ್‍ಗೆ ನೋಂದಾಯಿಸಿದ ಮೊಬೈಲ್ ನಂಬರ್ ಗಳ ಮೂಲಕ ಐವಿಆರ್‍ಎಸ್ ಸಂದೇಶ ಕಳುಹಿಸಿದಲ್ಲಿ ಪ್ರತೀ ಗ್ರಾಹಕರಿಗೆ ನಿಗದಿಯಾದ ಪಡಿತರಗಳ ಮಾಹತಿಯುಳ್ಳ ಸಂದೇಶ ಬರಲಿದೆ. ಅದನ್ನು ನ್ಯಾಯಬೆಲೆ ಅಂಡಿಗಳ ಸಿಬ್ಬಂದಿಗೆ ತೋರಿಸಿ ಪಡಿತರ ಪಡೆಯಬಹುದಾಗಿದೆ. ಅಲ್ಲದೇ ಕೂಪನ್ ಪ್ರಾಂಚೈಸಿಗಳಲ್ಲಿ ಗ್ರಾಹಕರು ತಮ್ಮ ಪಡಿತರಗಳ ಕೂಪನ್ ಪಡೆದು ಅದನ್ನು ಆಹಾರ ನಿರೀಕ್ಷಕರ ಮೂಲಕ ಇಲಾಖೆಯ ತಂತ್ರಾಂಶಕ್ಕೆ ನೋಂದಾಯಿಸಿ ಪಡಿತರಗಳನ್ನು ಪಡೆಯಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ಮಹೇಶ್ವರಪ್ಪ ಪತ್ರಿಕೆಗೆ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಪಿಒಎಸ್ ನ್ಯಾಯಬೆಲೆ ಅಂಗಡಿಗಳು:
ಚಿಕ್ಕಮಗಳೂರು ತಾಲೂಕಿನಲ್ಲಿ ಒಟ್ಟು 115 ನ್ಯಾಯಬೆಲೆ ಅಂಗಡಿಗಳಿವೆ. ಈ ಪೈಕಿ 92 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿದ್ದು, 23 ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿಲ್ಲ. ಕಡೂರು ತಾಲೂಕಿನ 156 ನ್ಯಾಯಬೆಲೆ ಅಂಗಡಿಗಳ ಪೈಕಿ 156 ಅಂಗಡಿಗಳಲ್ಲೂ ಯಂತ್ರಗಳನ್ನು ಅಳವಡಿಸಲಾಗಿದೆ. ತರೀಕೆರೆ ತಾಲೂಕಿನ 89 ನ್ಯಾಯಬೆಲೆ ಅಂಗಡಿಗಳಿದ್ದು, 84 ಅಂಗಡಿಗಳಲ್ಲಿ ಯಂತ್ರಗಳನ್ನು ಅಳವಡಿಸಲಾಗಿದೆ. 5 ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿಲ್ಲ.  ಮೂಡಿಗೆರೆ ತಾಲೂಕಿನಾದ್ಯಂತ 67 ಅಂಗಡಿಗಳ ಪೈಕಿ 45ರಲ್ಲಿ ಪಿಒಎಸ್ ಯಂತ್ರಗಳಿವೆ. 22 ಕಡೆಗಳಲ್ಲಿ ಪಿಒಎಸ್ ಯಂತ್ರಗಳನ್ನು ಅಳವಡಿಸಬೇಕಿದೆ. ಕೊಪ್ಪ ತಾಲೂಕಿನ 47 ಅಂಗಡಿಗಳ ಪೈಕಿ 29ರಲ್ಲಿ ಯಂತ್ರಗಳಿದ್ದು, 18 ಕಡೆಗಳಲ್ಲಿ ಯಂತ್ರಗಳಿಲ್ಲ. ಶೃಂಗೇರಿ ತಾಲೂಕಿನಾದ್ಯಂತ 23 ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ 18 ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿದ್ದರೇ 5 ಕಡೆ ಯಂತ್ರಗಳಿಲ್ಲ. ಎನ್.ಆರ್.ಪುರ ತಾಲೂಕಿನ 31 ನ್ಯಾಯಬೆಲೆ ಅಂಗಡಿಗಳ ಪೈಕಿ 20 ಅಂಗಡಿಗಳಲ್ಲಿ ಯಂತ್ರಗಳಿದ್ದು, 11 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ಯಂತ್ರಗಳಿಲ್ಲ.

ಜಿಲ್ಲೆಯಲ್ಲಿ ಪಡಿತರ ವಿತರಣಾ ವ್ಯವಸ್ಥೆ ಸಮರ್ಪಕವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರು ಕೊಳ್ಳದೇ ಉಳಿಯುವ ಅಕ್ಕಿಯನ್ನು ದಿನಸಿ ಅಂಗಡಿಗಳಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಇದುವರೆಗೂ ದೂರುಗಳು ಬಂದಿಲ್ಲ. ದೂರುಗಳು ಬಂದಲ್ಲಿ ಅಗತ್ಯ ಕಾನೂನು ಕ್ರಮಕೈಗೊಳ್ಳಲಾಗುವುದು.
-  ಮಹೇಶ್ವರಪ್ಪ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X