Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಚಿಣ್ಣರಮೇಳ: ರಾಜ್ಯಮಟ್ಟದ ಮಕ್ಕಳ...

ಆಳ್ವಾಸ್ ಚಿಣ್ಣರಮೇಳ: ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ26 April 2019 11:04 PM IST
share
ಆಳ್ವಾಸ್ ಚಿಣ್ಣರಮೇಳ: ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ

ಮೂಡುಬಿದಿರೆ: ಮಕ್ಕಳ ಜೀವನ ಯಾಂತ್ರೀಕೃತವಾಗಬಾರದು. ಬದುಕು ಎಂದರೆ ಅವರಿಗೆ ಕೇವಲ ಕಾಂಕ್ರೀಟು ಕಾಡು ಆಗಬಾರದು. ಅದರ ಬದಲು ಅವರಲ್ಲಿ ಜೀವನೋತ್ಸಾಹ ತುಂಬಲು ಪ್ರಕೃತಿಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಮಕ್ಕಳಿಗೆ ಜಲ, ಪರಿಸರದ ಬಗ್ಗೆ ಶಿಕ್ಷಣದಲ್ಲಿ ಮಾತ್ರವಲ್ಲ, ಮನೆಯಲ್ಲಿ ಕೂಡ ಪೋಷಕರು ತಿಳಿ ಹೇಳಬೇಕು. ಬೇಸಿಗೆ ಶಿಬಿರಗಳಿಂದ ಪ್ರಕೃತಿ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕೆಂದು ಪರಿಸರವಾದಿ ದಿನೇಶ್ ಹೊಳ್ಳ ಹೇಳಿದರು.

ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಹತ್ತು ದಿನಗಳು ನಡೆಯುವ ಚಿಣ್ಣರಮೇಳ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅತಿಥಿಗಳೆಲ್ಲರೂ ಚರ್ಮವಾದ್ಯ ನುಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಇನ್ನೋರ್ವ ಮುಖ್ಯ ಅತಿಥಿ ಕುದ್ರೋಳಿ ಗಣೇಶ್ ಮಾತನಾಡಿ, ಕೇವಲ ಶಿಕ್ಷಣದಿಂದ ಜೀವನೋಲ್ಲಾಸ ಲಭಿಸದು. ಅದರ ಒಟ್ಟಿಗೆ ಕಲೆ, ಸಂಸ್ಕೃತಿ, ಕ್ರೀಡೆಯಂತಹ ಕ್ರೀಯಾಶೀಲತೆಯನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು. ಮಕ್ಕಳಲ್ಲಿರುವ ಸುಪ್ತ ಪ್ರತಿಭೆ, ಕ್ರೀಯಾಶೀಲತೆಯ ಗುಣವನ್ನು ಹೊರಹೊಮ್ಮಿಸಿ, ವ್ಯಕ್ತಿತ್ವವನ್ನು ಬೆಳಗಿಸುವ ಕೆಲಸವನ್ನು ಬೇಸಿಗೆ ಶಿಬಿರಗಳ ಮೂಲಕ ಮಾಡಬಹುದು ಎಂದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆವಹಿಸಿ ಮಾತನಾಡಿ, ಪರಿಣಿತ ತಂಡದಿಂದ ನಡೆಯುವ ಆಳ್ವಾಸ್ ಚಿಣ್ಣರಮೇಳ ಇತರ ಚಿಣ್ಣರ ಮೇಳಕ್ಕಿಂತ ಭಿನ್ನವಾಗಿ ಆಯೋಜಿಸಲಾಗಿದೆ. ಪರಿಣಿತ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳಿಂದ ಕಲಾತ್ಮಕವಾಗಿ ಶಿಬಿರ ಮೂಡಿಬರಲಿದೆ. ಬೇಸಿಗೆ ಶಿಬಿರಗಳನ್ನು ಚಿಣ್ಣರು ಸದುಪಯೋಗ ಮಾಡಿಕೊಂಡರೇ ಶಿಬಿರಗಳ ಮೂಲಕವು ಮನಸ್ಸು ಕಟ್ಟಲು ಸಾಧ್ಯ. ಶಿಕ್ಷಣ, ಆರೋಗ್ಯ ಹಾಗೂ ಸಧ್ಯ ಬೇಸಿಗೆ ಶಿಬಿರಗಳು ಕೂಡ ವ್ಯಾಪಾರಿಕರಣವಾಗುತ್ತಿರುವ ಇಂದಿನ ಕಾಲದಲ್ಲಿ, ಇದರಿಂದ ಹೊರತಾಗಿ ಕಲೆ, ಕ್ರೀಡೆ, ಸಂಸ್ಕøತಿ, ಗುಣಮಟ್ಟದ ಶಿಕ್ಷಣ ನೀಡುವಂತಹ ಕೆಲಸ ನಾವು ಮಾಡುತ್ತಿದ್ದೇವೆ. ವಿದ್ಯಾರ್ಥಿಗಳ ಬುದ್ಧಿಮತ್ತೆ ಅವರ ಪ್ರರತಿಭೆಗಳಿಗೆ ಆಳ್ವಾಸ್ ಅವಕಾಶ ಮಾಡಿಕೊಡುತ್ತಿದ್ದು, ಬೇಸಿಗೆ ಶಿಬಿರ ಕೂಡ ಈ ನಿಟ್ಟಿನಲ್ಲಿ ನಡೆಯಲಿದೆ ಎಂದರು.

ಶಿಬಿರ ಮುಖ್ಯ ಸಂಚಾಲಕ ಜೀವನ್‍ರಾಮ್ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕ ಭಾಸ್ಕರ್ ನೆಲ್ಯಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X